Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಯುಪಿಎಸ್ಸಿ ಸಾಧಕಿ ಪ್ರಿಯಾಂಕಾ ಕಾಂಬಳೆಯವರಿಗೆ ಅಭಿನಂದಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ಇತ್ತೀಚಿಗೆ ನಡೆದ  ಯುಪಿಎಸ್ಸಿ ಪರೀಕ್ಷೆಯಲ್ಲಿ  ಸತತ ಅಧ್ಯಯನದ ಮೂಲಕ 670ನೇ ರ್ಯಾಂಕ್  ಪಡೆದು ಉತ್ತಮ ಸಾಧನೆ ಮಾಡಿದ  ಚಿಕ್ಕೋಡಿಯ ಪ್ರಿಯಾಂಕಾ ಕಾಂಬಳೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಅವರು ಭಾನುವಾರ  ಸನ್ಮಾನಿಸಿ, ಗೌರವಿಸಿದರು. ಇಲ್ಲಿನ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ  ಪ್ರಿಯಾಂಕಾ ಕಾಂಬಳೆ ಅವರಿಗೆ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರ ನೀಡಿ ಗೌರವಿಸಿದರು. ಬಡತನದ ಮಧ್ಯೆಯೂ ಪ್ರಿಯಾಂಕಾ ಅವರು, ಉತ್ತಮ ಸಾಧನೆ ಮಾಡಿ ಯುವ ಜನತೆಗೆ ಮಾದರಿಯಾಗಿದ್ದಾರೆ. ಒಳ್ಳೆಯ …

Read More »

ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಮರಣೆ

ನವದೆಹಲಿ : ಇಂದು ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ದ್ವಿತೀಯ ವಾರ್ಷಿಕ ಪುಣ್ಯಸ್ಮರಣೆ. ರಾಜಧಾನಿ ದೆಹಲಿಯ ಶಕ್ತಿಸ್ಥಳದಲ್ಲಿರುವ ಸುದೈವ್ ಅಟಲ್ ಸ್ಮಾರಕಕ್ಕೆ ತೆರಳಿದ ಗಣ್ಯಾತಿಗಣ್ಯರು ಮಾಜಿ ಪ್ರಧಾನಿಗೆ ಪುಷ್ಪ ನಮನ ಸಲ್ಲಿಸಿದರು. ದೇಶದ ಪ್ರಗತಿಗಾಗಿ ಅಟಲ್ ಅವರ ಅಮೂಲ್ಯ ಸೇವೆ ಮತ್ತು ಸಾಧನೆಗಳನ್ನು ದೇಶವು ಸ್ಮರಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ …

Read More »

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಧೋನಿ ವಿದಾಯ

ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ನಿಂದ ದೂರ ಉಳಿದಿದ್ದರು. ವಿವಿಧ ಚಟುವಟಿಕೆಗಳ ಮೂಲಕ ರಜೆ ದಿನಗಳನ್ನು ಕಳೆಯುತ್ತಿದ್ದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಭಾರತಕ್ಕೆ ಎರಡು ವಿಶ್ವಕಪ್ ತಂದುಕೊಟ್ಟ ಯಶಸ್ವಿ ನಾಯಕ ಧೋನಿ, ಐಪಿಎಲ್ ನಲ್ಲಿ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

Read More »

ಸಚಿವ ರಮೇಶ ಜಾರಕಿಹೊಳಿ, ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಗೋಕಾಕ ಹಾಗೂ ಮೂಡಲಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ

ಘಟಪ್ರಭಾ: ಕೋರೋನಾದಂತಹ ಮಾರಕ ಕಾಯಿಲೆಗಳ ಮಧ್ಯ ಬಳಲುತ್ತಿರುವ ಕೊರೋನಾ ಸೊಂಕಿತರ ಆರೈಕೆ ಮತ್ತು ಸುರಕ್ಷತೆಗಾಗಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಾಡುತ್ತಿರುವ ಮಾನವೀಯ ಮೌಲ್ಯಗಳು ಮಾದರಿಯಾಗಿದೆ. ರಾಜ್ಯ ಹಾಗೂ ರಾಷ್ಟ್ರದಲ್ಲಿಯೇ ಅವರ ಸೇವೆ ಅನುಪಮವಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಹೇಳಿದರು. ಶನಿವಾರದಂದು ಇಲ್ಲಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಹೈದರಾಬಾದ್: ತಹಶೀಲ್ದಾರ್ ಮನೆ ಮೇಲೆ ಎಸಿಬಿ ದಾಳಿ ಒಂದು ಕೋಟಿ ರೂಪಾಯಿ ಜಪ್ತಿ!

ಹೈದರಾಬಾದ್​​: ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ತಹಸೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ. ತೆಲಂಗಾಣದಲ್ಲಿ ನಿನ್ನೆ ತಹಶೀಲ್ದಾರ್​​ವೊಬ್ಬರ ಮನೆ ಮೇಲೆ ನಡೆದ ಎಸಿಬಿ ದಾಳಿ ವೇಳೆ ಬರೋಬ್ಬರಿ 1 ಕೋಟಿ ರೂಪಾಯಿಗೂ ಅಧಿಕ ಮೊತ್ತದ ನಗದು ಹಣವನ್ನ ಜಪ್ತಿ ಮಾಡಲಾಗಿದೆ. ಮೆಡ್ಚಲ್-ಮಲ್ಕಜ್ಗಿರಿ ಜಿಲ್ಲೆಯ ಕೀಸಾರಾ ತಹಶೀಲ್ದಾರ್​ ಇರ್ವ ಬಾಲರಾಜು ನಾಗರಾಜು, ತಮ್ಮ ಮನೆಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆ ನಾಗರಾಜು ಹಾಗೂ …

Read More »

ಎಲ್ಲ ಭಾರತೀಯರು ಭಾರತ ದೇಶಕ್ಕಾಗಿ ಹಿರಿಯರು ಕಂಡ ಕನಸು ನನಸು ಮಾಡುವ ನಿಟ್ಟಿನಲ್ಲಿ ಶ್ರಮಿಸಲು ಸತೀಶ ಜಾರಕಿಹೊಳಿ ಕರೆ

ಘಟಪ್ರಭಾ: ಇಂದಿನಿಂದ ಭಾರತ ದೇಶಕ್ಕಾಗಿ ಹಿರಿಯರು  ಕಂಡಂತಹ ಕನಸನ್ನು ನನಸು ಮಾಡುವ  ನಿಟ್ಟಿನಲ್ಲಿ ನಾವು  ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಸೇವಾದಳ ಕಚೇರಿಯಲ್ಲಿ ಧ್ವಜಾರೋಹನ ಬಳಿಕ ಮಾತನಾಡಿದ ಅವರು, ಹಿರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶ ಹೇಗಿರಬೇಕು ಎಂದು ಹಿರಿಯರು ಕಂಡಂತಹ ಕನಸನ್ನು  ನನಸು ಮಾಡುವುದಾಗಿ ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ. ದೇಶದ ಜನರು ಸಮಾನತೆಯಿಂದ ಬಾಳಬೇಕು ಮತ್ತು ಅಭಿವೃದ್ಧಿ ಹೊಂದಬೇಕು …

Read More »

ಬೆಳಗಾವಿ:ಮಳೆಯಲ್ಲೇ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ

ಬೆಳಗಾವಿ:   ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ  74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು, ಜಿಟಿ ಜಿಟಿ ಮಳೆ ನಡುವೆಯೂ ಸರಳವಾಗಿ  ಸಮಾರಂಭ ಆಚರಿಸಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸಾರ್ವಜನಿಕ  ಸಹಭಾಗಿತ್ವ ಇಲ್ಲದೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು  ಮಾತ್ರ ಭಾಗಿಯಾಗಿದ್ದರು. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸನ್ಮಾನ: ಇದೇ ವೇಳೆ ಇಲಾಖೆಯ ವಸತಿ …

Read More »

ಸ್ವಾತಂತ್ರ್ಯ ದಿನಾಚರಣೆ ಪ್ರಶಸ್ತಿ: ರಾಜ್ಯದ 19 ಪೊಲೀಸರಿಗೆ ಗೌರವ

ಹೊಸದಿಲ್ಲಿ: ಸ್ವಾತಂತ್ರ ದಿನಾಚರಣೆ ಅಂಗವಾಗಿ ರಾಷ್ಟ್ರಪತಿಗಳು ನೀಡುವ ಶೌರ್ಯ ಪ್ರಶಸ್ತಿಗೆ ಈ ಬಾರಿ ರಾಜ್ಯದ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದಾರೆ. ಕೇಂದ್ರ ಗೃಹ ಇಲಾಖೆ  ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಕರ್ನಾಟಕ ಪೊಲೀಸ್ ಸಿಐಡಿ ಎಎಸ್‌ಐ ಪ್ರಸನ್ನ ಕುಮಾರ್‌ ಅವರಿಗೆ ರಾಷ್ಟ್ರಪತಿ ಪದಕ ನೀಡಲಾಗಿದೆ. ಇನ್ನು ರಾಜ್ಯದ 18 ಪೊಲೀಸರಿಗೆ ಪ್ರಶಂಸನೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ. 1. ಹೇಮಂತ್‌ಕುಮಾರ್ ರಂಗಪ್ಪ-DSP, ಲೋಕಾಯುಕ್ತ 2. ಪರಮೇಶ್ವರ್ ಹೆಗ್ಡೆ-DSP, ಆರ್ಥಿಕ ಅಪರಾಧ ಇಲಾಖೆ …

Read More »

ಲಂಚ ಪ್ರಕರಣ: ಮುಂಡರಗಿ ತಾಲೂಕಿನ ಮುರಡಿ ಗ್ರಾಮ ಪಂಚಾಯತಿ ಪಿಡಿಓ ಎಸಿಬಿ ಬಲೆಗೆ.

ಗದಗ: ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಬೆಳಗ್ಗೆ ಎಸಿಬಿ ಅಧಿಕಾರಿಗಳ ದಾಳಿಯಲ್ಲಿ ಲಂಚ ಪಡೆಯುವಾಗ ಪಿಡಿಓ ಮತ್ತು ಅಕೌಂಟೆಂಟ್ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಮುಂಡರಗಿ ತಾಲೂಕಿನ ಮುರಡಿ ಗ್ರಾಮ ಪಂಚಾಯತಿ ಪಿಡಿಓ ಸಿದ್ದಪ್ಪ ಡಂಬಳ, ಅಕೌಂಟೆಂಟ್ ಪ್ರದೀಪ್ ಕದಮ್‌ ಎಂಬವವರು 41 ಕಂಪ್ಯೂಟರ್ ಉತಾರ ನೀಡಲು 41 ಸಾವಿರ ಬೇಡಿಕೆ ಇಟ್ಟಿದ್ದಾರೆ. 41 ಸಾವಿರ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಡರಗಿ ಪಟ್ಟಣದ ಅಕೌಂಟೆಂಟ್ …

Read More »

ಸ್ವಾತಂತ್ರ್ಯ ದಿನದ ಶುಭಾಶಯ ಕೋರಿದ ಸಚಿವ ರಮೇಶ್ ಜಾರಕಿಹೊಳಿ‌

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು  ಸ್ವಾತಂತ್ರ್ಯೋತ್ಸವ ದಿನಾಚರಣೆ ಶುಭ ಕೋರಿದ್ದಾರೆ. ನಾಳೆ ದೇಶದಾದ್ಯಂತ ಸ್ವಾತಂತ್ರ್ಯ ದಿನೋತ್ಸವವನ್ನು ಆಚರಿಸುತ್ತಿದ್ದು, ಬ್ರಿಟಿಷ್ ರ ದಾಸ್ಯದ ಸಂಕೋಲೆಯಿಂದ ಭಾರತ ಮುಕ್ತಗೊಂಡ ಈ ದಿನದಂದು ಸ್ವಾತಂತ್ರ್ಯ ಪಡೆಯಲು ಹೋರಾಡಿದ ಎಲ್ಲ ಮಹಾನುಭಾವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ; ಕೋವಿಡ್ ಯೋಧರನ್ನು ಗೌರವಿಸೋಣ. ನಾಡಿನ ಜನತೆಗೆ 74ನೇ ಸ್ವಾತಂತ್ರ್ಯ ದಿನೋತ್ಸವದ ಶುಭಾಶಯಗಳು-ರಮೇಶ್ ಜಾರಕಿಹೊಳಿ‌, ಜಲಸಂಪನ್ಮೂಲ ಸಚಿವರು.

Read More »