Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ನಗರಸಭೆ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು ನವೆಂಬರ್ .24.ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಕುರಿತಂತೆ ಇತ್ತೀಚೆಗೆ ಹೈಕೋರ್ಟ್ ನ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ದ್ವಿಸದಸ್ಯ ಪೀಠ ಇಂದು ತಡೆ ನೀಡಿದೆ. ಸರ್ಕಾರ ನೀಡಿದ್ದ ಮೀಸಲಾತಿ ಪಟ್ಟಿಯಲ್ಲಿ ಲೋಪವಿದ್ದು ಅದನ್ನು ರದ್ದುಪಡಿಸಬೇಕೆಂದು ಕೆಲ ಪುರಸಭೆಯ ಸದಸ್ಯರು ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯಪೀಠ ಪುರಸ್ಕರಿಸಿ 4ವಾರದೊಳಗೆ ಹೊಸ ಮೀಸಲಾತಿ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತ್ತು .ಇದನ್ನು ಪ್ರಶ್ನಿಸಿ …

Read More »

ಪೊಗರು ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್

ಸ್ಯಾಂಡಲ್ವುಡ್ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಪೊಗರು ಚಿತ್ರದ ಶೂಟಿಂಗ್ ಪೂರ್ಣಗೊಳಿಸಿದ ನಿರ್ದೇಶಕ ನಂದಾ ಕಿಶೋರ್ ಅವರು ಪ್ರಸ್ತುತ ಪೋಸ್ಟ್ ಪ್ರೊಡೆಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನು ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ನಟಿಸಿರುವ ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ದೇಶಕರು ಎರಡು ದಿನಾಂಕಗಳನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ. “ಪೊಗರು ಚಿತ್ರವನ್ನು ಡಿಸೆಂಬರ್ 25 ಅಥವಾ ಜನವರಿ …

Read More »

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ,ಒಂದೇ ಕುಟುಂಬದ ನಾಲ್ವರು ಮೃತ.

ರಾಯಚೂರು: ಧಾರವಾಡದ ಅಣ್ಣಿಗೇರಿ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ಬುಧವಾರ ನಸುಕಿನಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರೆಲ್ಲರೂ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ವಿಠ್ಠಲ ನಗರದ ನಿವಾಸಿಗಳು. ಸಣ್ಣ ಗಂಗಣ್ಣ (56), ಪತ್ನಿ ಗಂಗಮ್ಮ (50), ಸಹೋದರ ಈರಣ್ಣ(40), ಮಗ ಹನುಮಂತ (20) ಮೃತರು. ಮಗಳು ಲಕ್ಷ್ಮೀ (18) ಮತ್ತು ಚಾಲಕ ಈರಣ್ಣ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. …

Read More »

ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ : ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ.

ಬೆಂಗಳೂರು: ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ ಎಂದು ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹೇಳಿದರು. ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯ ನೀರಾವರಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದೆ. ಯಾವ ರಾಜಕೀಯ ವಿಷಯಗಳ ಬಗ್ಗೆಯೂ ಅವರ ಜೊತೆ ಚರ್ಚೆ ಮಾಡಿಲ್ಲ ಎಂದ ಅವರು ಬೆಳಗಾವಿ ಲೋಕಸಭಾ …

Read More »

ಸಿ.ಪಿ.ಯೋಗೇಶ್ವರ್ ಪರ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್

ಬೆಂಗಳೂರು: ನನಗೆ ಸಿ.ಪಿ.ಯೋಗೇಶ್ವರ್ ತುಂಬಾ ಪರಿಚಯ ಹಾಗೂ ಆತ್ಮೀಯರು. ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ. ಕೊನೆಯವರೆಗೂ ಅವರ ಪರ ಬ್ಯಾಟಿಂಗ್ ಮಾಡುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟಿದ್ದು. ಪಕ್ಷದ ಕೆಲವು ಶಾಸಕರು ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೂ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಸದಾಶಿವ ನಗರದ ತಮ್ಮ …

Read More »

ಪಿಕೆಪಿಎಸ್‌ಗಳು ರೈತರ ಜೀವನಾಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

೪೨ ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ …

Read More »

ನ.29 ರಂದು ಕುರುಬ ಸಮುದಾಯದಿಂದ ST ಮೀಸಲಾತಿ ಹೋರಾಟ : ಬೃಹತ್ ಸಮಾವೇಶ

ಮೂಡಲಗಿ: ಪ್ರಸಕ್ತ ದಿನಗಳಲ್ಲಿ ನಮ್ಮ ಹಕ್ಕನ್ನು ಪಡೆಯುವದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹೋರಾಟದ ಮೂಲಕ ಸರಕಾರದ ಗಮನ ಸೆಳೆದು ಕುರುಬ ಸಮುದಾಯಕ್ಕೆ ಪರಿಶಿಷ್ಠ ಪಂಗಡ (ಎಸ್.ಟಿ) ಮೀಸಲಾತಿ ಅತ್ಯಾವಶ್ಯಕವಾಗಿದೆ ಎಂದು ರಾಜ್ಯ ಎಸ್.ಟಿ ಹೋರಾಟ ಸಮೀತಿ ಕಾರ್ಯದರ್ಶಿ ಹಾಗೂ ಮಾಜಿ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ಪಟ್ಟಣದ ಶ್ರೀ ಶಿವಬೋಧರಂಗ ಅರ್ಬನ್ ಸೊಸೈಟಿಯಲ್ಲಿ ಜರುಗಿದ ‘ಬಾಗಲಕೋಟೆಯಲ್ಲಿ ನ. 29 ರಂದು ಜರುಗುವ ಪರಿಶಿಷ್ಠ ಪಂಗಡ …

Read More »

ಗೋಕಾಕ: ತಾಪಂ. ಕಚೇರಿ ಎದುರು ಕೂಲಿ ಕಾರ್ಮಿಕರ ಪ್ರತಿಭಟನೆ

ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …

Read More »

ಬಿಜೆಪಿಯ ಪವರ್ ಸೆಂಟರ್(ಶಕ್ತಿ ಕೆಂದ್ರ) ಎಂದೇ ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಧಿಡೀರ್ ಭೇಟಿ !…

ಬೆಂಗಳೂರು: -ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದೋ ಅಥವಾ ನಾಳೆಯೋ ಎಂಬ ತೂಗುಯ್ಯಾಲೆಯಲ್ಲಿರುವಾಗಲೇ ಬಿಜೆಪಿಯ ಪವರ್ ಸೆಂಟರ್ ಎಂದೇ ಗುರುತಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಧಿಡೀರ್ ಭೇಟಿ ನೀಡಿರುವುದು ಭಾರೀ ಕುತೂಹಲಕ್ಕೆ ಎಡೆ ಮಾಡಿದೆ. ವರಿಷ್ಠರ ಬುಲಾವ್ ಮೇರೆಗೆ ಸಚಿವ ರಮೇಶ್ ಜಾರಕಿಹೊಳಿ ಇಂದು ದೆಹಲಿಗೆ ತೆರಳಿದ್ದು, ಈಗ ಬಿಜೆಪಿಯಲ್ಲಿ ನಡೆಯುತ್ತಿರುವ ವದಂತಿಗಳಿಗೆ ರೆಕ್ಕೆಪುಕ್ಕ ಬಂದಂತಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಜಾರಕಿಹೊಳಿ ದೆಹಲಿಗೆ …

Read More »

ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ : ಚುನಾವಣಾ ಆಯೋಗದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ 6 ಸಾವಿರ ಗ್ರಾಮಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣೆ ಆಯೋಗ ಸಿದ್ಧತೆ ನಡೆಸಿದ್ದು, ಈ ನಡುವೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಚುನಾವಣೆ ಆಯೋಗ ಸ್ಪಷ್ಟಪಡಿಸಿದೆ. ರಾಜ್ಯದ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗಿರುತ್ತಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗವು ಈಗಾಗಲೇ ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ …

Read More »