ಬೆಳಗಾವಿ, ಸೆ.19: ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಒತ್ತುವರಿ ಜಾಗದ ಸಮಸ್ಯೆಗಳ ಕುರಿತು ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ ಜಲಸಂಪನ್ಮೂಲ …
Read More »ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ಮಾತ್ರ ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ
ಮೈಸೂರು: ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸೆ. 30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು. ಕೇಂದ್ರದ ಗ್ರೀನ್ ಸಿಗ್ನಲ್ ಬರುವವರೆಗೂ ತರಗತಿಗಳ ಆರಂಭ ಇಲ್ಲ. ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಒಂದು ವೇಳೆ ಸಮಸ್ಯೆ ಆದರೆ ಡಿಡಿಪಿಐ, ಬಿಇಒ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ …
Read More »ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ & ರಮೇಶ್ ಜಾರಕಿಹೊಳಿ ಭೇಟಿ !ಮಹಾ ರಾಜಕಾರಣದಲ್ಲಿ ಭಾರಿ ಸಂಚಲನ..
ಕಿರುತೆರೆ ಮತ್ತು ಹಿರಿತೆರೆಯ ಪ್ರಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಸುತ್ತ ಸೃಷ್ಟಿಯಾದ ಗೊಂದಲ ಮತ್ತು ತನ್ನ ವೈಫಲ್ಯಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಚಳಿಬಿಡಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿಯ ಹೈಕಮಾಂಡ್ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಮತ್ತು ಗಡಿ ಜಿಲ್ಲೆ ಬೆಳಗಾವಿಯ ಪ್ರಭಾವಿ ಮುಖಂಡರಾದ ಕರ್ನಾಟಕದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ …
Read More »ಮೇಕೆದಾಟು ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ*
ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಕೇಂದ್ರ ಜಲಶಕ್ತಿ ಸಚಿವರಾದ *ಶ್ರೀ ಗಜೇಂದ್ರ ಸಿಂಗ್ ಶೇಖಾವತ್* ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ …
Read More »SSLCಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಸತೀಶ ಜಾರಕಿಹೊಳಿಯಿಂದ ಸನ್ಮಾನ
ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸನ್ಮಾನಿಸಿದರು. ಇಲ್ಲಿನ ಸದಾಶಿವ ನಗರ ತಮ್ಮ ನಿವಾಸದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಪ್ರೋತ್ಸಾಹಧನ ನೀಡುವ ಮೂಲಕ ಅಭಿನಂದಿಸಿದರು. ಶೇ 97 ರಷ್ಟು ಫಲಿತಾಂಶ ಪಡೆದು ಹುಕ್ಕೇರಿ ತಾಲೂಕಿಗೆ ಪ್ರಥಮ ಬಂದ ಜ್ಯೋತಿಬಾ ಬಾಗೇವಾಡಿ, ರೋಹಿಣಿ, ಪ್ರಶಾಂತ ಪಾಟೀಲ್, ಪ್ರಶಾಂತ ಪೂಜಾರಿ, ಜಯಲಕ್ಷ್ಮಿ, ಸುನಿತಾ ಪಾರಿಶವಾಡ್, …
Read More »ಇಂದಿನಿಂದ ಸೆ.20 ರವರೆಗೆ ಬಿಜೆಪಿಯಿಂದ ಸೇವಾ ಸಪ್ತಾಹ ಕಾರ್ಯಕ್ರಮ : ಸುಭಾಸ ಪಾಟೀಲ
ಗೋಕಾಕ : ರೈತರ ಕಲ್ಯಾಣಕ್ಕಾಗಿ, ರಾಷ್ಟ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾರ್ಯಕರ್ತರು ಸೇವಾ ಸಪ್ತಾಹ ಮೂಲಕ ವಿವಿಧ ಬಗೆಯ ಸೇವಾ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾ ಗ್ರಾಮೀಣ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಅರಭಾವಿ ಮಂಡಲ ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದೇ ಸೆ. 17 ರಂದು ಮೋದಿ ಅವರ …
Read More »ಕಲಿಕೆ ನೆಪದಲ್ಲಿ ಹಿಂದಿ ಭಾಷೆ ಹೇರಿಕೆ ಸರಿಯಲ್ಲ: ಪವನ ಮಾಹಾಲಿ೦ಗಪುರ.
ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಕನಾ೯ಟಕ ರಕ್ಷಣಾ ವೇದಿಕೆ ಗಜಸೇನೆ ಉತ್ತರ ಕರ್ನಾಟಕ ಯುವ ಘಟಕ ಅಧ್ಯಕ್ಷರಾದ ಪವನ ಮಾಹಾಲಿ೦ಗಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .ಈ ವಿಚಾರವಾಗಿ …
Read More »ಲಂಚ ಪ್ರಕರಣ: ಎಫ್ಡಿಎ ಬಂಧನ, ನಾಲ್ವರ ವಿರುದ್ಧ ಕೇಸ್…!
ಹಾವೇರಿ: ಪರಿಶಿಷ್ಟ ಜಾತಿಯವರಿಗೆ ಸರಕಾರದಿಂದ ನೀಡುವ ಜಮೀನು ಮಂಜೂರಾತಿ ಮಾಡಲು ಫಲಾನುಭವಿಯಿಂದ ಪ್ರಥಮ ದರ್ಜೆ ಸಹಾಯಕ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿದ್ದಾನೆ. ಹಾವೇರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಈ ಘಟನೆ ನಡೆದಿದೆ. ದೇವಗಿರಿಯ ಜಿಲ್ಲಾಡಳಿತ ಭವನದಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ನಾಲ್ವರು ನೌಕರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಒಬ್ಬ …
Read More »ಮೇಕೆದಾಟು, ಎತ್ತಿನಹೊಳೆ ನೀರಾವರಿ ಯೋಜನೆ : ಶೀಘ್ರವೇ ದೆಹಲಿಗೆ ಸಿಎಂ ನೇತೃತ್ವದ ನಿಯೋಗ – ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ.
ಬೆಂಗಳೂರು : ರಾಜ್ಯದಲ್ಲಿನ ಮಹತ್ವದ ಮೇಕೆದಾಟು, ಎತ್ತಿನಹೊಳೆ ಯೋಜನೆ ಸಹಿತ ಬೃಹತ್ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಮತ್ತು ಕಾನೂನು ತೊಡಕುಗಳ ನಿವಾರಣೆಗೆ ತಕ್ಷಣದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹೊಸದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನಕ್ಕೆ ಕೆಲ ಕಾನೂನು ಮತ್ತು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು …
Read More »ಮಾನ್ಯ ಗೃಹ ಸಚಿವರ ಗಮನಕ್ಕೆ
ವಿಷಯ: ಪರೀಕ್ಷಾ ಕೇಂದ್ರ ಬದಲಿಸುವ ಕುರಿತು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೆನೆಂದರೆ ದಿನಾಂಕ ೨೦-೦೯-೨೦೨೦ ರಂದು ನಡೆಯುವ ನಾಗರಿಕ ಪೊಲೀಸ್ ಹುದ್ದೆಯ ಪರೀಕ್ಷೆಯು ನಡೆಯಲಿದ್ದು ಆದರೆ ಪರೀಕ್ಷಾ ಕೇಂದ್ರ ಗಳು ಬಹಳ ದೂರವಾಗಿರತ್ತವೆ ನಾಗರಿಕ ಪೊಲೀಸ್ ಹುದ್ದೆಯ ಆಕಾಂಕ್ಷಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕಷ್ಟಕರ ವಾಗುತ್ತಿದೆ ಮತ್ತು ಆ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿದ್ದು ಅಭ್ಯರ್ಥಿಗಳು ಹೊಗಲು ಹಿಂದೇಟು ಹಾಕುತ್ತಿದ್ದಾರೆ ಆದ ಕಾರಣ ಪರೀಕ್ಷಾ ಕೇಂದ್ರ ಗಳನ್ನು ಬದಲಿಸಿ ಆಯಾ …
Read More »