ಗೋಕಾಕ: ಇದೇ ತಿಂಗಳು 27 ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರ ವಿರುದ್ದ ಗೋಕಾಕ ಗ್ರಾಮೀಣ ಭಾಗದ ಕನ್ನಡ ಪರ ಸಂಘಟನೆಗಳು ಘಟಪ್ರಭಾ ನಗರದಲ್ಲಿ ಗುರುವಾರ ಸಂಜೆ ಸಭೆ ಸೇರಿ ತೀವ್ರ ವಿರೊಧ ವ್ಯಕ್ತ ಪಡಿಸಿದರು. ಈ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ ಅವರು ಈ ಸಮ್ಮೇಳನದ ಆಮಂತ್ರಣ ಪತ್ರಿಕೆಯಲ್ಲಿ ಗ್ರಾಮೀಣ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಗ್ರಾಮೀಣ ಭಾಗದ ಘಟಾನುಘಟಿ ಕನ್ನಡ …
Read More »ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು: ರಾಹುಲ್ ಜಾರಕಿಹೊಳಿ ಆಗ್ರಹ
ಗೋಕಾಕ: “ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಕೋವಿಡ್ ನಿಂದಾಗಿ ಜನರು ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ, …
Read More »ಎಲ್ಲರನ್ನು ಗಣನೆಗೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ಕನ್ನಡ ಸಾಹಿತ್ಯ ಸಮ್ಮೇಳನ ॥ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಪಸ್ವರ.!
ಗೋಕಾಕ: ನೆರೆ ಹಾವಳಿ ಹಾಗೂ ಕರೋನಾ ವೈರಸ್ಸನಿಂದಾಗಿ ತತ್ತರಿಸಿರುವ ಗೋಕಾವಿ ನಾಡಿನಲ್ಲಿ ಅದ್ದೂರಿ ಸಮ್ಮೇಳನ ಅವಶ್ಯಕತೆ ಇತ್ತಾ ಎಂದು ಹಿರಿಯ ಸಾಹಿತಿ ಮಹಾಲಿಂಗ ಮಂಗಿ ಕಸಾಪ ತಾಲೂಕ ಘಟಕದ ವಿರುದ್ಧ ವಾಗ್ದಾಳಿ ನಡೆಸಿದರು. ಅವರು, ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಸಂಭಾವನೆ ನೀಡಿ ಚಿತ್ರ ನಟಿಯರನ್ನು ಕರೆ ತಂದು ಸಮ್ಮೇಳನ ನಡೆಸುವದು ಸರಿಯಲ್ಲ. ಸಾರ್ವಜನಿಕರು ನೀಡಿದ ಹಣ ದುರ್ಬಳಕೆಯಾಗಬಾರದು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಒಬ್ಬರ ಕೈಗೊಂಬೆಯಾಗಿದ್ದಾರೆ ಎಂದು …
Read More »ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್‍ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್‍ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …
Read More »*ಮಹದಾಯಿ ವಿವಾದ:ನ್ಯಾಯಾಂಗ ನಿಂದನೆಗೆ ಸಂಬಂಧಿಸಿ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿಲ್ಲ-ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ
ನವದೆಹಲಿ : ಕರ್ನಾಟಕ ಮತ್ತು ಗೋವಾ ನಡುವೆ ತಲೆದೋರಿರುವ ಮಹದಾಯಿ ನದಿ ನೀರು ಹಂಚಿಕೆ ಸಂಬಂಧದ ಗೋವಾ ವಾದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟ್ ಜಂಟಿ ಸಮಿತಿಯಿಂದ ಸ್ಥಳ ಪರಿಶೀಲನೆಗೆ ಆದೇಶಿಸಿದೆಯೇ ಹೊರತು ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಜಲ ಸಂಪನ್ಮೂಲ ಸಚಿವ *ರಮೇಶ್ ಜಾರಕಿಹೊಳಿ* ಸ್ಪಷ್ಟನೆ ನೀಡಿದ್ದಾರೆ. ವಿವಿಧ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟಿಗೆ ಪ್ರತಿಯಾಗಿ ನವದೆಹಲಿ ಪ್ರವಾಸ …
Read More »ಕಾಕತಿ ಪಂಚಾಯಿತಿಯಲ್ಲಿ ಸಾರ್ವಜನಿಕರ ಕಂದು ಕೊರತೆ ಆಲಿಸಿದ ಶಾಸಕ ಸತೀಶ ಜಾರಕಿಹೊಳಿ
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು, ಕಾಕತಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರು, ಒಳ ಚರಂಡಿ ಹಾಗೂ ರಸ್ತೆ ಸಮಸ್ಯೆಗಳ ಕುರಿತು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು. ಇವರ ಸಮಸ್ಯೆಗೆ ಸ್ಪಂದಿಸಿದ ಶಾಸಕರು ಶೀಘ್ರದಲ್ಲೇ ನೆರವೇರಿಸುವ ಬಗ್ಗೆ ಬರವಸೆ ನೀಡಿದರು, ಉದೋಗ ಖಾತರಿ ಯೋಜನೆ ಸದುಪಯೋಗ ಪಡೆಸಿಕೊಂಡು ಗ್ರಾಮ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು. …
Read More »ಹೈಕಮಾಂಡ್ ಬುಲಾವ್: ದೆಹಲಿಗೆ ತೆರಳಿದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಪಂಚಮಸಾಲಿ ಮೀಸಲಾತಿ ಸಮಾವೇಶ ಹಾಗೂ ಪಾದಯಾತ್ರೆ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದಿಡೀರ್ ದೆಹಲಿಗೆ ತೆರಳಿದ್ದಾರೆ.ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಯತ್ನಾಳ್ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಯತ್ನಾಳ್ ಅವರ ದೆಹಲಿ ಭೇಟಿಯಿಂದಾಗಿ ಅನೇಕ ವಿಚಾರಗಳು ಚೆರ್ಚೆಗೆ ಗ್ರಾಸವಾಗಿವೆ.ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ನೋಟೀಸ್ ನೀಡಿತ್ತು.ನೋಟೀ ಸಿಗೆ ಅವರು 11 ಪುಟಗಳ ಉತ್ತರವನ್ನು ನೀಡಿದ್ದರು.ಅದರಲ್ಲಿ 45 ಪ್ಯಾರಾಗಳು ಯಡಿಯೂರಪ್ಅವರ ಸ್ವಜನ ಪಕ್ಷಪಾತ,ಪುತ್ರ …
Read More »ಕರ್ನಾಟಕ ರಕ್ಷಣಾ ವೇದಿಕೆಯ ನೂತನ ತಾಲ್ಲೂಕು ಘಟಕ ಉದ್ಘಾಟನೆ
ಕರ್ನಾಟಕ ರಕ್ಷಣಾ ವೇದಿಕೆಯ ನೂತನ ತಾಲ್ಲೂಕು ಘಟಕ ಉದ್ಘಾಟನಾ ಸಮಾರಂಭ ಇಂದು ದೂಪದಾಳ ಪ್ರವಾಸಿ ಮಂದಿರದಲ್ಲಿ ನಡೆಸಲಾಯಿತು ಕಾರ್ಯಕ್ರಮದ ಅದ್ಯಕ್ಷತೆಯನ್ನು ವಿಭಾಗೀಯ ಮಹಿಳಾ ಅದ್ಯಕ್ಷರಾದ ರೇಶ್ಮಾ ಕಿತ್ತೂರ ರವರು ವಹಿಸಿದ್ದರು ಮುಖ್ಯ ಅಥಿತಿಗಳಾಗಿ ಜಿಲ್ಲಾ ಉಪಾಧ್ಯಕ್ಷ ಅಕ್ಬರ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ ಕೊಪ್ಪದ ಶ್ರೀಮತಿ ಅನ್ನಪೂರ್ಣ ಅಸೂರಕರ ಯುವ ಘಟಕದ ಜಿಲ್ಲಾ ಅದ್ಯಕ್ಷ ರೋಶನ್ ಶೆಟ್ಟಿ ಆಗಮಿಸಿದ್ದರು ರೆಹಮಾನ್ ಮೊಕಾಶಿ ಇವರನ್ನು ಜಿಲ್ಲಾ ಸಂಚಾಲಕರಾಗಿ ಆಯ್ಕೆ ಆದರು …
Read More »ಮೂಡಲಗಿಯಲ್ಲಿ ನೂತನ ಕಚೇರಿ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಾಗರೀಕರಿಗೆ ಅನುಕೂಲವಾಗಲು ಪಟ್ಟಣದಲ್ಲಿರುವ ತಹಶೀಲ್ದಾರ ಕಛೇರಿ ಬಳಿ ತಮ್ಮ ಶಾಸಕರ ಕಛೇರಿಯನ್ನು ಪ್ರಾರಂಭಿಸಲಾಗಿದ್ದು, ಇದರ ಸದ್ಬಳಕೆಯನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ಬಸವನಗರದಲ್ಲಿ ನೂತನವಾಗಿ ಆರಂಭಿಸಲಾದ ಅರಭಾವಿ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂಡಲಗಿ ಹೊಸ ತಾಲೂಕು ರಚನೆ ಬಳಿಕ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿ ತಮ್ಮ ಕಛೇರಿಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ತಮ್ಮ …
Read More »ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ
ಮೂಡಲಗಿ : ಮಸಗುಪ್ಪಿ ಮಹಾಲಕ್ಷಿ ದೇವಿ ದೇವಸ್ಥಾನವು ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುವ ಪುಣ್ಯಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸುಮಾರು 5 ಕೋಟಿ ವೆಚ್ಚದಲ್ಲಿ ಮಹಾಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. 2.50 ಕೋಟಿ ರೂ.ವೆಚ್ಚದಲ್ಲಿ ದೇವಸ್ಥಾನದ ಹೊಸ ಕಟ್ಟಡ, 50 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನದ ಸಿಖರ , …
Read More »