Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಶಾಲೆ ಪ್ರಾರಂಭ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದೇನು?

 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಲೆಗಳನ್ನು ಆರಂಭಿಸುವ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತ ದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ …

Read More »

ಸತೀಶ ಶುಗರ್ಸ್ ಕಾರ್ಖಾನೆಯಿಂದ ರೈತರಿಗೆ ಎರಡನೇ ಕಂತಿನ ಹಣ ಘೋಷಣೆ!

ಬೆಳಗಾವಿ: ಕಳೆದ 2019-20ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರ ಖಾತೆಗೆ ಪ್ರಥಮ ಕಂತು 2500 ರೂ. ದಂತೆ ಸತೀಶ ಶುಗರ್ಸ ಕಾರ್ಖಾನೆಗೆ ಈಗಾಗಲೇ ಪಾವತಿಸಿದ್ದು, ಎರಡನೇ ಕಂತು ಪ್ರತಿ ಟನ್ 225 ರೂ. ನೀಡಲು ಘೋಷಣೆ ಮಾಡಲಾಗಿದೆ. ಈ ಎರಡನೇ ಕಂತನ್ನುಒಂದು ವಾರದ ಒಳಗಾಗಿ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಲಾಗುವುದು. 2019-20ರ ಹಂಗಾಮಿನ ಪ್ರತಿಟನ್‍ಕಬ್ಬಿನ ದರ ಒಟ್ಟು2725 ರೂ. ಪಾವತಿಸಿದಂತಾಗುವುದು.(ಕಬ್ಬುಕಟಾವು ಮತ್ತುಕಬ್ಬು ಸಾರಿಗೆದರವನ್ನು ಪ್ರತ್ಯೇಕವಾಗಿ ನೀಡಲಾಗಿದೆ). …

Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ!

ಬೆಂಗಳೂರು, ಅಕ್ಟೋಬರ್ 09: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಶುಕ್ರವಾರ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Read More »

ಸಚಿವ ರಮೇಶ ಜಾರಕಿಹೊಳಿ ಅವರ “ಮಹಾ” ಭೇಟಿ ||ಕುತೂಹಲಕಾರಿ ಬೆಳವಣಿಗೆಯತ್ತ ಮಹಾರಾಷ್ಟ್ರ ರಾಜಕೀಯ.

ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ? ಎಂಬ ಕುತೂಹಲ‌ ಕೆರಳಿಸಿದೆ.  ಕಳೆದ ತಿ‌ಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ,  ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …

Read More »

ಕೆಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಮೇಶ್ ಜಾರಕಿಹೊಳಿ ಸಂತಾಪ

ಬೆಂಗಳೂರು. ಅ. 8: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಮವಿಲಾಸ ಪಾಸ್ವಾನ್ ಅವರು ಎಂಟು ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಮತ್ತು ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವರು …

Read More »

ಮಾಜಿ ಸೈನಿಕರಿಂದ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿ ಅವರಿಗೆಮನವಿ

ಹುಕ್ಕೇರಿ: ಮೊದಗಾ ಗ್ರಾಮದ ಯುವಕರಿಗೆ ಸೈನಿಕ ತರಬೇತಿ ನೀಡಲು, ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರಿಯ 20 ಗುಂಟೆ ಜಾಗ ನೀಡಬೇಕೆಂದು ಆಜಿ-ಮಾಜಿ ಸೈನಿಕ ಕಲ್ಯಾಣ ಸಂಘ ಪದಾಧಿಕಾರಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಇಂದು ಮನವಿ ಸಲ್ಲಿಸಿದರು. ಮೊದಗಾ ಗ್ರಾಮದಲ್ಲಿ ಅನೇಕ ನಿವೃತ್ತ ಸೈನಿಕರು ಇದ್ದಾರೆ.  58ಕ್ಕೂ ಹೆಚ್ಚು ಜನರು ದೇಶ ಸೇವೆಗಾಗಿ ಬೇರೆ ಬೇರೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಅನೇಕ ಯುಕವರು ದೇಶ ಸೇವೆ ಮಾಡಲು ಉತ್ಸೂಕರಾಗಿದ್ದಾರೆ. ಆದ ಕಾರಣ …

Read More »

ಮೆಳವಂಕಿ ಸೇತುವೆ ಬಳಿ 15 ದಿನದಲ್ಲಿ ಬೈಪಾಸ್ ರಸ್ತೆ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರ ರಸ್ತೆ ಸಂಚಾರ ಸುಗಮಕ್ಕಾಗಿ ಕುಸಿದಿರುವ ಮೆಳವಂಕಿ ಸೇತುವೆ ಬಳಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬುಧವಾರದಂದು ಗುದ್ದಲಿ ಪೂಜೆ ನೆರವೇರಿಸಲಾಯಿತು.  ಜಿ.ಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಕಳೆದ ಸೋಮವಾರದಂದು ಬೆಳಗಿನ ಜಾವ ಮೆಳವಂಕಿ ಸೇತುವೆ ಕುಸಿದು ಬಿದ್ದಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಗೋಕಾಕದಿಂದ ಕೌಜಲಗಿ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇದರಿಂದ ತುಂಬ ತೊಂದರೆಯಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಕೋವಿಡ್-೧೯ ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ …

Read More »

ಲಂಚ ಪಡೆಯುತ್ತಿದ್ದ ವಿಶೇಷ ಭೃಷ್ಟ ಮಹಿಳಾ ತಹಶೀಲ್ದಾರ್ ಎಸಿಬಿ ಬಲೆಗೆ!

ಬೆಂಗಳೂರು,ಅ.6: ಬರೋಬರಿ 5 ಲಕ್ಷ ಲಂಚ ಪಡೆಯುವ ವೇಳೆ ನಗರದ ಮಹಿಳಾ ವಿಶೇಷ ತಹಶೀಲ್ದಾರ್ ಒಬ್ಬರು ಭ್ರಷ್ಟಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೆಜಿ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೆಡ್ …

Read More »

ಊಟ ಮಾಡಿಸಿ ಕೈ ತೊಳೆಯಲು ಹೋದ ಅಮ್ಮ – ಮಹಡಿಯಿಂದ ಬಿದ್ದು ಕಂದಮ್ಮ ಸಾವು

ಮಂಡ್ಯ: ತಾಯಿ ಮಗುವಿಗೆ ಊಟ ಮಾಡಿಸಿ ಕೈ ತೊಳೆಯಲು ಹೋದ ವೇಳೆ ಮೂರು ವರ್ಷದ ಕಂದಮ್ಮ ಮಹಡಿಯ ಮೇಲಿಂದ ಬಿದ್ದು ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿ. ರಾಜಕುಮಾರ್ ಬಡಾವಣೆಯಲ್ಲಿ ಸತೀಶ್ ಅವರದ್ದು ಮಹಡಿಯ ಮನೆಯಾಗಿದೆ. ಎಂದಿನಂತೆ ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ ಊಟ ಮಾಡಿಸಿದ್ದಾರೆ. ನಂತರ …

Read More »