Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

20 ಜಿಂಕೆ ಚರ್ಮ ವಶಕ್ಕೆ: ಜಿಂಕೆ ಚರ್ಮ ಮಾರಾಟಗಾರರ ಜಾಲ ಬೇಧಿಸಿದ ಅರಣ್ಯ ಇಲಾಖೆ.

ಕೊಪ್ಪಳ: ಜಿಲ್ಲೆಯಿಂದ 20 ಜಿಂಕೆಗಳ ಚರ್ಮವನ್ನು ಬೆಂಗಳೂರು, ಮಂಗಳೂರು ಭಾಗಕ್ಕೆ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಖರೀದಿದಾರರ ವೇಷದಲ್ಲಿ ತೆರಳಿದ್ದ ಅರಣ್ಯ ಅಧಿಕಾರಿಗಳ ತಂಡವು ಬೇಧಿಸಿ, ಏಳು ಜನರನ್ನು ಬಂಧಿಸಿದೆ. ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ಕಳೆದ 2 ವರ್ಷದ ಹಿಂದೆ ಜಿಂಕೆ ಚರ್ಮ ಮಾರಾಟದ ಕುರಿತಂತೆ ಕೇಸ್ ದಾಖಲಾಗಿತ್ತು. ಕೇಸ್ ದಾಖಲಾದ ವ್ಯಕ್ತಿಯ ಮೊಬೈಲ್ ನಂಬರನ್ನು ಒಂದು ವರ್ಷದಿಂದ ಟ್ರ್ಯಾಕ್ ಮಾಡುತ್ತಿದ್ದ ಬೆಂಗಳೂರು ಹಾಗೂ ಮಂಗಳೂರು ಮೊಬೈಲ್ ಫಾರೆಸ್ಟ್‌ ಸ್ಕ್ವಾಡ್ ತಂಡವು …

Read More »

ಲಂಚ ಪ್ರಕರಣ -ತಹಶೀಲ್ದಾರ ಅಮಾನತ್ತು.

ಬಳ್ಳಾರಿ : ಹೂವಿನಹಡಗಲಿ ತಾಲೂಕಿನ ತಹಶೀಲ್ದಾರರ ಮೇಲೆ ಲಂಚ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ ವಿಜಯಕುಮಾರ್ ಅವರನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಅವರು ಆದೇಶ ಹೊರಡಿಸಿದ್ದಾರೆ. ಮರಳು ಲಾರಿಗೆ ಅನುಮತಿ ನೀಡುವ ಸಲುವಾಗಿ ಹೂವಿನಹಡಗಲಿ ತಾಲೂಕು ತಹಶೀಲ್ದಾರರಾದ ವಿಜಯಕುಮಾರ್ ಎಂಬುವರು ಲಂಚ ಕೇಳಿದ್ದಾರೆ‌. ತಹಶೀಲ್ದಾರ ಲಂಚ ಕೇಳಿದ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ಕಳೆದ 20 ದಿನಗಳ ಹಿಂದೆ ಹೂವಿನಹಡಗಲಿ ತಾಲೂಕಿನ ಉಮೇಶ್ ನಾಯಕ್ ಎಂಬುವವರ …

Read More »

7.5 ಮೀಸಲಾತಿ ಕಲ್ಪಿಸಲು ಹಿಂದೇಟು ಹಾಕಿದಲ್ಲಿ ಸಾಮೂಹಿಕ ರಾಜೀನಾಮೆ ನೀಡಲು ಬದ್ದ

ದಾವಣಗೆರೆ: ವಾಲ್ಮೀಕಿ  ಸಮುದಾಯಕ್ಕೆ 7. 5 ಮೀಸಲಾತಿ ಕಲ್ಪಿಸುವ ಬಗ್ಗೆ ಮತ್ತೆ ಕೂಗು ಎದ್ದಿದ್ದು, ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಮೀಸಲಾತಿ ಘೋಷಿಸದಿದ್ದಲ್ಲಿ, ವಾಲ್ಮೀಕಿ ಸಮಯದಾಯದ ಎಲ್ಲ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲು  ಬದ್ದರಾಗಿರುವ ಒಮ್ಮತ ಮೂಡಿಬಂದಿದೆ. ಮೀಸಲಾತಿ ವಿಚಾರವಾಗಿ ರಾಜನಹಳ್ಳಿ  ವಾಲ್ಮೀಕಿ ಗುರು ಪೀಠದಲ್ಲಿ ಭಾನುವಾರ ಪ್ರಸನ್ನಾನಂದಪುರ ಸ್ವಾಮೀಜಿಗಳ ನೇತೃತ್ವದ  ಮಹತ್ವದ ಸಭೆ ನಡೆದಿದ್ದು,  ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಸಚಿವ ಶ್ರೀರಾಮುಲು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. …

Read More »

ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ‌ ; ಸಚಿವ ರಮೇಶ್ ಜಾರಕಿಹೊಳಿ‌ ಅವರಿಗೆ ಸನ್ಮಾನಿಸಿದ ಮುಖಂಡರು.

ಪೀರಣವಾಡಿಯಲ್ಲಿ ಯಾವುದೇ ಅಡೆತಡೆಗೆ ಅವಕಾಶ ನೀಡದೇ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಹಕರಿಸಿದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರನ್ನು ಪೀರಣವಾಡಿ ಗ್ರಾಮಸ್ಥರು ಮತ್ತು ಕುರುಬರ ಸಂಘದ ಪ್ರತಿನಿಧಿಗಳು ಸನ್ಮಾನಿಸಿ ಗೌರವಿಸಿದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಇಂದು ಮಾನ್ಯ ಸಚಿವರನ್ನು ಭೇಟಿ ಮಾಡಿದ ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರತಿನಿಧಿಗಳು ಹಾಗೂ ಪೀರನವಾಡಿ ಗ್ರಾಮಸ್ಥರು ಯಾವುದೇ ಅಡೆತಡೆಗಳಿಲ್ಲದೇ ಮೂರ್ತಿ ಪ್ರತಿಷ್ಠಾಪನೆ ಮಾಡಲು‌ ಅನುವು ಮಾಡಿಕೊಟ್ಟ ಸಚಿವರನ್ನು …

Read More »

ನಾಳೆ ಹಾವೇರಿ ಜಿಲ್ಲೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ

ಹಾವೇರಿ:  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಅವರು ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.  ಹಾವೇರಿ ಜಿಲ್ಲೆಯ ಕಾಂಗ್ರೆಸ್  ಪಕ್ಷದ ಸಂಘಟನೆಯನ್ನು ಕುರಿತು ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಪಿ.ಬಿ. ರೋಡ್ ಕಾಂಗ್ರೆಸ್ ಕಚೇರಿ ಬಳಿ ಇರುವ ಸಜ್ಜನ ಫಂಕ್ಷನ್ ಹಾಲ್ ನಲ್ಲಿ  ಸಂಜೆ 4 ಗಂಟೆಗೆ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.  ಮಾಜಿ  ಸಚಿವರು, ಶಾಸಕರು ವಿಧಾನ ಪರಿಷತ್ ಸದಸ್ಯರು.ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು,ಮಹಿಳಾ ಘಟಕದ ಅಧ್ಯಕ್ಷರು,ಯುವ ಕಾಂಗ್ರೇಸ್ …

Read More »

ಇಂದ್ರಜಿತ್ ಲಂಕೇಶ್ ಬಹಿರಂಗ ಕ್ಷಮೆಯಾಚಿಸಬೇಕು: ನಟಿ ಮೇಘನಾ ರಾಜ್ ಪತ್ರ.

ಬೆಂಗಳೂರು: ಸ್ಯಾಂಡಲ್​​ವುಡ್​ ಡ್ರಗ್​ ಮಾಫಿಯಾ ವಿಚಾರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಸಂಬಂಧ ನಿರ್ದೇಶಕ ಇಂದ್ರಜಿತ್ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ನಟಿ ಮೇಘನಾ ರಾಜ್ ಆಗ್ರಹಿಸಿದ್ದಾರೆ. ಈ ಕುರಿತು ಮೇಘನಾ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಮೇಘನಾ  ರಾಜ್ ​​ರಿಂದ ವಾಣಿಜ್ಯ ಮಂಡಳಿಗೆ ಪತ್ರ ನನ್ನ ಪತಿ ತೀರಿಕೊಂಡು ಮೂರು ತಿಂಗಳು ಕಳೆದಿಲ್ಲ. ಆಗಲೇ ಅವರ ಮೇಲೆ ಇಲ್ಲಸಲ್ಲದ ಆರೋಪ ಹೇರಲಾಗ್ತಿದೆ. ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ನನಗೆ ನೋವಾಗಿದೆ. ಗರ್ಭವತಿ …

Read More »

ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ.!

ಗೋಕಾಕ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೆರಿಸುವ ಮೂಲಕ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ 3.30 ಕೋಟಿ ವೆಚ್ಚದಲ್ಲಿ ಉಪ್ಪಾರಟ್ಟಿ – ಮಮದಾಪೂರ ವರೆಗೆ ಐದು ಕಿಮೀ ರಸ್ತೆ ನಿರ್ಮಾಣ ಕಾಮಗಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಂಜನಿಯರಿಂಗ್ ಇಲಾಖೆಯಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯಡಿಯಲ್ಲಿ 73.44 ಲಕ್ಷ ರೂಪಾಯಿ ವೆಚ್ಚದಲ್ಲಿ ಬೆಟಗೇರಿ ಗ್ರಾಮದಿಂದ …

Read More »

ಲಂಚ ಪ್ರಕರಣ: ಬಿಸಿಎಂ ಇಲಾಖೆಯ ಅಧಿಕಾರಿ ಎಸಿಬಿ ಬಲೆಗೆ.

ಸುರಪುರ: ಇಲ್ಲಿಯ ಬಿಸಿಎಂ ಇಲಾಖೆಯ ಅಧಿಕಾರಿ ಹಣಮಂತ (ಬಾಬು) ಅವರು ಗುರುವಾರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಲಂಚ ಪಡೆಯುತ್ತಿದ್ದಾಗ ಯಾದಗಿರಿಯ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಬೈಲಾಪುರ ಗ್ರಾಮದ ನಾಗರಾಜ ಮೇಟಿ ಅವರ ಸಿಂಧುತ್ವ ವಿಷಯಕ್ಕೆ ಸಂಬಂಧಪಟ್ಟಂತೆ ಬಿಸಿಎಂ ಅಧಿಕಾರಿ ₹5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ₹2000 ಕೊಡುವಂತೆ ಒತ್ತಾಯಿಸಿದ್ದರು. ಹಣ ಪಡೆಯುತ್ತಿರುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಾಂತಗೌಡ ಅಯ್ಯಣ್ಣ …

Read More »

ನಟಿ ರಾಗಿಣಿ ಸಿಸಿಬಿ ವಶಕ್ಕೆ…..!

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ …

Read More »

ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ : ಡಾ.ರಾಜೇಂದ್ರ ಸಣ್ಣಕ್ಕಿ .

ಜಿಲ್ಲಾ ಹಾಲು ಒಕ್ಕೂಟದಿಂದ ಮೂಡಲಗಿ ತಾಲೂಕಿನ 65 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ.ಗಳ ಪ್ರೋತ್ಸಾಹಧನದ ಚೆಕ್‍ಗಳ ವಿತರಣೆ. ಗೋಕಾಕ : ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಪ್ರಶಂಸನೀಯವೆಂದು ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗುರುವಾರ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟವು ಮೂಡಲಗಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ …

Read More »