*ಗೋಕಾಕ*: ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮೊಂದಿಗೆ ನಾವಿದ್ದೇವೆ. ಸಮಸ್ಯೆಗಳು ಎಲ್ಲರಿಗೂ ಸರ್ವೆ ಸಾಮಾನ್ಯ ಮನೆಯ ಯಜಮಾನ ಆತ್ಮಹತ್ಯೆ …
Read More »*ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ*: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು. ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವದಿಲ್ಲವೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಬುಧವಾರದಂದು ನಗರದ ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ …
Read More »*ಕಾಂಗ್ರೆಸ್ಸಿಗೆ ಕೈ ಕೊಟ್ಟ ಮತದಾರ, ಗ್ಯಾರಂಟಿ ಯೋಜನೆಗೆ ಸರಕಾರದಿಂದ ಬ್ರೇಕ್- ಜಗದೀಶ ಶೆಟ್ಟರ್
*ಅರಭಾವಿಮಠದಿಂದ ಲೋಕಾಪೂರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಹಾಗೂ ಅರಭಾವಿ ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಸಂಸದರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಮತದಾರರ ಮುಂದೆ ಕಾಂಗ್ರೇಸಿನವರು ಒಡ್ಡಿದ ಹಣಬಲ, ತೋಳಬಲ, ಆಸೆ-ಆಮಿಷಗಳ ಆಟ ನಡೆಯಲಿಲ್ಲ. ಜೊತೆಗೆ ಕಾಂಗ್ರೇಸ್ಸಿನ ಗ್ಯಾರಂಟಿ ಯೋಜನೆಗಳ ಫಲ ನೀಡಲಿಲ್ಲ. ಗೆಲುವಿಗೆ ಎಲ್ಲ ರೀತಿಯ ಶತ ಪ್ರಯತ್ನಗಳನ್ನು ಮಾಡಿದರೂ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವಕ್ಕೆ ಮತದಾರ ಪ್ರಭುಗಳು ಬಿಜೆಪಿಗೆ ಆಶೀರ್ವಾದ ಮಾಡಿ ನನ್ನ ಸೇವೆಗೆ …
Read More »ವಿಶ್ವ ಪರಿಸರ ದಿನಾಚರಣೆ ಆಚರಣೆ ; ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಚಾಲನೆ
ಗೋಕಾಕ : ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಎಸಿಎಫ್ ಎಸ್.ಪಿ.ಅಭಯಂಕರ, ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಗ್ರಾಮ ಪಂಚಾಯತ್ ಅಧ್ಯಕ್ಷ ಸಿದ್ದಪ್ಪ ಸಿಂಗಮಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
Read More »ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾ ಸಿಎಂ ಏಕನಾಥ ಸಿಂಧೆ ಸ್ಪಂದನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಈಚೆಗೆ ಸಿಎಂ ಸಿದ್ದರಾಮಯ್ಯನವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರಿಗೆ ಪತ್ರ ಬರೆದಿದ್ದರು. ಸಿಎಂ …
Read More »ಹಿಲ್ ಗಾರ್ಡನ್ ಕಛೇರಿಯಲ್ಲಿ ಶ್ರೀ ಮಹರ್ಷಿ ಭಗೀರಥ ಮಹಾರಾಜರ ಜಯಂತಿಯನ್ನು ಆಚರಣೆ
ಗೋಕಾಕ: ಹಿಲ್ ಗಾರ್ಡನ್ ಕಛೇರಿಯಲ್ಲಿ ಶ್ರೀ ಮಹರ್ಷಿ ಭಗೀರಥ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು ಹಿಲ್ ಗಾರ್ಡನ್ ಸಿಬ್ಬಂದಿಗಳಿಂದ ಶ್ರೀ ಮಹರ್ಷಿ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಲೋಕ ಕಲ್ಯಾಣಕ್ಕಾಗಿ ಗಂಗೆ ಧರೆಗಿಳಿಸಿದ ಭಗೀರಥ: ಭಗೀರಥ ಒಬ್ಬ ಶ್ರೇಷ್ಟ ಗುರುಭಕ್ತನಾಗಿ ಪುರಾಣಪುರುಷನಾಗಿ, ತನ್ನ ಸಾಹಸ, ಏಕಾಗ್ರ ಮನಸ್ಥಿತಿಗೆ ತಪೋನಿಷ್ಠೆಗೆ ಪ್ರಸಿದ್ಧನಾಗಿದ್ದನಿಂದ ಭಗೀರಥ ಪ್ರಯತ್ನ ಎಂಬ ನುಡಿ ಎಲ್ಲೆಡೆ ಪ್ರಸರಿಸಿತು. ಸತ್ಕಾರ್ಯಗಳಿಂದ ಜನರಿಗೆ ಒಳ್ಳೆಯದಾಗಬೇಕು. ಭೂಮಿಗೆ ಗಂಗೆಯನ್ನು ತರುವಲ್ಲಿ ಕಠೊರ ತಪಸ್ಸು …
Read More »ಲೋಕೋಪಯೋಗಿ ಸಚಿವರ ಕಛೇರಿಯಲ್ಲಿ ವಿಶ್ವ ಗುರು ಶ್ರೀ ಬಸವೇಶ್ವರ, ಶ್ರೀ ಛತ್ರಪತಿ ಶಿವಾಜಿ ಮಹಾರಾಜರ, ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ.
ಗೋಕಾಕ: ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ವಿಶ್ವ ಗುರು ಶ್ರೀ ಬಸವೇಶ್ವರ ಹಾಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಮ್ಯಾನೇಜರ್ ವಿ ಆರ್ ಪರಸನ್ನವರ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಅರವಿಂದ್ ಕಾರ್ಚಿ, ವಿನೋದ್ ಡೊಂಗರೆ, ಪ್ರಕಾಶ್ ಬಸಾಪುರೆ, ಪಾಂಡು ರಂಗಸುಭೆ , ಕಾಂಗ್ರೆಸ್ …
Read More »ಲೋಕಸಭಾ ಚುನಾವಣೆ; ಗೋಕಾಕ ಕ್ಷೇತ್ರದಲ್ಲಿ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ.07 ರಂದು ನಡೆಯಲಿದ್ದು, ಸುಗಮ ಮತ್ತು ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಗೋಕಾಕ ಮತಕ್ಷೇತ್ರದ ಹಲವು ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರತ ಚುನಾವಣಾ ಆಯೋಗದ ಅನುಮೋದಿಸಿರುವಂತೆ ಮತದಾರರು ತಮ್ಮ ಮತ ಚಲಾಯಿಸುವ ಮೊದಲು ಮತದಾನ ಕೇಂದ್ರಗಳಲ್ಲಿ ಅವರ ಗುರುತಿಗಾಗಿ ಮತದಾರರ ಗುರುತಿಸಿ ಚೀಟಿ …
Read More »ತೆಲಸಂಗನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ
ಅಥಣಿ: ಬ್ರಿಟಿಷರು ಭಾರತ ಬಿಟ್ಟು ಹೋದ ಬಳಿಕ ಕಾಂಗ್ರೆಸ್ ಪಕ್ಷದ ಸರ್ವ ಪ್ರಧಾನಿಗಳು ದೇಶದಲ್ಲಿ ಡ್ಯಾಮ್ ಗಳನ್ನು ನಿರ್ಮಿಸಿದರು. ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಿದರು. ಆದರೆ ಬಿಜೆಪಿಯವರು ಒಂದೇ ಒಂದು ಡ್ಯಾಮ್‌ನ್ನು ದೇಶದಲ್ಲಿ ನಿರ್ಮಿಸಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅಥಣಿ ತಾಲೂಕಿನ ತೆಲಸಂಗದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಚಿಕ್ಕೋಡಿ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಪರ ಮತಯಾಚಿಸಿ ಮಾತನಾಡಿದ …
Read More »*ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ*
*ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್* *ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ ಮತ ಯಾಚಿಸಿದ ಮುಖಂಡರು* ಮೂಡಲಗಿ: ಕಾಂಗ್ರೆಸ್ಸಿಗರು ನನ್ನ ವಿರುದ್ಧವೇ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವುಗಳನ್ನು ಬದಿಗೊತ್ತಿ ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ …
Read More »