ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಖನಗಾವ ಗ್ರಾಮದ ಡಿ. ಜೀ. ಹಟ್ಟಿಯ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಚಂದ್ರಪ್ಪ ಗಸ್ತಿ, ಸಿದ್ದಗೌಡ …
Read More »ಗೋಕಾಕ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕರ ಸಂಘದ ಪದಾದಿಕಾರಿಗಳ ಆಯ್ಕೆ!
ಗೋಕಾಕ : ತಾಲೂಕಾ ವೃತ್ತಿನಿರತ ಛಾಯಾಗ್ರಾಹಕರ ಸಂಘ ಗೋಕಾಕ 2022-23 ನೇ ಸಾಲಿನ ಪದಾದಿಕಾರಿಗಳ ಆಯ್ಕೆ ನಡೆಯಿತು. ಬುದುವಾರ ದಿನಾಂಕ 23-11-2022 ರಂದು ನಗರದ ಸಂಘದ ಕಾರ್ಯಾಲಯದಲ್ಲಿ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕರ ಸಂಘ ಗೋಕಾಕ 2022-23 ನೇ ಸಾಲಿನ ಪದಾದಿಕಾರಿಗಳ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಲಕ್ಷ್ಮಣ ಯಮಕನಮರ್ಡಿ, ಉಪಾಧ್ಯಕ್ಷರಾಗಿ ರವಿ ಉಪ್ಪಿನ, ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಕೆ ಆರ್,ಸಹ ಕಾರ್ಯದರ್ಶಿಯಾಗಿ ಗಂಗಾಧರ ಕಳ್ಳಿಗುದ್ದಿ, ಖಜಾಂಚಿಯಾಗಿ ರಾಜಶೇಖರ ರಜಪೂತ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ …
Read More »ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಸರ್ವ ಸಮಾಜಕ್ಕೆ ಸದ್ಬಳಕೆಯಾಗಲಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ನವಲಗುಂದ: ನವಲಗುಂದ ಪಟ್ಟಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣವಾಗಿ ಇಂದು ಉದ್ಘಾಟನೆಯಾಗುತ್ತಿದ್ದು ಸಂತಸ ಮೂಡಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 15 ವರ್ಷದ ಹಿಂದೆ ಈ ಸ್ಥಳ ವೀಕ್ಷಿಸಲು ಬಂದಿದೆ. …
Read More »ಹಾಲು ಪೂರೈಸುವ ಫಲಾನುಭವಿಗಳಿಗೆ ಸಹಾಯ ಧನ ಚೆಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ
ಗೋಕಾಕ: ಕರ್ನಾಟಕ ಹಾಲು ಒಕ್ಕುಟ ಮಹಾಮಂಡಳಿಯಿಂದ ಹಾಲು ಪೂರೈಸುವ ಉತ್ಪಾದಕ ಫಲಾನುಭವಿಗಳಿಗೆ ಸಹಾಯ ಧನ ಚೆಕ್ ಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಮಂಗಳವಾರದಂದು ತಮ್ಮ ಗೃಹ ಕಚೇರಿಯಲ್ಲಿ ವಿತರಿಸಿದರು. 4 ಹಾಲು ಸಂಗ್ರಹಿಸುವ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಒಟ್ಟು 19ಲಕ್ಷ ರೂ ಮೊತ್ತದ ಸಹಾಯ ಚೇಕ್, 6ಜನ ಫಲಾನುಭವಿಗಳಿಗೆ ಒಟ್ಟು 4ಲಕ್ಷ ಮೊತ್ತದ ರಾಸು ವಿಮೆ ಚೇಕ ಹಾಗೂ 13ಜನ ಫಲಾನುಭವಿಗಳಿಗೆ ಒಟ್ಟು 19ಲಕ್ಷ ಮೊತ್ತದ ರೈತ ಕಲ್ಯಾಣ …
Read More »6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಎಸ್ಎಸ್ ಬಿಸಿಎ ವಿಧ್ಯಾರ್ಥಿಗಳ ಸಾಧನೆ!
ಗೋಕಾಕ : ನಗರದ ಶ್ರೀ ಶೂನ್ಯ ಸಂಪಾದನ ಮಠದ ಶ್ರೀ ಸಿದ್ಧಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬಿಸಿಎ 6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಹರೀಶ್ ವನ್ನಲ್ಲಿ (92.19%) ಪ್ರಥಮ, ಅಮೃತಾ ತಡಸಳಮಠ(86.31%) ದ್ವಿತೀಯ, ಹಾಗೂ ಮಾಯವ್ವಾ ನಂದಿ (85.50%) ತೃತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜೀಗಳು, ಆಡಳಿತ ಮಂಡಳಿ, ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದರು.
Read More »ಪಠ್ಯದ ಜೊತೆಗೆ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನ ಯಶಸ್ವಿ : ಸಂಗಯ್ಯಾ ಬಾಗೋಜಿಮಠ
ವಿಧ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ*. ಗೋಕಾಕ : ನಗರದ ನ್ಯೂ ಇಂಗ್ಲಿಷ್ ಶಾಲೆಯಲ್ಲಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ವಿಶೇಷವಾದ ವಿಧ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಾಗಾರವನ್ನು ದೈಹಿಕ ಶಿಕ್ಷಕರಾದ ಆರ್ ಬಿ ಮಾವಿನಗಿಡದ, ಪ್ರಭಾರಿ ಮುಖ್ಯೋಪಾಧ್ಯಾಯರಾದ ಬಿ ಎಚ್ ಪಾಟೀಲ ಉದ್ಘಾಟಿಸಿದರು. ಈ ಕಾರ್ಯಾಗಾರವನ್ನು ಕೌಶಲ್ಯ ಬೆಳವಣಿಗೆಯ ತರಬೇತಿದಾರರಾಗಿ ಇದೆ ಶಾಲೆಯ ಹಳೆಯ ವಿದ್ಯಾರ್ಥಿಯಾದ ಸಂಗಯ್ಯಾ ಬಾಗೋಜಿಮಠ ಅವರು ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ವಿಧ್ಯಾರ್ಥಿಗಳಿಗೆ …
Read More »*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ*
ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.* *ಗೋಕಾಕ*: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ ನಡೆದ ತಮ್ಮ 23ನೇ ಹುಟ್ಟು ಹಬ್ಬದ ಸಮಾರಂಭದಲ್ಲಿ …
Read More »ಯಮನಕಮರಡಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಯಮನಕಮರಡಿ: ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಯಮನಕಮರಡಿ ಕ್ಷೇತ್ರದಲ್ಲಿ ನಾವು ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಗ್ರಾಮದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲದಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್, ನೋಟಬುಕ್ ಹಾಗೂ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ 100 ಕುರ್ಚಿ ಹಾಗೂ ಒಂದು ಸೌಂಡ್ ಸಿಸ್ಟಿಮ್ ವಿತರಿಸುವ ಕಾರ್ಯಕ್ರಮದಲ್ಲಿ ಅವರು …
Read More »ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು
ಗೋಕಾಕ : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಸ್ಕೆಟಬಾಲನಲ್ಲಿ ವಿನೋದ್ ಗೌಡರ, ವಿಕಾಸಗೌಡರ, ಆರ್ಯನ್ ಉಪ್ಪಿನ ದ್ವಿತೀಯ ಸ್ಥಾನ, ಮಂಜುನಾಥ್ ಕಿಲಾರಿ ಸೈಕಲಿಂಗನಲ್ಲಿ ದ್ವಿತೀಯ ಸ್ಥಾನ, ವಿಠಲ ಜಾಲಿಗಾರ ಕುಸ್ತಿಯಲ್ಲಿ ದ್ವಿತೀಯ ಸ್ಥಾನ, ವಿಶಾಲ ಜುಗಳಿ ಭಾವಗೀತೆಯಲ್ಲಿ ಪ್ರಥಮ ಸ್ಥಾನ, ಆಕಾಶ ಗೇಜರಾಯ ಬ್ಯಾಟಮೆಂಟನಲ್ಲಿ ದ್ವಿತೀಯ ಸ್ಥಾನ, …
Read More »ಸಿಸಿ ಟಿವಿ ಕ್ಯಾಮರಾ ಕಣ್ಗಾವಲು ಇಲ್ಲದೇ ಕಂಗಾಲಾದ ಗೋಕಾಕ ನಗರದ ಜನತೆ!
ಗೋಕಾಕ : ಈಗಂತೂ ಕಳ್ಳರ ಕಾಟ ಹೆಚ್ಚಾಗಿ ಕಂಡುಬರುತ್ತಿವೆ. ಕೈಚಳಕ ತೋರಿಸಿ ಕದ್ದು ರಾತ್ರೋರಾತ್ರಿ ಪರಾರಿಯಾಗುವ ಅನೇಕ ಘಟನೆಗಳನ್ನು ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ. ಅದೇ ರೀತಿ ಗೋಕಾಕ ನಗರದಲ್ಲಿ ಸಾಕಷ್ಟು ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ ಕಾರಣ ಇಲ್ಲಿ ಸಿಸಿ ಟಿವಿ ಕ್ಯಾಮೆರಾ ಕೊರತೆಯಿಂದ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಅವಶ್ಯಕತೆ ಇದೆ ಮುಖ್ಯವಾಗಿದ್ದು ರಸ್ತೆ ಅಪಘಾತ, ಕಳ್ಳತನ ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ನೆರವಾಗುತ್ತಿದ್ದ …
Read More »
CKNEWSKANNADA / BRASTACHARDARSHAN CK NEWS KANNADA