Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟ: ಸಚಿವ ಸವದಿ

ಬೆಂಗಳೂರು: ಸಾರಿಗೆ ನೌಕರರನ್ನು ಸಧ್ಯಕ್ಕೆ ಸರ್ಕಾರಿ ನೌಕರರನ್ನಾಗಿ ಮಾಡುವುದು ಸಾಧ್ಯವಿಲ್ಲ. ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಮನವೊಲಿಕೆ ಮೂಲಕ ಕೆಲಸಕ್ಕೆ ತರಲು ಯತ್ನಿಸುತ್ತೇವೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಸವದಿ, ನಮ್ಮ ಹಣಕಾಸಿನ ಇತಿಮಿತಿಯೊಳಗೆ ಬೇಡಿಕೆ ಈಡೇರಿಸುವ ಯತ್ನ ಮಾಡುತ್ತೇವೆ. ಆದರೆ ಸಾರಿಗೆ ನೌಕರರ ಈ ಮುಷ್ಕರದ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ. ಕೆಲವೆಡೆ ಬಸ್ …

Read More »

ರಾಯಬಾಗದಲ್ಲಿ ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ ಅಸೀಡ್ ದಾಳಿ!

ಬೆಳಗಾವಿ-ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ,ಅಸೀಡ್ ದಾಳಿ ನಡೆದಿದ್ದು,ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ರಾಯಬಾಗ ಪಟ್ಟಣದಲ್ಲಿ ಸಂಜೆ 7 ಗಂಟೆಗೆ ನಡೆದಿದೆ. ರಾಯಬಾಗ ಪಟ್ಟಣದಲ್ಲಿರುವ ಜನದ ಕಟ್ಟೆಯಲ್ಲಿ ಹಣ್ಣು ಮಾರುತ್ತಿದ್ದ ಮಹಿಳೆಯ ಮೇಲೆ ಅಸೀಡ್ ದಾಳಿ ನಡೆದ ತಕ್ಷಣ ಪೋಲೀಸರು ಸ್ಥಳಕ್ಕೆ ಧಾವಿಸಿ ಅಸೀಡ್ ದಾಳಿಗೆ ತುತ್ತಾದ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ.ಸ್ಥಳೀಯ ವೈದ್ಯರ ಶಿಫಾರಸಿನ ಮೇರೆಗೆ ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸೀಡ್ ದಾಳಿ ನಡೆದ ಒಂದು …

Read More »

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿ : ಸತೀಶ ಜಾರಕಿಹೊಳಿ

ನಿಪ್ಪಾಣಿ : ‘ ಗ್ರಾಮ ಪಂಚಾಯಿತಿ ಎಲೆಕ್ಷನ್ ಮುಂದಿನ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಕಾರ್ಯಕರ್ತರು ಹೆಚ್ಚಿನ  ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ  ಹೇಳಿದರು. ತಾಲ್ಲೂಕಿನ ಮರಾಠ ಮಂಡಳ  ಸಭಾಂಗಣದಲ್ಲಿ ಶನಿವಾರ ಜರುಗಿದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಪಂ.ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು. ಇವುಗಳು …

Read More »

ಪ್ರಯಾಣಿಕರ ಗಮನಕ್ಕೆ: ನಾಳೆ ಬಸ್ ಸಂಚಾರ ಸ್ಥಗಿತ, ಅನಿರ್ದಿಷ್ಟವಾಧಿ ಮುಷ್ಕರಕ್ಕೆ ನಿರ್ಧಾರ.

ಬೆಂಗಳೂರು: ನಾಳೆಯಿಂದ ಸಾರಿಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಿದ್ದಾರೆ. ನಾಳೆಯಿಂದ ಸಾರಿಗೆ ಬಸ್ ಗಳು ರಸ್ತೆಗಿಳಿಯುವುದಿಲ್ಲ ಎಂದು ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರ ಒಕ್ಕೂಟದ ಸದಸ್ಯರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಭೇಟಿಯಾಗಿದ್ದಾರೆ. ವಿಧಾನಸೌಧದಲ್ಲಿ …

Read More »

ಹೊನಗಾ ಗ್ರಾಪಂ.ಗೆ ಮಲ್ಲವ್ವ ವರಗ ಅವಿರೋಧ ಆಯ್ಕೆ : ಶಾಸಕ ಸತೀಶ್ ಜಾರಕಿಹೊಳಿಗೆ ಅಭಿನಂದನೆ

ಬೆಳಗಾವಿ : ಹೊನಗಾ ಗ್ರಾಮ ಪಂಚಾಯಿತಿಗೆ 6ನೇ ವಾರ್ಡ್ ಗೆ ಅವಿರೋಧ ಆಯ್ಕೆಯಾದ ಮಲ್ಲವ್ವ ಗಂಗಪ್ಪ ವರಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿ ಗ್ರಾಮ ಪಂಚಾಯಿತಿಗೆ ಐದನೇ ಬಾರಿಗೆ ಆಯ್ಕೆ ಆಗಿದ್ದಾರೆ. ಅವಿರೋಧ ಆಯ್ಕೆಗೆ ಕಾರಣರಾದ ಶಾಸಕರಿಗೆ ಹೂವ ಗುಚ್ಛ ನೀಡಿ, ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಂಗಪ್ಪ ವರಗ, ಲಗಮಣ್ಣ ಹುಂದ್ರಿ, ಪುಂಡಲಿಕ ಪಾಟೀಲ, …

Read More »

ಸಿಡಿದೆದ್ದ ಸಾರಿಗೆ ನೌಕರರು: ಮುಷ್ಕರ ಕೈ ಬಿಡಲು ಸಿಎಂ ಮನವಿ

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದು, ಇದರಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಸರ್ಕಾರಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹೋರಾಟ ನಿರತರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದು, ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ತಿಳಿಸಿದ್ದಾರೆ. ಮುಷ್ಕರ ಕೈಬಿಡಲು ಸಿಎಂ ಮನವಿ ಮಾಡಿದ್ದು, ಸಾರಿಗೆ ನೌಕರರ ಪ್ರತಿಭಟನೆ ವಾಪಸ್ ಪಡೆಯಬೇಕು. ಸದ್ಯ …

Read More »

ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ‌

SCP TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ *ಪ್ರಗತಿ ಪರಿಶೀಲನಾ ಸಭೆ* ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉನ್ನತ ಮಟ್ಟದ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ …

Read More »

ಚುನಾವಣೆಗೆ ಸ್ಪರ್ಧಿಸಲು ಯೋಚಿಸಿದ್ದರೇ ಏನೆಲ್ಲಾ ಸಲ್ಲಿಸಬೇಕು..? ಅರ್ಹತೆಗಳೇನು..?ಇಲ್ಲಿದೇ ನೋಡಿ

ಬೆಂಗಳೂರು, (ಡಿ.02): ಉಪಚುನಾವಣೆ, ಪರಿಷತ್ ಜಿದ್ದಾಜಿದ್ದಿ, ಸ್ಥಳೀಯ ಸಂಸ್ಥೆಗಳ ಮತಸಮರದ ಬಳಿಕ ಬಹು ನಿರೀಕ್ಷಿತ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಇದೇ ಡಿಸೆಂಬರ್ 22 ಹಾಗೂ 27ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಪ್ರಕಟವಾಗಲಿದೆ. ಇನ್ನು ಪ್ರಮುಖವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ. ಈ ಹಳ್ಳಿ ಫೈಟ್ ಎಷ್ಟರ ಮಟ್ಟಿಗೆ ಇರುತ್ತೆ ಅಂದ್ರೆ ಸಂಬಂಧಗಳನ್ನೇ …

Read More »

ಕೃಷಿ ಕಾಯ್ದೆ: ರದ್ದು ಮಾಡಿ, ತಿದ್ದುಪಡಿಯಿಂದ ಪ್ರಯೋಜನ ಇಲ್ಲ, : ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಹೇಳಿಕೆ

ಬೆಂಗಳೂರು:  ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾಂತ್ಯ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ನಾವು ರೈತರ ಪರವಾಗಿದ್ದು, ರೈತರಿಗೆ ಮಾರಕವಾಗಿರುವ  ಕೃಷಿ ಕಾಯ್ದೆಗಳನ್ನು ಕೂಡಲೇ ಕೇಂದ್ರ ಸರಕಾರವು ರದ್ದು ಮಾಡಬೇಕು. ಕಾಯ್ದೆಗಳಲ್ಲಿ ತಿದ್ದುಪಡಿ ತಂದರೆ ಯಾವ ಪ್ರಯೋಜನವು ಇಲ್ಲ, ಕಾಯ್ದೆಗಳನ್ನೇ ರದ್ದು ಮಾಡಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಿಜೆಪಿ ಸರಕಾರವು ವಿರೋಧ ಪಕ್ಷಗಳನ್ನು ಗಣನೆಗೆ …

Read More »

ಗಾಂಧೀಜಿ ವಾಸವಾಗಿದ್ದ ಸೇವಾಗ್ರಾಮ ಆಶ್ರಮಕ್ಕೆ ಕೆಪಿಸಿಸಿ ಸತೀಶ್ ಜಾರಕಿಹೊಳಿ ಭೇಟಿ

ವಾರ್ದಾ(ಮಹಾರಾಷ್ಟ): 1936 ರಿಂದ 1948 ರವರೆಗೆ 13 ವರ್ಷಗಳ ಕಾಲ ಗಾಂಧೀಜಿ ವಾಸವಾಗಿದ್ದ ಹಾಗೂ ಸ್ವಾತಂತ್ರ‍್ಯ ಚಳುವಳಿ ಹೋರಾಟದ ಸಮಯದಲ್ಲಿ ಹಲವು ರಾಷ್ಟ್ರೀಯತಾವಾದಿ ನಾಯಕರ ಅಧಿಪತ್ಯ ವಹಿಸಿದ್ದ ಮಹಾರಾಷ್ಟçದ ವಾರ್ಧಾ ಜಿಲ್ಲೆಯಿಂದ ೮ ಕಿ.ಮೀ ದೂರದಲ್ಲಿರುವ ಸುಪ್ರಸಿದ್ಧ ಸೇವಾ ಗ್ರಾಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇಂದು ಭೇಟಿ ನೀಡಿ ಆಶ್ರಮದಲ್ಲಿರುವ ಮಹಾತ್ಮ ಗಾಂಧೀಜಿಗೆ ಸಂಬ0ಧಿಸಿದ ಸಾಕಷ್ಟು ವಸ್ತುಗಳು ಹಾಗೂ ಪ್ರಮುಖ ಗುಡಿಸಲುಗಳು ಮತ್ತು ಕುಟಿರಗಳನ್ನು ವೀಕ್ಷಿಸಿದರು.  ಸೇವಾಗ್ರಾಮ …

Read More »