Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು:ಪ್ರಿಯಾಂಕಾ ಜಾರಕಿಹೊಳಿ

ಯಮಕನಮರಡಿ: “ಮಹಿಳೆಯರು ಕಾಯ್ದೆ, ಕಾನೂನುಗಳನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಹಿಂದೇಟು ಹಾಕಬಾರದು” ಎಂದು ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಗ್ರಾಮದಲ್ಲಿ ಸಂಜೀವಿನಿ ಗ್ರಾಮ ಪಂಚಾಯ್ತಿ ಮಟ್ಟದ ಒಕ್ಕೂಟಗಳು, ಯಮಕನಮರಡಿ, ಹತ್ತರಗಿ ಹಾಗೂ ಜಿಲ್ಲಾ ಸ್ತ್ರೀ ಒಕ್ಕೂಟ ಮತ್ತು ಹುಕ್ಕೇರಿ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಅಮೇರಿಕಾದಲ್ಲಿ 1914ರಲ್ಲಿ …

Read More »

ರಸ್ತೆ ಕಾಮಗಾರಿ ಪರಿಶೀಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ

ಬೆಳಗಾವಿ: ತಾಲೂಕಿನ ಕಾಕತಿ ಗ್ರಾಮದಲ್ಲಿ 70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಶುಕ್ರವಾರ ಪರಿಶೀಲಿಸಿದರು. “ಗುಣಮಟ್ಟದ ಕಾಮಗಾರಿ ಕೈಗೊಳ್ಳಿ, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ” ಎಂದು ಸತೀಶ ಅವರು ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಮುಖಂಡರಾದ ರಾಮಣ್ಣ ಗುಳ್ಳಿ, ಸುರೇಶ ನಾಯ್ಕ್, ಮಾರುತಿ ಮಸ್ತಿ, ಮಾರುತಿ ಚೌಗಲೆ, ಹನುಮಂತ …

Read More »

ಶರಣಸಂಸ್ಕೃತಿ ಉತ್ಸವದಲ್ಲಿ ಯುವ ಮುಖಂಡ ರಾಹುಲ್ ಜಾರಕಿಹೊಳಿಗೆ ಸತ್ಕಾರ

ಮೂಡಲಗಿ: “ಯೋಗದಿಂದ ರೋಗಮುಕ್ತ ಸಮಾಜ ನಿರ್ಮಾಣ ಸಾಧ್ಯವಿದೆ. ಪ್ರತಿಯೊಬ್ಬರು ಯೋಗವನ್ನು ರೂಢಿಸಿಕೊಳ್ಳಬೇಕು” ಎಂದು ಅಮೃತಾನಂದ ಸ್ವಾಮೀಜಿ ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಶರಣಸಂಸ್ಕೃತಿ ಉತ್ಸವ, ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಸ್ಮರಣೋತ್ಸವ ಹಾಗೂ ಸಿದ್ದಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು ಮಾತನಾಡಿದರು. “ಪ್ರತಿದಿನ ಯೋಗ ಮಾಡುವುದರಿಂದ ರೋಗಗಳನ್ನು ದೂರವಿಡಬಹುದು. ಯೋಗದಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಿದೆ” ಎಂದರು. “ಮಾಟ-ಮಂತ್ರ, ಮೂಢನಂಬಿಕೆಗಳಿಂದ ಜನರು ಹೊರಬರಬೇಕು. …

Read More »

ಎಂಇಎಸ್ ಉದ್ಧಟತನ ಖಂಡಿಸಿ ಕರವೇ ಪ್ರತಿಭಟನೆ.

ಬೆಳಗಾವಿ ಮಹಾನಗರ ಪಾಲಿಕೆ ಮೇಲಿನ ಕನ್ನಡದ ಧ್ವಜ ತೆರವುಗೊಳಿಸಲು ಎಂಇಎಸ್ ನಡೆಸಿದ ಪ್ರಯತ್ನ ಖಂಡಿಸಿ ಗೋಕಾಕ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ನೂರಾರು ಕಾರ್ಯಕರ್ತರು ಘಟಪ್ರಭಾದಲ್ಲಿ ಪ್ರತಿಭಟನೆ ನಡೆಸಿದರು. ಗೋಕಾಕ ತಾಲೂಕು ಘಟಪ್ರಭಾ ಮೃತ್ಯುಂಜಯ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಎಂಇಎಸ್ ಉದ್ಧಟತನದ ವಿರುದ್ಧ ಘೋಷಣೆ ಮೊಳಗಿಸಿದರು. ಕೂಡಲೇ ಗದ್ದಲಕೋರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರನ್ನು …

Read More »

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ , ರಾಜ್ಯಾದ್ಯಂತ 11 ಜಿಲ್ಲೆ 28 ಕಡೆ ದಾಳಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಎಸಿಬಿಯ (ACB Raid) ಅಧಿಕಾರಿಗಳು ಇಂದು ಮಂಗಳವಾರ ಬೆಳ್ಳಂಬೆಳಗ್ಗೆಯೇ ರಾಜ್ಯದ 11 ಜಿಲ್ಲೆಗಳಲ್ಲಿ 28 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ವಿವಿಧ ಇಲಾಖೆಯ ಒಂಬತ್ತು ಅಧಿಕಾರಿಗಳ (Govt Officers) ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳ ತಂಡಗಳು ದಾಖಲೆಗಳನ್ನ ಪರಿಶೀಲನೆ ನಡೆಸಿವೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ರೇಡ್ ನಡೆದಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಮೈಸೂರು, …

Read More »

ಮಹಿಳೆಯರಿಗೆ ಹೆಚ್ಚು ಅವಕಾಶಗಳು ಸಿಗಲಿ: ಪ್ರಿಯಾಂಕಾ ಜಾರಕಿಹೊಳಿ.

ಬೆಳಗಾವಿ: “ಡಾ.ಬಿ.ಆರ್. ಅಂಬೇಡ್ಕರ್ ಅವರಿಂದ ದೇಶದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಹಾಗೂ ಗೌರವ ದೊರೆತಿದೆ” ಎಂದು ಸತೀಶ ಶುಗರ್ಸ್ ನಿರ್ದೇಶಕಿ ಹಾಗೂ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅಭಿಪ್ರಾಯಪಟ್ಟರು. ತಾಲೂಕಿನ ಹುದಲಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಮಹಿಳೆಯರಿಗೆ ಸಮಾನತೆ ದೊರಕಿಸಿಕೊಡುವಲ್ಲಿ ಅಂಬೇಡ್ಕರ್ ಅವರ ಪಾತ್ರ …

Read More »

ಜನಪರ -ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ

೮ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು ೨೦೨೧-೨೨ ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ ೮ ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು ಮಹಿಳೆಯರಿಗೆ ಹಲವಾರು ಬಂಪರ್ …

Read More »

*ರಮೇಶ್ ಜಾರಕಿಹೊಳಿ ಅವರನ್ನು ಅಧಿಕಾರದಿಂದ ತೆಗೆಯಲು ಷಡ್ಯಂತ್ರ ನಡೆದಿದೆ: ಬಾಲಚಂದ್ರ ಜಾರಕಿಹೊಳಿ*

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದ ರಮೇಶ್‌ ಜಾರಕಿಹೋಳಿ ಅವರ ವಿರುದ್ದ ಷಟ್ಯಂತ್ರ ಮಾಡಲಾಗಿದೆ ಎಂದು ಅವರ ಸಹೋದರ, ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೋಳಿ ಹೇಳಿದರು. ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಷಡ್ಯಂತ್ರದಲ್ಲಿ ನಾಲ್ಕು ಮಂದಿ ಭಾಗಿಯಾಗಿದ್ದಾರೆ. ಹಾಗೂ ಸಂತ್ರಸ್ಥ ಯುವತಿಗೆ 50 ಲಕ್ಷದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದರು. ಆದರೆ ನಾಲ್ವರ ಹೆಸರನ್ನು ಈಗಲೇ ಬಹಿರಂಗಪಡಿಸಲ್ಲ. ಷಡ್ಯಂತ್ರದ ಹಿಂದೆ ಕಾಣದ ಕೈಗಳ ಕೈವಾಡ ಇದೆ. …

Read More »

ಸಾಹುಕಾರ್ ವಿರುದ್ಧ ನೀಡಿದ ದೂರು ವಾಪಸ್ ॥ ಸತ್ಯ ಮೇವ ಜಯತೆ ಎಂದ ಅಭಿಮಾನಿಗಳು.

ಗೋಕಾಕ : ಗೋಕಾಕ ಸಾಹುಕಾರ ರಮೇಶ್ ಜಾರಕಿಹೊಳಿ ಅವರ CD ಕೇಸ್​ಗೆ ಸಂಬಂಧಿಸಿದಂತೆ ನೀಡಿದ್ದ ದೂರನ್ನು ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ. ಇಂದು ಈ ಪ್ರಕರಣಕ್ಕೆ ಹೊಸ ಟ್ವೀಸ್ಟ ಸಿಕ್ಕಿದ್ದು ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ದೂರಿನ ಕೇಸ್ ವಕೀಲರ ಮೂಲಕ ವಾಪಸ್ ಪಡೆಯಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರಿನ ವಿಚಾರದಲ್ಲಿ ದಿನೇಶ್ ಕಲ್ಲಹಳ್ಳಿ ಬಹುದೊಡ್ಡ ಯೂ-ಟರ್ನ್ ಹೊಡೆದಿದ್ದು, ನೀಡಿದ್ದ ದೂರು ವಾಪಸ್ ಪಡೆದಿದ್ದಾರೆ. ಇನ್ನು ಮಾರ್ಚ್ …

Read More »

ಶರಣ ಸಂಸ್ಕೃತಿ ಉತ್ಸವ ಗೋಕಾಕ ಭಾಗದ ಸಾಂಸ್ಕೃತಿಕ , ಧಾರ್ಮಿಕ ಹಬ್ಬವಾಗಿದೆ : ಶಾಸಕ ಸತೀಶ ಜಾರಕಿಹೊಳಿ

ಗೋಕಾಕ: ಶರಣ ಸಂಸ್ಕೃತಿ ಉತ್ಸವ ಗೋಕಾಕ ಭಾಗದ ಸಾಂಸ್ಕೃತಿಕ , ಧಾರ್ಮಿಕ ಹಬ್ಬವಾಗಿ ಜಿಲ್ಲೆಯಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠಕ್ಕೆ ಭೇಟಿ ನೀಡಿ ಶ್ರೀಮಠದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು ನಿಗದಿತ ಕಾರ್ಯಕ್ರಮಗಳು ಇರುವುದರಿಂದ ಶರಣ ಸಂಸ್ಕೃತಿ ಉತ್ಸವದಲ್ಲಿ ಭಾಗವಹಿಸಲು ಆಗಲಿಲ್ಲ, ಖ್ಯಾತ ವಿದ್ವಾಂಸರು , ಚಿಂತಕರನ್ನು ಕರೆಯಿಸಿ ಜನರಲ್ಲಿ …

Read More »