ಗೋಕಾಕ ಡಿ 14 : ಪ್ರತಿ ವರ್ಷ ಶ್ರೀ ಮಠದಿಂದ ಕೊಡಮಾಡುವ ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ರವಿವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದಲ್ಲಿ ನಡೆದ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭದ ಪೂರ್ಣಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡುತ್ತಿದ್ದರು. …
Read More »ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ :ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …
Read More »ಸಾರಿಗೆ ನೌಕರರ ಮುಷ್ಕರ ಸುಖಾಂತ್ಯ!
ಬೆಂಗಳೂರು : ಕೊನೆಗೂ ರಾಜ್ಯ ಸರ್ಕಾರ ಸಾರಿಗೆ ನೌಕರರ ಹೋರಾಟಕ್ಕೆ ಮಣಿದಿದೆ. ಮುಷ್ಕರ ನಿರತ ಸಾರಿಗೆ ನೌಕರರು ರಾಜ್ಯ ಸರ್ಕಾರದ ಮುಂದಿಟ್ಟಿದ್ದಂತ 10 ಬೇಡಿಕೆಗಳಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂಬುದಾಗಿ ಪರಿಗಣಿಸಬೇಕು ಎಂಬ ಬೇಡಿಕೆ ಹೊರತಾಗಿ 9 ಬೇಡಿಕೆಗಳಿಗೆ ಅಸ್ತು ಎಂದಿದೆ. ಇಂತಹ ಪತ್ರವನ್ನು BMTC ಅಧ್ಯಕ್ಷ ನಂದೀಶ್ ರೆಡ್ಡಿಯೇ ಫ್ರೀಡಂ ಪಾರ್ಕ್ ಗೆ ಆಗಮಿಸಿ, ಮುಷ್ಕರ ನಿರತ ನೌಕರರಿಗೆ 10 ಬೇಡಿಕೆಗಳಲ್ಲಿ 9 ಬೇಡಿಕೆ ಈಡೇರಿಸಿದಂತ ಬೇಡಿಕೆ …
Read More »ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ನಿರ್ದೇಶನ ಮೇರೆಗೆ ಗೋಕಾಕ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ನೂತನ ಅಧ್ಯಕ್ಷರ ಆಯ್ಕೆ.
ಗೋಕಾಕ:.ಸತೀಶ ಎಲ್ ಜಾರಕಿಹೊಳಿ, ಶಾಸಕರು ಯಮಕನಮರಡಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೇಸ ಪಕ್ಷದ ಕಾರ್ಯಾಧ್ಯಕ್ಷರ ನಿರ್ದೇಶನ ಮತ್ತು ಆದೇಶದ ಮೇರೆಗೆ ಶ್ರೀ.ಬಿ. ಕೆ. ಕಂಟಕಾರ ವಕೀಲರು, ಇವರನ್ನು ಗೋಕಾಕ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾನೂನು ಮತ್ತು ಮಾನವ ಹಕ್ಕುಗಳ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲು ಹರ್ಷಿತನಾಗಿದ್ದೇನೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಹಾಗೂ ಶಿಸ್ತಿಗೆ ಒಳಪಟ್ಟು ಕಾರ್ಯನಿರ್ವಹಿಸುವುದು,ತಾವು ಈ ಕೂಡಲೇ ತಮ್ಮ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷ …
Read More »ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಬಳಸಿದರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ಹಿರೇಮಠ ಎಚ್ಚರಿಕೆ
ಬೆಳಗಾವಿ : ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ ಹಾಗೂ ಸ್ಪರ್ಧಾಳುಗಳಿಗೆ ಕಾನೂನು ಉಲ್ಲಂಘನೆಯಾಗದಂತೆ ತಡೆಯಲು ಈ ಕೆಳಕಂಡ ಅಂಶಗಳನ್ನು ಗಮನಕ್ಕೆ ತರಲಾಗಿದೆ. 1) ರಾಜಕೀಯ ಪಕ್ಷಗಳು ಸಭೆ, ಸಮಾರಂಭ ಎರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಭಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ. 2) ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ ಎಂದು …
Read More »ಸಾರಿಗೆ ನೌಕರರ ಮುಷ್ಕರ: ಸಂಧಾನ ಯಶಸ್ವಿ. ಬಸ್ ಗಳು ರೈಟ್ ರೈಟ್!
ಬೆಂಗಳೂರು: ಸಾರಿಗೆ ನೌಕರರ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದ್ದು, ಮೂರು ದಿನಗಳ ಬಳಿಕ ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್ ಬಿದ್ದಿದೆ. ಆದರೇ ಸಭೆ ಮುಗಿಸಿದ ನಂತರ ಫ್ರೀಡಂ ಪಾರ್ಕ್ ನಲ್ಲಿ ಅಧಿಕೃತವಾಗಿ ಘೋಷಣೆ ಆಗುವವರೆಗೆ ಕಾದು ನೋಡಬೇಕಿದೆ. ತಮ್ಮನ್ನೂ ಸರ್ಕಾರಿ ಸಿಬ್ಬಂದಿಯನ್ನಾಗಿ ಪರಿಗಣಿಸಬೇಕು ಎಂಬುದರ ಜತೆಗೆ ಹಲವು ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಭಾನುವಾರ ಸಂಜೆ ನಡೆದ ಸಂಧಾನ ಸಭೆ ಸಕ್ಸಸ್ ಆಗಿದ್ದು, …
Read More »ಜನರ ಸಮಸ್ಯೆಗೆ ಯಾರು ಹೆಚ್ಚು ಸ್ಪಂಧಿಸುತ್ತಾರೋ, ಅಂತವರು ಗೆಲಲ್ಲು ಸಾಧ್ಯ : ಸತೀಶ್ ಜಾರಕಿಹೊಳಿ.
ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ ಇದೆ. …
Read More »ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟ: ಸಚಿವ ಸವದಿ
ಬೆಂಗಳೂರು: ಸಾರಿಗೆ ನೌಕರರನ್ನು ಸಧ್ಯಕ್ಕೆ ಸರ್ಕಾರಿ ನೌಕರರನ್ನಾಗಿ ಮಾಡುವುದು ಸಾಧ್ಯವಿಲ್ಲ. ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಮನವೊಲಿಕೆ ಮೂಲಕ ಕೆಲಸಕ್ಕೆ ತರಲು ಯತ್ನಿಸುತ್ತೇವೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಸವದಿ, ನಮ್ಮ ಹಣಕಾಸಿನ ಇತಿಮಿತಿಯೊಳಗೆ ಬೇಡಿಕೆ ಈಡೇರಿಸುವ ಯತ್ನ ಮಾಡುತ್ತೇವೆ. ಆದರೆ ಸಾರಿಗೆ ನೌಕರರ ಈ ಮುಷ್ಕರದ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ. ಕೆಲವೆಡೆ ಬಸ್ …
Read More »ರಾಯಬಾಗದಲ್ಲಿ ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ ಅಸೀಡ್ ದಾಳಿ!
ಬೆಳಗಾವಿ-ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ,ಅಸೀಡ್ ದಾಳಿ ನಡೆದಿದ್ದು,ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ರಾಯಬಾಗ ಪಟ್ಟಣದಲ್ಲಿ ಸಂಜೆ 7 ಗಂಟೆಗೆ ನಡೆದಿದೆ. ರಾಯಬಾಗ ಪಟ್ಟಣದಲ್ಲಿರುವ ಜನದ ಕಟ್ಟೆಯಲ್ಲಿ ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ ಅಸೀಡ್ ದಾಳಿ ನಡೆದ ತಕ್ಷಣ ಪೋಲೀಸರು ಸ್ಥಳಕ್ಕೆ ಧಾವಿಸಿ ಅಸೀಡ್ ದಾಳಿಗೆ ತುತ್ತಾದ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ.ಸ್ಥಳೀಯ ವೈದ್ಯರ ಶಿಫಾರಸಿನ ಮೇರೆಗೆ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸೀಡ್ ದಾಳಿ ನಡೆದ ಒಂದು …
Read More »ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ : ಸತೀಶ ಜಾರಕಿಹೊಳಿ
ನಿಪ್ಪಾಣಿ : ‘ ಗ್ರಾಮ ಪಂಚಾಯಿತಿ ಎಲೆಕ್ಷನ್ ಮುಂದಿನ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮರಾಠ ಮಂಡಳ ಸಭಾಂಗಣದಲ್ಲಿ ಶನಿವಾರ ಜರುಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಪಂ.ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು. ಇವುಗಳು …
Read More »