Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ; 15 ಕಾಲ ನಿರಂತರ ಸೇವಾ ಪಾಕ್ಷಿಕ ಕಾರ್ಯಕ್ರಮ-ರಾಜೇಂದ್ರ ಗೌಡಪ್ಪಗೋಳ.!

ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನದ ಅಂಗವಾಗಿ ಸೆಪ್ಟೆಂಬರ ದಿ.17 ರಿಂದ ಅಕ್ಟೋಬರ 2ರ ವರೆಗೆ ಬಿಜೆಪಿ ಪಕ್ಷ ಸೇವಾ ಪಾಕ್ಷಿಕ ಸೇವೆಗಾಗಿ ಹದಿನೈದು ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಗೋಕಾಕ ಮತಕ್ಷೇತ್ರದಲ್ಲಿ ಶಾಸಕ ರಮೇಶ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ …

Read More »

ರಾಜ್ಯ ಉಪ್ಪಾರ ಮಹಾಸಭೆಯ ಕಾರ್ಯ ಶ್ಲಾಘನೀಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಬೆಳಗಾವಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭೆಯ ಕಾರ್ಯ ಶ್ಲಾಘನೀಯವಾಗಿದ್ದು, ಮುಂದೆಯೂ ಹೆಚ್ಚಿನ‌ ಕಾರ್ಯಕ್ರಮ ಸಮಾಜದ ವತಿಯಿಂದ ನಡೆಯಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಸಲಹೆ ನೀಡಿದರು.   ಬೆಳಗಾವಿ ನಗರದ ರೈಲ್ವೆ ಸಭಾಭವನದಲ್ಲಿ‌ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.   ಉಪ್ಪಾರ ಸಮಾಜದಲ್ಲಿ ಶೇ. 30 …

Read More »

ಸಿಎಂ ಬೊಮ್ಮಾಯಿಗೆ ಕಮಿಷನ್‌ ಸ್ವಾಗತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: “ರಾಜ್ಯದಲ್ಲಿ 40% ಕಮಿಷನ್‌ ಬಿರುಗಾಳಿ ಇದೆ. ವಿವಿಧ ರಾಜ್ಯಗಳು ಸೇರಿದಂತೆ ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿದಾಗ ಕಮಿಷನ್‌ ಸ್ವಾಗತ ಎಂದು ಬರಮಾಡಿಕೊಳ್ಳಲಾಗಿದೆ. ಹೀಗಾಗಿ, ಬಿಜೆಪಿ ಭ್ರಷ್ಟಾಚಾರದ ಗೀನ್ನಿಸ್‌ ದಾಖಲೆ ಸೇರುವ ನೀರಿಕ್ಷೆ ಇದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ತೀಕ್ಷ್ಮವಾಗಿ ವಾಗ್ದಾಳಿ ನಡೆಸಿದರು. ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 40% ಕಮಿಷನ್‌ ತಾಂಡವಾಡುತ್ತಿದೆ. ಇದಕ್ಕೆ, ಓರ್ವ ಗುತ್ತಿಗೆದಾರ ಬಲಿಯಾಗಿರುವುದು …

Read More »

ಗೋಕಾಕ್: ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !

ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು ಹಲ್ಲೆಗೊಳಗಾದ …

Read More »

ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ

ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್‍ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್‍ಎಫ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್‍ಎಸ್‍ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ ಆರಂಭಗೊಂಡು ಹಂತ-ಹಂತವಾಗಿ 13 ಜಿಲ್ಲೆಗಳನ್ನು ಒಳಗೊಂಡ 55,600 ಅಂಗನವಾಡಿ ಕೇಂದ್ರಗಳಿಂದ 26 …

Read More »

ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು.ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, ಸಿದ್ರಾಮ ಲೋಕನ್ನವರ, …

Read More »

ನಮೋ ಹುಟ್ಟು ಹಬ್ಬ: ಅಮರನಾಥ ಜಾರಕಿಹೊಳಿ ಅವರ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಣೆ!

ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ೭೨ನೇ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಸೇವಾ ಪಾಕ್ಷಿಕ ಅಂಗವಾಗಿ ನಗರದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ ಮಕ್ಕಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವ ನಾಯಕ, ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, …

Read More »

*ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ*

ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಠಿಣ …

Read More »

ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ : ಯತ್ನಾಳ್

ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ ಎಂದು ವಿಧಾನಸೌಧದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠ ಪ್ರಗತಿಪರರು, ನಕ್ಸಲರ ಅಡ್ಡೆಯಾಗಿದೆ ಎಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಚಿತ್ರದುರ್ಗದ ಮಠದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಮಠದ ಆಸ್ತಿ ಬಗ್ಗೆ ತನಿಖೆಯಾಗಬೇಕು ಎಂದು ಹೈಕೋರ್ಟ್​ ಮುಖ್ಯ ನ್ಯಾಮೂರ್ತಿ ಅವರಿಗೆ ಪತ್ರ ಬರೆಯುತ್ತೇನೆ. ಚಿತ್ರದುರ್ಗ ಮುರುಘಾ ಮಠದ ಬಗ್ಗೆ ಸಾರ್ವಜನಿಕರಿಗೆ ಗೊತ್ತಾಗಲಿ …

Read More »

ಮರಾಠಿ ಬಾಯ್ಸ್ 3 ಚಲನಚಿತ್ರ ಬಿಡುಗಡೆಗೆ ಕರವೇ ವಿರೋಧ! ಚಲನಚಿತ್ರ ಬಿಡುಗಡೆ ಮಾಡದಂತೆ ಆಗ್ರಹ.

ಘಟಪ್ರಭಾ : ಬಾಯ್ಸ್ 3 ಮರಾಠಿ ಚಲನಚಿತ್ರ ಬಿಡುಗಡೆಗೆ ಕರ್ನಾಟಕ ರಕ್ಷಣಾ ವೇದಿಕೆ ವಿರೋಧ ನಾಳೆ ಬಿಡುಗಡೆ ಆಗಲಿರುವ ವಿವಾದಾತ್ಮಕ ಮರಾಠಿ ಚಲನಚಿತ್ರ ಬಿಡುಗಡೆಗೆ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲ್ಲೂಕು ಘಟಕ ವಿರೋಧಿಸಿ ಘಟಪ್ರಭಾ ಪೋಲಿಸ್ ಇನ್ಸಪೆಕ್ಟರ್ ರವರ ಮುಖಾಂತರ ಬೆಳಗಾವಿ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕಾರ್ಯಕರ್ತರನ್ನು ಉಧ್ಧೆಸಿಸಿ ಕರ್ನಾಟಕ ರಕ್ಷಣಾ ವೇದಿಕೆಯ ರೈತ ಘಟಕದ ಜಿಲ್ಲಾಧ್ಯಕ್ಷ ರೆಹಮಾನ್ ಮೊಕಾಶಿ ಮಾತನಾಡಿ ವಿವಾದಾತ್ಮಕ ಮರಾಠಿ ಚಲನಚಿತ್ರ ಬಾಯ್ಸದಲ್ಲಿ …

Read More »