ಗೋಕಾಕ: ಆರ್ ಟಿಓ ಕಚೇರಿ ಎದುರಿನ ರಸ್ತೆಯ ಬಳಿ ಅಪಘಾತ ಸಂಭವಿಸಿದ್ದು 65 ವರ್ಷದ ವೃದ್ಧ ಮಹಿಳೆ ಮೃತಪಟ್ಟ ಘಟನೆ ನಡೆದಿದೆ .ಮೃತಪಟ್ಟ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕಿಲ್ಲ . ವೃದ್ಧ ಮಹಿಳೆಯ ಬಗ್ಗೆ ಮಾಹಿತಿ ಸಿಕ್ಕರೆ ಗೋಕಾಕ ಶಹರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಗೋಕಾಕ ಪೊಲೀಸರು ಕೋರಿದ್ದಾರೆ .
Read More »*ಜೂಜಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದ ಪೊಲೀಸರು: ಬಂಧಿತರಿoದ 1 ಲಕ್ಷ 85 ಸಾವಿರ ಹಣ 11 ಮೊಬೈಲ್ 8 ಬೈಕ್ ವಶ*
ಗೋಕಾಕ : ಗ್ರಾಮೀಣ ಪೊಲೀಸ್ ಠಾಣಾ ಸರಹದ್ದಿನ ಕೊಣ್ಣೂರು ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟವಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆಯುವಲ್ಲಿ ಜಿಲ್ಲಾ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯ ಕೊಣ್ಣೂರು ಗ್ರಾಮದಲ್ಲಿ ಸಾರ್ವಜನಿಕವಾಗಿ ಇಸ್ಪೀಟ್ ಅಂದರ್ ಬಾಹರ್ ಜೂಜಾಟವಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆಯುವಲ್ಲಿ ಬೆಳಗಾವಿಯ ಅಪರಾಧ ವಿಭಾಗ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಸಿಇಎನ್ ಅಪರಾಧ ಠಾಣೆಯ …
Read More »ಪತ್ತೆಯಾಗದ ಚಿರತೆ; ಭಯದಲ್ಲಿ ಹೊರಗೆ ಬಾರದ ಜನ!
ಬೆಳಗಾವಿ: ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ನುಗ್ಗಿದ ಚಿರತೆ 24 ತಾಸುಗಳ ನಂತರವೂ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ನಿರಂತರ ಶೋಧ ನಡೆಸಿದ್ದಾರೆ. ಇನ್ನೊಂದೆಡೆ, ಚಿರತೆ ಭಯದಿಂದಾಗಿ ಈ ಪ್ರದೇಶದಲ್ಲಿ ಜನರು ಮನೆಯಿಂದ ಹೊರಬಂದಿಲ್ಲ.ಪ್ರತಿ ದಿನ ವಾಯು ವಿಹಾರಿಗಳಿಂದ ತುಂಬಿರುತ್ತಿದ್ದ ಇಲ್ಲಿನ ಜಾಧವ ನಗರ, ಹನುಮಾನ್ ನಗರ, ಸಹ್ಯಾದ್ರಿ ನಗರ, ಟಿ.ವಿ ಸೆಂಟರ್ ಮುಂತಾದ ಪ್ರದೇಶದ ರಸ್ತೆಗಳು ಶನಿವಾರ ಬೆಳಿಗ್ಗೆ ಬಿಕೋ ಎನ್ನುತ್ತಿದ್ದವು. …
Read More »ಶ್ರೀ ಸಾಯಿ ಸಮರ್ಥ ಫೌಂಡೇಶನ್ ಕಾರ್ಯ ಶ್ಲಾಘನೀಯ: ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ
ಗೋಕಾಕ: ಪ್ರಾಚೀನ ಭಾರತ ಕರ್ಮಭೂಮಿಯಾಗಿದ್ದು, ಉತ್ತಮ ಸಂಸ್ಕಾರದಿಂದಾಗಿ ಇಡೀ ಜಗತ್ತಿನಾದ್ಯಂತ ಖ್ಯಾತಿ ಪಡೆದಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವಿಭಾಗೀಯ ಸಂಚಾಲಕ ಎಂ ಡಿ ಚುನಮರಿ ಹೇಳಿದರು. ಶುಕ್ರವಾರದಂದು ನಗರದ ರೋಟರಿ ರಕ್ತ ಭಂಡಾರದ ಸಭಾಂಗಣದಲ್ಲಿ ಶ್ರೀ ಸಾಯಿ ಸಮರ್ಥ ಫೌಂಡೇಶನ್ ಗೋಕಾಕ ಇದರ 2ನೇ ವಾರ್ಷಿಕೋತ್ಸವ ನಿಮಿತ್ಯ ಕಂಪ್ಯೂಟರ್ ತರಬೇತಿ ಕೇಂದ್ರದ ಉದ್ಘಾಟನೆ ಮತ್ತು ನೇತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ರಕ್ತದಾನ ಮಾಡಿದವರಿಗೆ ನಡೆದ ಸತ್ಕಾರ ಸಮಾರಂಭದಲ್ಲಿ …
Read More »ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ!
ಗೋಕಾಕ ಅ 5 : ಮನೆಯಿಂದ ಶೌಚಾಲಯಕ್ಕೆ ತೆರಳುತ್ತಿರುವ ಮಹಿಳೆಯ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ 21 ನೇ ವಾರ್ಡ್‍ನ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಅಬೇದಾ ಮುಸ್ತಫಾ ಕಲ್ಲೋಳಿ ಎಂಬ ಮಹಿಳೆ ಮಧ್ಯಾಹ್ನ ಶೌಚಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಬೀದಿ ನಾಯಿಯು ಮಹಿಳೆಯ ಕಾಲಿಗೆ ಕಚ್ಚಿ ಗಂಭೀರವಾಗಿ ಗಾಯಗೋಳಿಸಿದ್ದು, ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂಬೇಡ್ಕರ್ ನಗರ ಸೇರಿದಂತೆ …
Read More »ಬೆಳಗಾವಿ ಜಿಲ್ಲೆಯ ವಕ್ಫ ಮಂಡಳಿಯ ಜಿಲ್ಲಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸನ್ಮಾನ!
ಘಟಪ್ರಭಾ: ನೂತನವಾಗಿ ಬೆಳಗಾವಿ ಜಿಲ್ಲೆಯ ವಕ್ಫ ಮಂಡಳಿಯ ಜಿಲ್ಲಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ದೂಪದಾಳ ಗ್ರಾಮದ ಮುಸ್ಲಿಂ ಜಮಾತ್ ಅಬೂಬಕರ್ ಫೌಂಡೇಶನ್ ಹಾಗೂ ದೂಪದಾಳ ಗ್ರಾಮದ ಗಣ್ಯ ಮಾನ್ಯರಿಂದ ಸನ್ಮಾನ ಮಾಡಲಾಯಿತು ಇತ್ತೀಚೆಗೆ ವಕ್ಫ ಮಂಡಳಿ ಜಿಲ್ಲಾ ಅದ್ಯಕ್ಷರಾಗಿ ಯಕ್ಸಂಬಾ ಪಟ್ಟಣದ ಅನ್ವರ್ ದಾಡಿವಾಲೆ ಉಪಾಧ್ಯಕ್ಷರಾಗಿ ಸಿಂಗಳಾಪುರ ಗ್ರಾಮದ ವಕೀಲರಾದ ಶಫಿ ಜಮಾದಾರ ಆಯ್ಕೆಯಾಗಿದ್ದರು ಸನ್ಮಾನ ಸ್ವೀಕರಿಸಿ ಜಿಲ್ಲಾಧ್ಯಕ್ಷರು ಅನ್ವರ್ ದಾಡಿವಾಲೆ ಮಾತನಾಡಿ ಮುಸ್ಲಿಂ ಸಮಾಜದ ಅಭಿವೃದ್ಧಿಗೆ ದಿನದ ಇಪ್ಪತ್ನಾಲ್ಕು …
Read More »ಕೆಎಂಎಫ್ ರೈತ ಸ್ನೇಹಿ ಕಾರ್ಯ ಯೋಜನೆಗಳಿಗೆ ಸಚಿವ ಅಮಿತ್ ಶಾ ಹರ್ಷ
ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ* *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ …
Read More »ಹೆಚ್ಚುತ್ತಿರುವ ಬೀದಿ ನಾಯಿಗಳ, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸುವಂತೆ ಕರವೇ ಆಗ್ರಹ!
ಗೋಕಾಕ ಅ 4 : ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ, ಬಿಡಾಡಿ ದನಗಳ ಹಾವಳಿಯನ್ನು ನಿಯಂತ್ರಿಸಿ ಜನನಿಬಿಡು ಪ್ರದೇಶಗಳಲ್ಲಿ ಮೂತ್ರಾಲಯಗಳನ್ನು ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹೋರಾಟ ನಡೆಸಿದರು. ಗುರುವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ಕರವೇ ಕಾರ್ಯಕರ್ತರು ನಗರಸಭೆಯ ಕಾರ್ಯವೈಖರಿಯನ್ನು ಖಂಡಿಸಿ , ಪೌರಾಯುಕ್ತರಿಗೆ ಮನವಿ ಅರ್ಪಿಸಿದರು. ಕಳೆದ ಹಲವಾರು ತಿಂಗಳನಿಂದಲೂ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು …
Read More »ಬಸವ ಪಂಚಮಿ: ರೋಗಿಗಳಿಗೆ ಹಾಲು ವಿತರಿಸಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಮಾನವ ಬಂಧುತ್ವ ವೇದಿಕೆಯ ವತಿಯಿಂದ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಆಚರಿಸಲಾಗಿದ್ದು, ಬೆಳಗಾವಿ, ಗೋಕಾಕ, ಘಟಪ್ರಭ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿಯೂ ಬಸವ ಪಂಚಮಿ ನಿಮಿತ್ತ ಬಡ ಮಕ್ಕಳಿಗೆ, ರೋಗಿಗಳಿಗೆ ಹಾಲು ವಿತರಿಸಲಾಯಿತು. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ರೋಗಿಗಳಿಗೆ ಹಾಲು ವಿತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಕಳೆದ ನಾಲ್ಕು ವರ್ಷಗಳಿಂದ …
Read More »ಮುಗ್ದ ಜನರನ್ನು ಮೂಢನಂಬಿಕೆ ಶೋಷಣೆಯಿಂದ ಮುಕ್ತಗೊಳಿಸಿ: ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ
ಮಾನವ ಬಂಧುತ್ವ ವೇದಿಕೆಯಿಂದ ಹಾಲು- ಹಣ್ಣು ವಿತರಣೆ ಗೋಕಾಕ: ” ಹಾಲು- ಹಣ್ಣು ಪೌಷ್ಟಿಕಾಂಶಯುಳ್ಳ ಆಹಾರ ಇದನ್ನು ವ್ಯರ್ಥ ಮಾಡದೇ ಬಡ ಮಕ್ಕಳಿಗೆ ನೀಡಿದರೆ ಸಮಾಜಕ್ಕೆ ಒಳಿತು” ಎಂದು ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಹೇಳಿದರು. ಮಾನವ ಬಂಧುತ್ವ ವೇದಿಕೆಯಿಂದ ನಗರದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಹಾಲು- ಹಣ್ಣು ವಿತರಿಸುವ ಮೂಲಕ ಬಸವ ಪಂಚಮಿಯನ್ನು ಆಚರಿಸಿ, ಮಾತನಾಡಿದರು, 12ನೇ ಶತಮಾನದಲ್ಲಿಯೇ …
Read More »