ಅರಭಾಂವಿ ಮತಕ್ಷೇತ್ರದ ಬಿಜೆಪಿಯ ಯುವ ಮೊರ್ಚಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ಮಾತನಾಡಿ ತಾನು ಅಡಿದ ಕೆಲಸ ಕಾರ್ಯಗಳನ್ನು ಇನ್ನೊಬ್ಬರಿಗೆ ಒಪ್ಪುವಂತೆ ಮಾಡವವರೆ ಅಜಾತ ಶತ್ರು, ಅಂತಹ ವ್ಯಕ್ತಿ ಅಟಲ ಬಿಹಾರಿ ವಾಜಪೇಯಿ, ಅತ್ಯಂತ ಶತ್ರುಗಳನ್ನು ಹೊಂದುವ ಏಕೈಕ ಕ್ಷೇತ್ರವೆಂದರೆ ಅದುವೆ ರಾಜಕೀಯ ಕ್ಷೇತ್ರ ಅಂತಹ ಕ್ಷೇತ್ರದಲ್ಲಿ ಯಾವುದೇ ವಿರೋದಿಗಳಿಲ್ಲದೆ ಅಜಾತಶತ್ರುವಾಗಿ ಇದ್ದವರು, ಅಟಲ್ ಜೀ ಎಂದರು,ಬಿಜೆಪಿ ಪಕ್ಷ ಹಿರಿಯರು …
Read More »ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನಂದಿನಿಯಿoದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ. ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್‌ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿoದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »ನೈಟ್ ಕರ್ಫ್ಯೂ ಇಲ್ಲ!..ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ.
ಬೆಂಗಳೂರು: ಬ್ರಿಟನ್ನಲ್ಲಿ ರೂಪಾಂತರಿತ ಕರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜನವರಿ 2 ರ ತನಕ ನೈಟ್ ಕರ್ಫ್ಯೂ ಎಂದು ಸರ್ಕಾರ ಘೋಷಿಸಿತ್ತು. ಇದಕ್ಕೂ ಮೊದಲು ನಿನ್ನೆಯಿಂದಲೇ ಜಾರಿ ಎಂದಿತ್ತಾದರೂ, ಬಳಿಕ ಅದರಿಂದ ಹಿಂದೆ ಸರಿದಿತ್ತು. ಇಂದು ಮತ್ತೆ ನಿನ್ನೆಯ ತೀರ್ಮಾನದಿಂದಲೂ ಹಿಂದೆ ಸರಿದಿರುವ ರಾಜ್ಯ ಸರ್ಕಾರ, ನೈಟ್ ಕರ್ಫ್ಯೂ ಇರಲ್ಲ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿರುವುದಿಷ್ಟು – ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ …
Read More »ಬನ್ನೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ
ಮೈಸೂರು,ಡಿ.23: ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲೆಯ ಟಿ.ನರಸೀಪುರ ತಾಲೂಕು ಬನ್ನೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ 25 ಸಾವಿರ ರೂ. ಲಂಚ ಪಡೆಯುವ ವೇಳೆ ಮೈಸೂರಿನ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಬನ್ನೂರು ಪಟ್ಟಣದ ಕಾಮಗಾರಿ ಸಂಬಂಧ ಬಿಲ್ ಮಾಡಿಕೊಡಲು ಗುತ್ತಿಗೆದಾರರೊಬ್ಬರಿಗೆ 25 ಸಾವಿರ ರೂ. ಲಂಚ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಗುತ್ತಿಗೆದಾರರು ಮೈಸೂರಿನ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. …
Read More »ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿ ದಿಢೀರ್ ಬದಲಾವಣೆ!
ಬೆಂಗಳೂರು: ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಕಾರಣದಿಂದ ರಾಜ್ಯದಲ್ಲಿ ಬುಧವಾರ (ಡಿ.23) ಜ. 2ರವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವಿನಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಕಚೇರಿ ಟ್ವೀಟ್ ಮಾಡಿದೆ. ರಾಜ್ಯದಲ್ಲಿ ಇಂದಿನಿಂದ (ಡಿ.23ರಿಂದ) ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನು ನಾಳೆಯಿಂದ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ ಜಾರಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದೆ …
Read More »15 ದಿನಗಳ ಕಾಲ ಕೃಷಿ ಜಮೀನುಗಳಿಗೆ 6.80 ಟಿಎಮ್‌ಸಿ ನೀರು – ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ ೨೫ ರಿಂದ ೧೫ ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು ೬.೮೦ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ ೬ ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗುವುದು …
Read More »ಕೊರೋನಾ ರೂಪಾಂತರ ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ
ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ ಜೀವನ ನಿರ್ವಹಣೆ ಮಾಡುವಂತೆ ಸಚಿವ *ರಮೇಶ್ ಜಾರಕಿಹೊಳಿ* ಕರೆ ನೀಡಿದ್ದಾರೆ. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹಾ ವ್ಯವಸ್ಥಿತವಾಗಿ …
Read More »ಲೋಕಲ್ ವಾರ್ : ಬೆಳಗಾವಿಯಲ್ಲಿ ಒಟ್ಟಾರೆ ಶೇ.82.70 ಮತದಾನ.
ಬೆಳಗಾವಿ : ಗ್ರಾಮ ಪಂಚಾಯತಿ ಮೊದಲ ಹಂತದ ಚುನಾವಣೆ ಮಂಗಳವಾರ (ಡಿ.22) ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆಯಿತು. ಮೊದಲ ಹಂತದಲ್ಲಿ ಬೆಳಗಾವಿ, ಖಾನಾಪುರ, ಹುಕ್ಕೇರಿ, ಬೈಲಹೊಂಗಲ, ಕಿತ್ತೂರು, ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಮತದಾನ ನಡೆಯಿತು. ಬೆಳಿಗ್ಗೆ 7 ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆಯಲ್ಲಿ ಮಹಿಳೆಯರು, ಹಿರಿಯರು ಸೇರಿದಂತೆ ಎಲ್ಲರೂ ಉತ್ಸಾಹದಿಂದ ಭಾಗವಹಿಸಿದರು. ಮೊದಲ ಹಂತದಲ್ಲಿ ಏಳು ತಾಲ್ಲೂಕುಗಳಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಬೆಳಗಾವಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ಅಂದರೆ ಶೇ.86.60 ರಷ್ಟು …
Read More »ಕೊರೊನಾ ವೈರಸ್ ರೂಪಾಂತರ!
ಬೆಂಗಳೂರು: ಹೆಮ್ಮಾರಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ 10 ತಿಂಗಳಿಂದ ಮುಚ್ಚಿದ್ದ ಶಾಲಾ-ಕಾಲೇಜುಗಳನ್ನು ಜನವರಿ 1ರಿಂದ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಲಂಡನ್ ಕೊರೊನಾ ವೈರಸ್ ಆತಂಕದ ಕಾರ್ಮೋಡ ಕವಿದಿದೆ. ಎರಡು ದಿನಗಳಿಂದ ಇಂಗ್ಲೆಂಡ್‍ನಲ್ಲಿ ಕೊರೊನಾ ವೈರಸ್ ರೂಪಾಂತರಗೊಂಡು ಹರಡುತ್ತಿದ್ದು, ಬ್ರಿಟನ್‍ನಿಂದ ರಾಜ್ಯಕ್ಕೆ ನೂರಕ್ಕೂ ಹೆಚ್ಚು ಮಂದಿ ಬಂದಿದ್ದಾರೆ. ಹೀಗಾಗಿ ರಾಜ್ಯದಲ್ಲೂ ಲಂಡನ್ ಕೊರೊನಾ ವೈರಸ್ ಹರಡುವ ಭೀತಿ ಎದುರಾಗಿದ್ದು, ಜನವರಿ 1ರಿಂದ 10 ಹಾಗೂ 12ನೇ ತರಗತಿ ಕ್ಲಾಸ್ …
Read More »ಮತದಾನ ಮಾಡಲು ಇವುಗಳಲ್ಲಿ ಯಾವುದಾದರು ಗುರುತಿನ ಚೀಟಿ ಇದ್ದರೆ ಸಾಕು!
ಬೆಂಗಳೂರು : ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆ ಡಿಸೆಂಬರ್ 22 ರಂದು ಹಾಗೂ ಎರಡನೇ ಹಂತದ ಗ್ರಾಮ ಪಂಚಾಯತ್‍ಗಳಿಗೆ ಡಿಸೆಂಬರ್ 27 ರಂದು ನಡೆಯಲಿದೆ. ಮತದಾನಕ್ಕೆ ಭಾರತ ಚುನಾವಣಾ ಆಯೋಗ ನೀಡಿದ ಗುರುತುಪತ್ರ ಅಥವಾ ಈ ಕೆಳಕಂಡ ಯಾವುದಾದರು ಒಂದು ದಾಖಲೆಗಳನ್ನು ತೋರಿಸಿ ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಮತದಾನ ಮಾಡಬಹುದು. 1. ಪಾಸ್‍ಪೋರ್ಟ್ 2.ಡ್ರೈವಿಂಗ್ ಲೈಸೆನ್ಸ್, 3.ಆದಾಯ ತೆರಿಗೆ ಗುರುತಿನ ಚೀಟಿ 4.ರಾಜ್ಯ ಕೇಂದ್ರ …
Read More »
CKNEWSKANNADA / BRASTACHARDARSHAN CK NEWS KANNADA