ಮುಂಬೈ: ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿ ಹಿನ್ನೆಲೆ ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಪ್ರಸ್ತುತ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡ್ಡಾಯ ಪ್ರೋಟೋಕಾಲ್ ನಂತೆ ನಟ ಸಂಜಯ್ ದತ್ ಅವರಿಗೆ ಕೋವಿಡ್ -19 ಪರೀಕ್ಷೆ ನಡೆಸಲಾಗಿದ್ದು ಅವರ ವರದಿಗಳು ನೆಗೆಟಿವ್ ಬಂದಿದೆ, ನಟ ಸಂಜಯ್ ದತ್ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು ಆದರೆ ವೈದ್ಯಕೀಯ ಪರೀಕ್ಷೆಯ ಕಾರಣ ಇನ್ನೂ ಸ್ವಲ್ಪ ಸಮಯದವರೆಗೆ ಅವರು …
Read More »ಶಿವಮೊಗ್ಗ-ರಾಣೇಬೆನ್ನೂರ ರೈಲು ಯೋಜನೆ ಅನುಷ್ಠಾನ: ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ
ಬೆಳಗಾವಿ,: ಬೆಳಗಾವಿ-ಧಾರವಾಡ ಮತ್ತು ಶಿವಮೊಗ್ಗ-ರಾಣೇಬೆನ್ನೂರ ಯೋಜನೆಗಳನ್ನು ಮುಂದಿನ ರೈಲ್ವೆ ಬಜೆಟ್ ನಲ್ಲಿ ಅಳವಡಿಸಿಕೊಂಡು ಆದಷ್ಟು ಬೇಗನೇ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ತಿಳಿಸಿದ್ದಾರೆ. ಶಿವಮೊಗ್ಗ ಮುಖ್ಯ ರೈಲು ನಿಲ್ದಾಣದಲ್ಲಿ ಲಿಫ್ಟ್, ಅರಸಾಳು ನಿಲ್ದಾಣದಲ್ಲಿ ಮೂಲಸೌಕರ್ಯಗಳು, ಸ್ಟೇಷನ್ ಬಿಲ್ಡಿಂಗ್ (ಮ್ಯೂಸಿಯಂ ಬಿಲ್ಡಿಂಗ್) ಹಾಗೂ ವಿಸ್ತರಣೆಗೊಂಡ ರೈಲ್ವೆ ಫ್ಲಾಟ್ ಫಾರ್ಮ್ ಇವುಗಳನ್ನು ಶನಿವಾರ (ಆ.8) ವರ್ಚುವಲ್ ವೇದಿಕೆಯ ಮೂಲಕ ತಮ್ಮ ಬೆಳಗಾವಿ ಕಚೇರಿಯಿಂದಲೇ ಉದ್ಘಾಟಿಸಿ ಅವರು …
Read More »ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಜಾರಕಿಹೊಳಿ ಕುಟುಂಬದವರಿಂದ ಸಂತಾಪ.
ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡ) ಅವರು ಇಂದು ನಿಧನರಾಗಿದ್ದಾರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಮತ್ತು ಗ್ರಾಮ ದೇವತೆ …
Read More »ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.
ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …
Read More »ಪಂಪ್ಸೆಟ್ ನೋಡಲು ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದ||SDRF ಇಂದು ಬೆಳಿಗ್ಗೆ ಶೋಧ ಕಾರ್ಯಾಚರಣೆ ಮುಂದುವರೆಸಿದೆ.!
ಬೆಳಗಾವಿ- ಶನಿವಾರ ಸಂಜೆ ಹೊತ್ತಿಗೆ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗ್ಗೆ 8 ಗಂಟೆಯಿಂದ ಯುವಕನಿಗಾಗಿ ಶೋಧ ಕಾರ್ಯಚರಣೆ ಆರಂಭವಾಗಿದೆ. ಡುಮ್ಮಉರುಬಿನಟ್ಟಿ ಗ್ರಾಮದ ಬಳಿ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಜಲಾವೃತವಾದ ಗದ್ದೆಯಲ್ಲಿ ಮುಳುಗಡೆಯಾದ ಪಂಪ್ಸೆಟ್ ನೋಡಲು ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದು ನೀರಿನ ಸೆಳುವಿಗೆ ಕೊಚ್ಚಿ ಹೋಗಿದ್ದಾನೆ. 18 ವರ್ಷದ ನಾಗರಾಜ್ ಹೆಬ್ಬಳ್ಳಿ ಬಳ್ಳಾರಿ ನಾಲಾದಲ್ಲಿ …
Read More »ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ
ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದ್ದು ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು ವೆಬ್ಸೈಟ್ ಮತ್ತು ಶಾಲೆಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಇದರೊಂದಿಗೆ ವಿದ್ಯಾರ್ಥಿಗಳು ನೊಂದಾಯಿಸಿದ ಮೊಬೈಲ್ ಸಂಖ್ಯೆಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಆಗಸ್ಟ್ 10 ರಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟಿಸಲಿದ್ದು ವಿದ್ಯಾರ್ಥಿಗಳ ಮೊಬೈಲ್ ಫೋನ್ ಗೆ ಎಸ್ಎಂಎಸ್ ಮೂಲಕ ಸಂದೇಶ ರವಾನಿಸಲಾಗುವುದು. ಮನೆಯಲ್ಲೇ …
Read More »ಮಹಾರಾಷ್ಟ್ರ ಸಚಿವರೊಂದಿಗೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ
ಮಹಾರಾಷ್ಟ್ರ ಸಚಿವರೊಂದಿಗೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಜಲಸಂಪನ್ಮೂಲ ಸಚಿವರಾದ *ರಮೇಶ್ ಜಾರಕಿಹೊಳಿ* ಪ್ರವಾಹ ಸ್ಥಿತಿ ಉದ್ಭವಿಸದಂತೆ ತಡೆಗಟ್ಟುವುದು; ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ತುರ್ತು ಸಂದರ್ಭಗಳಲ್ಲಿ ನದಿತೀರದ ಗ್ರಾಮಗಳ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಲಸಂಪನ್ಮೂಲ ಸಚಿವರಾದ ಶ್ರೀ *ರಮೇಶ್ ಜಾರಕಿಹೊಳಿ* ಅವರು ಇಂದು ಮಹಾರಾಷ್ಟ್ರದ ಆರೋಗ್ಯ ಇಲಾಖೆಯ ಸಚಿವರಾದ *ಶ್ರೀ ರಾಜೇಶ್ ಟೋಪೆ* ಅವರ ಜತೆ ಚರ್ಚೆ ನಡೆಸಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚ ಮಲ್ಲಾಪೂರ ಪಿಜಿಯಲ್ಲಿ ಕೊರೋನಾ ಸೊಂಕಿತರಿಗೆ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕ ಆರಂಭ
ಘಟಪ್ರಭಾ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚ ಮಲ್ಲಾಪೂರ ಪಿಜಿಯಲ್ಲಿ ಕೊರೋನಾ ಸೊಂಕಿತರಿಗೆ ಕೇಂದ್ರಿಕೃತ ಆಮ್ಲಜನಕ ಪೂರೈಕೆ ಘಟಕ ಆರಂಭ :ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಘಟಪ್ರಭಾ : ಕೊರೋನಾ ರೋಗಿಗಳ ಆರೈಕೆಗಾಗಿ ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಘಟಕಗಳನ್ನು ಪ್ರಾರಂಭಿಸಿದ್ದಾರೆಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು. ಇತ್ತೀಚೆಗೆ ಇಲ್ಲಿಯ ಮೊರಾರ್ಜಿ ದೇಸಾಯಿ …
Read More »ಬೆಳಗಾವಿ/ಚಿಕ್ಕೋಡಿ:ಕೃಷ್ಣಾನದಿ ತೀರದ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕೃಷ್ಣಾನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಬೋಟ್ ಮೂಲಕ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ಚಿಕ್ಕೋಡಿ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮದ ಕೃಷ್ಣಾನದಿ ತೀರದ ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ನೆರೆ ಪರಿಸ್ಥಿತಿಯನ್ನು ಅವಲೋಕಿಸಿದರು. ಶಾಸಕ ಗಣೇಶ ಹುಕ್ಕೇರಿ, ಡಿಸಿ …
Read More »ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಬಿ.ಎಸ್. ಯಡಿಯೂರಪ್
ಬೆಂಗಳೂರು: ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ತಾಲೂಕು ಕೇಂದ್ರಗಳಲ್ಲಿ ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದ್ರು. ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಮಾತನಾಡಿದರು. ಅಧಿಕಾರಿಗಳು ತಾಲೂಕುಗಳನ್ನು ವಿಭಾಗಿಸಿಕೊಂಡು ತಾಲೂಕು ಕೇಂದ್ರದಲ್ಲಿ ಮೊಕ್ಕಾಂ …
Read More »