Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಸಚಿವ ಸುರೇಶ ಅಂಗಡಿ ನಿಧನ : ಶಾಸಕ ಸತೀಶ ಜಾರಕಿಹೊಳಿ ಸಂತಾಪ

ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿಯವರ ನಿಧನದ ಸುದ್ದಿ ಕೇಳಿ ತೀವ್ರ‌ ಆಘಾತವಾಗಿದೆ. ಸರಳ ವ್ಯಕ್ತಿತ್ವ ಹೊಂದಿದ್ದ ಇವರು ಜಿಲ್ಲೆಯ ಅಭಿವೃದ್ದಿಗೆ ಹೆಚ್ಚಿನ ಆಸಕ್ತಿ ಹೊಂದಿದ್ದರು. ಇವರ ಅಗಲಿಕೆಯಿಂದ ಜಿಲ್ಲೆಯ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ‌‌ ಮಿಡಿದಿದ್ದಾರೆ.

Read More »

ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿoದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭçಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿ 2019 …

Read More »

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ!

ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಸುರೇಶ್ ಅವರು ಬೆಳಗಾವಿ …

Read More »

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಯುಜಿಸಿ ಪ್ರಸ್ತಾವಿಕ ಮಾರ್ಗಸೂಚಿ ಪ್ರಕಟ…!

ನವದೆಹಲಿ : ಕೋವಿಡ್ 19 ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಶೈಕ್ಷಣಿಕ ವರ್ಷದ ಕಾಲೇಜು ತರಗತಿ ನವೆಂಬರ್ 1ರಿಂದ ಶುರುವಾಗಲಿದೆ. ಈ ಸಂಬಂಧ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್(UGC) ಪ್ರಸ್ತಾವಿತ ಮಾರ್ಗಸೂಚಿ ಪ್ರಕಟಿಸಿದೆ. ಇದರಂತೆ, ಅಕ್ಟೋಬರ್ 31ರ ಒಳಗೆ ಪ್ರಥಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ತರಗತಿಗಳ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ನವೆಂಬರ್ 1ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳು ಮಾರ್ಚ್ 8 ರಿಂದ 23ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ …

Read More »

ಎಸಿಬಿ ಅಧಿಕಾರಿ ಎಂದು ಹೇಳಿ ಹಣ ವಸೂಲಿ ಮಾಡುತ್ತಿದ ವಂಚಕರು ಪೊಲೀಸರ ಬಲೆಗೆ!

ಬೈಲಹೊಂಗಲ: ಎಸಿಬಿ ಅಧಿಕಾರಿ ಎಂದು ಹೇಳಿ ಸರ್ಕಾರಿ ನೌಕರನಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕರನ್ನು ಬೈಲಹೊಂಗಲ ಪೊಲೀಸರು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವನ್ನೂರ ಗ್ರಾಮದ ವಿಶಾಲ ಭಾಂವೇಪ್ಪ ಪಾಟೀಲ(42) ಮತ್ತು ಬೆಂಗಳೂರಿನ ಕೊಡಗೇನಹಳ್ಳಿ ನಿವಾಸಿ ಶ್ರೀನಿವಾಸ ಆಶ್ವತನಾರಾಯಣ (38) ಬಂಧಿತರು. ಸಹಾಯಕ ಕೃಷಿ ಅಧಿಕಾರಿ ಬಿ.ಆರ್. ಹುಲಗಣ್ಣವರ ಎಂಬುವರಿಗೆ ಕರೆ ಮಾಡಿ ನಾವು ಎಸಿಬಿ ಅಧಿಕಾರಿಗಳಿದ್ದು, ನೀವು ಬೇನಾಮಿ ಆಸ್ತಿ ಸಂಪಾದಿಸಿದ್ದೀರಿ ಎನ್ನುವ ದೂರು ಬಂದಿದೆ. ನೀವು ಈಗ …

Read More »

ಗೋಕಾಕ‌ ಬಿಜೆಪಿ ಪಕ್ಷದಿಂದ ಅಂಗವಿಕಲರಿಗೆ ಹಾಗೂ ವೃದ್ಧರಿಗೆ ಪರಿತರ(ಊರುಗೋಳು) ವಿತರಣೆ.!

ಗೋಕಾಕ: ಭಾರತೀಯ ಜನತಾ ಪಾರ್ಟಿ‌ ಗೋಕಾಕ ನಗರ ಘಟಕದಿಂದ ಸೇವಾ ಸಪ್ತಾಹ, ಪಂಡಿತ ದೀನದಯಾಳ ಹಾಗೂ ಗಾಂಧೀಜಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಅಂಗವಿಕಲರಿಗೆ ಹಾಗೂ ವೃದ್ದರಿಗೆ ಪರಿತರ ವಿತರಣಾ ಕಾರ್ಯಕ್ರಮ ಸೋಮವಾರದಂದು ಜರುಗಿತು. ಇಲ್ಲಯ ಶ್ರೀ ಮೆರಕನಟ್ಟಿ ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಅಂಗವಿಕಲರಿಗೆ ಹಾಗೂ ವೃದ್ಧರಿಗೆ ಪರಿತರ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, …

Read More »

ಆನಂದ ಚೋಪ್ರಾ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಸತೀಶ್ ಜಾರಕಿಹೊಳಿ

ಸವದತ್ತಿ: ಸವದತ್ತಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು, ಅನಾರೋಗ್ಯದಿಂದ ನಿಧನರಾದ ತಾಲ್ಲೂಕಿನ ಸವದತ್ತಿ ಮುಖಂಡ ಆನಂದ ಚೋಪ್ರಾರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾತನಾಡಿದ ಅವರು, ಆನಂದ ಚೋಪ್ರಾ ಅವರು ಕಳೆದ ಒಂದುವರೆ ದಶಕದಿಂದ ಸಾಮಾಜಿಕ ಸೇವಕಾರಗಿ ಗುರುತಿಸಿಕೊಂಡಿದ್ದರು. ಹಲವಾರು ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಜನರಿಗೆ ಹತ್ತಿರವಾಗಿದ್ದರು. ಶೈಕ್ಷಣಿಕ, ಸಾಮಾಜಿಕ, ಕ್ರೀಡೆ, ಸಾಹಿತ್ಯ, ಮತ್ತು ರಾಜಕೀಯವಾಗಿ ಸಾಕಷ್ಟು ಪ್ರಭಾವಿಗಳಾಗಿದ್ದರು. ಅವರ ಅಕಾಲಿಕ ನಿಧನ …

Read More »

ಸದಾಶಿವ ಆಯೋಗದ ವರದಿಯನ್ನು ಬಹಿರಂಗ ಚರ್ಚೆಗೆ ಬಿಡದೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಒತ್ತಾಯಿಸಿ ಮನವಿ.

ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಐಕ್ಯತೆ ಉಳಿಸಿಕೊಳ್ಳುವುದು ಒಕ್ಕೂಟದ ಉದ್ದೇಶವಾಗಿದೆ. ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಲು ಸರಕಾರ ಪಾರದರ್ಶಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಆಶಿಸುತ್ತೇವೆ ಆದರೆ ಕೆಲ ಶಕ್ತಿಗಳು ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಸಮುದಾಯಗಳಲ್ಲಿ ಪರಸ್ಪರ ದ್ವೇಷ ಹುಟ್ಟು ಹಾಕಲು ಯತ್ನಿಸುತ್ತಿದೆ. ಲಂಬಾಣಿ, ಬೋವಿ, ಕೊರಚು ಮತ್ತು ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ತೆಗೆದು ಹಾಕಬೇಕೆಂಬ ಅನಗತ್ಯ ಚರ್ಚೆಯನ್ನು ಹುಟ್ಟುಹಾಕಲಾಗಿದೆ. ವರ್ಗೀಕರಣ, ಕೆನೆಪರದೆ, ಮತ್ತಿತರ ವಿಚಾರಗಳನ್ನು ಹರಿಬಿಟ್ಟು ನಮ್ಮ …

Read More »

ಗೋಕಾಕ ಪೌರಕಾರ್ಮಿಕರ ಕನಸು ನನಸು ಮಾಡಿದ ಗೋಕಾಕ ಸಾಹುಕಾರ..!

ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …

Read More »

ಸ್ನೇಹಿತನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಸಚಿವ ರಮೇಶ್ ಜಾರಕಿಹೊಳಿ‌.

ಇಂದು ಬೆಳಗ್ಗೆ ನಿಧನರಾದ ಸವದತ್ತಿಯ ಹಿರಿಯ ಸಮಾಜ ಸೇವಕ ಆನಂದ್ ಚೋಪ್ರಾ ಅವರ ಮೃತದೇಹಕ್ಕೆ ಪುಷ್ಪಗುಚ್ಛವಿರಿಸಿ ವಂದಿಸಿದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* *ಶೋಕ ವ್ಯಕ್ತಪಡಿಸಿದ ಸಚಿವ ಜಾರಕಿಹೊಳಿ‌* ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ ನನ್ನ ಸ್ನೇಹಿತ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ. ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ …

Read More »