ಬೆಂಗಳೂರು : ರಾಜ್ಯದಲ್ಲಿನ ಮಹತ್ವದ ಮೇಕೆದಾಟು, ಎತ್ತಿನಹೊಳೆ ಯೋಜನೆ ಸಹಿತ ಬೃಹತ್ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಮತ್ತು ಕಾನೂನು ತೊಡಕುಗಳ ನಿವಾರಣೆಗೆ ತಕ್ಷಣದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹೊಸದಿಲ್ಲಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನಕ್ಕೆ ಕೆಲ ಕಾನೂನು ಮತ್ತು ತಾಂತ್ರಿಕ ತೊಡಕುಗಳಿವೆ. ಅವುಗಳನ್ನು …
Read More »ಮಾನ್ಯ ಗೃಹ ಸಚಿವರ ಗಮನಕ್ಕೆ
ವಿಷಯ: ಪರೀಕ್ಷಾ ಕೇಂದ್ರ ಬದಲಿಸುವ ಕುರಿತು ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೆನೆಂದರೆ ದಿನಾಂಕ ೨೦-೦೯-೨೦೨೦ ರಂದು ನಡೆಯುವ ನಾಗರಿಕ ಪೊಲೀಸ್ ಹುದ್ದೆಯ ಪರೀಕ್ಷೆಯು ನಡೆಯಲಿದ್ದು ಆದರೆ ಪರೀಕ್ಷಾ ಕೇಂದ್ರ ಗಳು ಬಹಳ ದೂರವಾಗಿರತ್ತವೆ ನಾಗರಿಕ ಪೊಲೀಸ್ ಹುದ್ದೆಯ ಆಕಾಂಕ್ಷಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಕಷ್ಟಕರ ವಾಗುತ್ತಿದೆ ಮತ್ತು ಆ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಬೀಳುತ್ತಿದ್ದು ಅಭ್ಯರ್ಥಿಗಳು ಹೊಗಲು ಹಿಂದೇಟು ಹಾಕುತ್ತಿದ್ದಾರೆ ಆದ ಕಾರಣ ಪರೀಕ್ಷಾ ಕೇಂದ್ರ ಗಳನ್ನು ಬದಲಿಸಿ ಆಯಾ …
Read More »ಭ್ರಷ್ಟ ಇಂಜಿನಿಯರ್ ಲಂಚದಾಹ : ಎಸಿಬಿ ಬಲೆಗೆ…..!
ಬದಾಮಿ: ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಎಇಇ(ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನೀಯರ್) .ಕೆ.ಡಿ ಕರಮಳ್ಳಿ , ಲಂಚ ಸ್ವೀಕರಿಸುತ್ತಿರುವ ಸಮಯದಲ್ಲಿ ಎಸಿಬಿ ಅಧಿಕಾರಿಗಳ ದಾಳಿ ಬಲೆಗೆ ಬಿದ್ದಿದ್ದಾರೆ. 2018-19 ನೇ ಸಾಲಿನಲ್ಲಿ ಬಾದಾಮಿ ತಾಲೂಕಿನ ಕಾತರಕಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಕೊಳ್ಳಲಾದ ಕಾಮಗಾರಿಗಳಿಗೆ ಸರಬರಾಜು ಮಾಡಿದ ಕಚ್ಚಾವಸ್ತುಗಳು ಸಂಭಂಧಿಸಿದ ವೋಚರ್ ಮತ್ತು ಅಳತೆ ಪುಸ್ತಕಗಳನ್ನು ನೀಡಲು ಗುತ್ತಿಗೆದಾರರಿಗೆ 60 ಸಾವಿರ ಲಂಚದ …
Read More »ಬೆಳಗಾವಿಯ ನೂತನ ಡಿಸಿಪಿಯಾಗಿ ವಿಕ್ರಂ ಆವಟೆ ನೇಮಕ ….!
ಬೆಳಗಾವಿ- ಬೆಳಗಾವಿಯ ಕಾನೂನು ಮತ್ತು ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ವಿಕ್ರಂ ಆಮಟೆ ಅವರನ್ನು ಡಿಸಿಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿಯ ಪೋಲೀಸ್ ಇಲಾಖೆಯಲ್ಲಿ ವರ್ಗಾವಣೆಯ ಪರ್ವ ಆರಂಭವಾಗಿದ್ದು, ಇತ್ತೀಚಿಗಷ್ಟೆ ಡಿಸಿಪಿ,ಸೀಮಾ ಲಾಟ್ಕರ್, ಮತ್ತು ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆ ಆಗಿತ್ತು ವಿಕ್ರಂ ಆಮಟೆ …
Read More »ಲಂಚ ಪಡೆಯುವಾಗ ಸಿಕ್ಕಿ ಬಿದ್ದ ಗ್ರಾಮ ಪಂಚಾಯತ್ ಭ್ರಷ್ಟ ಕಾರ್ಯದರ್ಶಿ.
ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಕುರಿತು …
Read More »ಶಾಲೆಗಳು ಕೊರೋನಾ ಹೆಸರಿನಲ್ಲಿ ಹೆಚ್ಚಿನ ಶುಲ್ಕ ಪಡೆದರೆ ಶಿಸ್ತುಕ್ರಮ : ಸಚಿವ ಎಸ್. ಸುರೇಶ್‌ಕುಮಾರ್
ಧಾರವಾಡ: ‘ಶಾಲಾ ಶುಲ್ಕ ಭರಿಸಿಕೊಳ್ಳುವುದರ ಜತೆಗೆ ಸ್ಯಾನಿಟೈಸೇಷನ್ ನೆಪದಲ್ಲಿ ಕೊರೊನಾ ಶುಲ್ಕವನ್ನು ಪಾಲಕರಿಂದ ವಸೂಲು ಮಾಡಿದ್ದು ಕಂಡುಬಂದರೆ, ಅಂಥ ಶಾಲಾ ಆಡಳಿತ ಮಂಡಳಿಗಳ ವಿರುದ್ಧ ಕೋವಿಡ್ ಕಾನೂನಿನಡಿ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದರು. ‘ವಿದ್ಯಾಗಮ’ ಅನುಷ್ಠಾನ ಕುರಿತು ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಲಾ ಶುಲ್ಕ ವಿಚಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳ …
Read More »ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ರೈತರೊಂದಿಗೆ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ.
ಎತ್ತಿನಹೊಳೆ ಯೋಜನೆ ; ಭೂ ಸ್ವಾಧೀನ ಕುರಿತು ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರೊಂದಿಗೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಚರ್ಚೆ ನಡೆಸಿದರು. ವಿಕಾಸ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಗೆ ಹಾಸನ ಜಿಲ್ಲೆಯ ರೈತರು ಮತ್ತು ಕಾಫಿ ಬೆಳೆಗಾರರನ್ನು ಆಹ್ವಾನಿಸಿ, ಅವರೊಂದಿಗೆ ಯೋಜನೆಯ ಭೂ ಸ್ವಾಧೀನ, ಕಾಮಗಾರಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಚಿವರು …
Read More »ಲಂಚ ಪ್ರಕರಣ: ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ…..!
ತೆಲಂಗಾಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು 1.12 ಕೋಟಿ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಮೇಡಕ್ ಜಿಲ್ಲೆಯ ಹೆಚ್ಚುವರಿ ಕಲೆಕ್ಟರ್ ಗಡ್ಡಮ್ ನಾಗೇಶ್ ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ನರ್ಸಾಪುರ ಮಂಡಲದ ಚೆಪ್ಪಲೂರ್ತಿ ಗ್ರಾಮದಲ್ಲಿ 112 ಎಕರೆ ಜಮೀನಿಗೆ ಸಂಬಂಧಿಸಿದಂತೆ ನೋ ಅಬ್ಜಕ್ಷನ್ ಸರ್ಟಿಫಿಕೇಟ್ ನೀಡಲು ಲಂಚಕ್ಕೆ ಬಲವಂತ ಮಾಡಿದ್ದರು. ಎಕರೆಗೆ 1 ಲಕ್ಷ ರೂಪಾಯಿಯಂತೆ 112 ಎಕರೆಗೆ 1.12 …
Read More »ಆಟೋ ಡಾಕ್ಟರ್ ಈಗ ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ….!
ದಾವಣಗೆರೆ: ಮೇಲಧಿಕಾರಿಗಳ ಕಿರುಕುಳಕ್ಕೆ ನಲುಗಿ ಹೆಚ್ಚು-ಕಡಿಮೆ ಕಳೆದೊಂದು ವರ್ಷದಿಂದ ವನವಾಸ ಅನುಭವಿಸಿದ್ದ, ಆಟೋ ಚಾಲನೆ ಮೂಲಕ ತಮಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದ ವೈದ್ಯಾಧಿಕಾರಿಯ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ. ವೈದ್ಯಾಧಿಕಾರಿ ಡಾ.ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ದಾವಣಗೆರೆಯಲ್ಲಿ ಆಟೋ ಓಡಿಸುವ ಮೂಲಕ ಆಟೋ ಡಾಕ್ಟರ್ ಎನಿಸಿಕೊಂಡಿದ್ದ ರವೀಂದ್ರನಾಥ್ ಇದೀಗ ಮೂಲ ವೃತ್ತಿಗೆ ಮರಳಿದ್ದಾರೆ. ಮತ್ತೆ ಜಿಲ್ಲಾಮಟ್ಟದ …
Read More »ರೈತರ ಬಳಿ ಲಂಚ ಪಡೆಯುತ್ತಿದ್ದ ಭ್ರಷ್ಟ ಅಧಿಕಾರಿ ಎಸಿಬಿ ಬಲೆಗೆ….!
ಗದಗ : ಮುಂಡರಗಿ ರೈತರಿಗೆ ಸಹಾಯಧನ ಬಿಡುಗಡೆ ಲಂಚ ಪಡೆಯುತ್ತಿದ್ದ ತೋಟಗಾರಿಕೆ ಇಲಾಖೆಯ ಅಧಿಕಾರಿಯೊಬ್ಬರು ಮಂಗಳವಾರ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಮುಂಡರಗಿ ತಾಲೂಕು ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ್ ಹನುಮಂತಪ್ಪ ಬಾರಕೇರ್ ಎಂಬುವವರು ತಮ್ಮ ಕಚೇರಿಯಲ್ಲಿ ರೈತರೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಆರೋಪಿಯನ್ನು ಬಂಧಿಸಿದ್ದಾರೆ. ತಾಲೂಕಿನ ರೈತರೊಬ್ಬರು ತಮ್ಮ ಎರಡು ಹೆಕ್ಟರ್ ಜಮೀನಿನಲ್ಲಿ ಪೊಪ್ಪಾಯಿ ಬೆಳೆ ಬೆಳೆದಿದ್ದರು. ಅದಕ್ಕೆ ಸರಕಾರದಿಂದ ಪ್ರತಿ ಹೆಕ್ಟರ್‌ಗೆ …
Read More »