ಬೆಳಗಾವಿ: ಪ್ರಸಕ್ತ 2022-23ರ ಹಂಗಾಮಿಗೆ ಅ. 11 ರಂದು ಬೆಳಗ್ಗೆ 10:30ಕ್ಕೆ ಜಿಲ್ಲೆಯ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ಕಬ್ಬು ನುರಿಸುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವರು ಎಂದು ಸತೀಶ್ ಶುಗರ್ಸ್ ಚೇರಮನ್ ಹಾಗೂ ಸಿ.ಎಫ್.ಒ ಪ್ರವೀಣಕುಮಾರ ತಿಳಿಸಿದ್ದಾರೆ. ಸತೀಶ ಶುಗರ್ಸ್ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ಎಲ್ಲ ರೈತ ಬಾಂಧವರಿಗೆ ಅನಂತ ಕೃತಜ್ಞತೆಗಳನ್ನು ಸಲ್ಲಿಸುತ್ತಾ, ನಮ್ಮ ಕಾರ್ಖಾನೆಯು ಕಬ್ಬು ಪೂರೈಸಿದ ರೈತ ಬಾಂಧವರ ಸಹಾಯ …
Read More »*ಭಾರತ ಜೋಡೋ ಪಾದಯಾತ್ರೆ; ಗೋಕಾಕ ಕ್ಷೇತ್ರದಲ್ಲಿ ಕೈ ಕಾರ್ಯಕರ್ತರ ಸಭೆ!*
ಗೋಕಾಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭಾರತ ಜೋಡೋ ಪಾದಯಾತ್ರೆ ಈಗಾಗಲೇ ಮೈಸೂರಿನಲ್ಲಿ ಅದ್ಧೂರಿಯಾಗಿ ಸಾಗುತ್ತಿದ್ದು, ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಅ. 11ನೇ ತಾರೀಖು ಹಿರಿಯೂರಿನಲ್ಲಿ ನಡೆಯುವ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಬೇಕೆಂದು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಹೇಳಿದರು. ನಗರದ ಅರ್ಬನ್ ಬ್ಯಾಂಕ್ನ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಭಾರತ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಪಾದಯಾತ್ರೆ …
Read More »ಎಸ್ಸಿ, ಎಸ್ಟಿ ಸಮುದಾಯಕ್ಕೆಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಗ್ರೀನ್ ಸಿಗ್ನಲ್
ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ಮೂಲಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯನ್ನು ಒಪ್ಪಿಕೊಂಡಿದೆ. ‘SC ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಹೆಚ್ಚಿಸಲು ಮತ್ತು ST ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ. ಶುಕ್ರವಾರ ನಡೆದಿದ್ದ ಸಭೆ: ಶುಕ್ರವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ …
Read More »*ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!*
ಕೆ. ಶಿವಾಪುರ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕೆ.ಶಿವಾಪುರ ಗ್ರಾಮದಲ್ಲಿ ಅಲ್ಲಾಯಪ್ ಮಸೀದಿಯ ಮುಂಭಾಗದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ವಾಲ್ಮೀಕಿ ಜಯಂತಿ ಹಾಗೂ ಈದ್ ಮೀಲಾದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸಿ: ಸಿ.ಪಿ.ಐ ಶ್ರೀಶೈಲ ಬ್ಯಾಕೂಡ
ಘಟಪ್ರಭಾ: ಈ ಬಾರಿ ಇಬ್ಬರು ಮಹಾ ಪುರುಷರ ಜಯಂತಿಗಳು ಒಂದೇ ದಿನ ಬಂದಿರುವುದರಿಂದ ಎಲ್ಲರೂ ಈದ್ ಮೀಲಾದ ಹಾಗೂ ವಾಲ್ಮೀಕಿ ಜಯಂತಿಯನ್ನು ಸೌರ್ಹಾದತೆಯಿಂದ ಆಚರಿಸಬೇಕೆಂದು ಘಟಪ್ರಭಾ ಪೊಲೀಸ್ ಠಾಣೆಯ ಸಿ.ಪಿ.ಐ ಶ್ರೀಶೈಲ ಬ್ಯಾಕೂಡ ಹೇಳಿದರು. ಅವರು ಶುಕ್ರವಾರ ಘಟಪ್ರಭಾ ಪೊಲೀಸ ಠಾಣೆಯಲ್ಲಿ ಈದ್ ಮೀಲಾದ ಹಬ್ಬದ ನಿಮಿತ್ತ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರವಾದಿ ಮೊಹ್ಮದ ಪೈಗಂಬರರು ಹಾಗೂ ಮಹರ್ಷಿ ವಾಲ್ಮೀಕಿಯವರ ಜಯಂತಿ ಅ.09 ರಂದು ಒಂದೇ ದಿನ …
Read More »*ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರು*: *ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ* ನಾಡದೇವತೆ ಮೈಸೂರು ಚಾಮುಂಡೇಶ್ವರಿ ಪ್ರತಿರೂಪದಂತಿರುವ ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 15 ಲಕ್ಷ ರೂ. ಮಂಜೂರಾಗಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲಾರಕೊಪ್ಪ ಚಾಮುಂಡೇಶ್ವರಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಮೊದಲು ಸಣ್ಣ ದೇವಸ್ಥಾನವಿದ್ದ ಇದು ಈಗ ದೊಡ್ಡ ದೇವಸ್ಥಾನವಾಗಿ ಈ ಭಾಗದಲ್ಲಿ ಪ್ರಸಿದ್ಧಿ ಪಡೆದಿದೆ ಎಂದು ಹೇಳಿದರು. ಗ್ರಾಮಸ್ಥರು ಕೂಡಿಕೊಂಡು ದೇವಸ್ಥಾನದ ನೂತನ …
Read More »ಕುರ್ಚಿ, ಸೌಂಡ್ ಸಿಸ್ಟಮ್ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ!
ಗೋಕಾಕ : ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಅರಭಾವಿ ಕ್ಷೇತ್ರ ಹಲವು ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ವಿತರಿಸಿದರು. ಮನ್ನಿಕೇರಿಯ ಭಗಿರಥ ಸಮುದಾಯ ಭವನ, ದಂಡಾಪುರ ಗ್ರಾಮದ ಲಕ್ಷ್ಮೀದೇವಿ ಸಮುದಾಯ ಭವನ , ಮುರದುಂಡಿ ಗ್ರಾಮದ ಲಕ್ಷ್ಮೀದೇವಿ ಸಮುದಾಯ ಭವನ, ವೆಂಕಟಾಪೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ, ಹಳೆಯರಗುದ್ರ ಹೆಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪ, ಮೂಡಲಗಿ – ಮೆಥೋಡಿಸ್ಟ ಚರ್ಚೆ, ಯಾದವಾಡ – ಕನಕ ಭವನ ನಲ್ಲಾನೆಟ್ಟಿ- …
Read More »*ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ಬಿಜೆಪಿ ಸರ್ಕಾರದಿಂದ ಸಂಚಾರ ಪಶು ಚಿಕಿತ್ಸಾಲಯ ವಾಹನ ಸೌಲಭ್ಯ* *ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ …
Read More »ಗಾಂಧಿ ಕುಟುಂಬ-ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಆರ್ ಎಸ್ ಎಸ್ ನಲ್ಲಿ ಕೆಲವರು ಒಳ್ಳೆಯವರು ಇದ್ದಾರೆ. ಅವರಿಗೆ ಅಭಿವೃದ್ಧಿ ಬೇಕಾಗಿ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದ ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ: ಇಡೀ ಕಾಂಗ್ರೆಸ್ ಪಕ್ಷವೇ ಗಾಂಧಿ ಕುಟುಂಬದ ಹಿಡಿತದಲ್ಲಿದೆ ಎನ್ನುವ ಬಿಜೆಪಿಯವರು, ಅವರೇ ಆರ್ ಎಸ್ಎಸ್ನ ಹಿಡಿತದಲ್ಲಿದ್ದಾರೆ. ಇನ್ನೂ ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ. ನಗರದ ಕಾಂಗ್ರೆಸ್ …
Read More »*ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಕೊಟ್ಟ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು …
Read More »