ಗೋಕಾಕ: ರೈತರು ಕೃಷಿಯೊಂದಿಗೆ ಹೈನುಗಾರಿಕೆ, ಕುರಿ ಸಾಕಾಣಿಕೆಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಕುರಿಗಾಹಿಗಳಿಗೆ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಗಳು ಮತ್ತು ಕೃತಕ ಗರ್ಭಧಾರಣೆ ಕಾರ್ಯಕರ್ತರಿಗೆ ದ್ರವಸಾರ ಜನಕ ಜಾಡಿ ವಿತರಿಸಿ ಮಾತನಾಡಿದರು. …
Read More »ಪಕ್ಷ ಸಂಘಟನೆಗೆ ಸಾಮಾಜಿಕ ಜಾಲತಾಣ ಸದ್ಬಳಕೆ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಘಟಫ್ರಭ: ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿಸಲು ಆದ್ಯತೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ತರಬೇತಿ ಕೇಂದ್ರದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ದೇಶ-ವಿದೇಶಗಳಲ್ಲಿನ ಬೆಳೆವಣಿಗೆಗಳನ್ನು ಸೆಂಕೆಂಡ್‌ಗಳಲ್ಲಿ ಜನಸಾಮಾನ್ಯರಿಗೆ ತಲುಪಿಸಿ ಅವರ ನಡುವೆ ಸಂವಹನ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ನೆರವಾಗಿವೆ. ಹೀಗಾಗಿ …
Read More »2 ಕೋಟಿ ರೂ ವೆಚ್ಚದ ಪ್ರಭಾ ಶುಗರ್ಸ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ ಪಾಟೀಲ
ಘಟಪ್ರಭಾ* : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು . ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-೪೫ ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …
Read More »ರಾಜಾಸ್ಥಾನದ ಕನ್ಹಯ್ಯಾ ಲಾಲ್ ಹತ್ಯೆ ಗೋಕಾಕದಲ್ಲಿ ಶ್ರೀರಾಮ ಸೇನೆಯಿಂದ ಪ್ರತಿಭಟನೆ.!
ಗೋಕಾಕ: ಕನ್ಹಯ್ಯಾ ಲಾಲ್ ಹತ್ಯೆ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೇದರಿಕೆ ಹಾಕಿರುವದನ್ನು ಖಂಡಿಸಿ ಇಲ್ಲಿಯ ಶ್ರೀರಾಮ ಸೇನೆಯ ಕಾರ್ಯಕರ್ತರು ಶುಕ್ರವಾರದಂದು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. ಶ್ರೀರಾಮ ಸೇನೆಯ ಅಧ್ಯಕ್ಷ ರವಿ ಪೂಜೇರಿ ಮಾತನಾಡಿ, ರಾಜಸ್ಥಾನದ ಉದಪುರ ನಿವಾಸಿ ಕನ್ಹಯ್ಯಲಾಲ್ ಅವರನ್ನು ಮತಾಂದರು ಅಮನುಷವಾಗಿ ಕೊಲೆ ಮಾಡಿ, ದೇಶದ ಪ್ರಧಾನಿಯವರಿಗೆ ಬೇದರಿಕೆಯೊಡ್ಡಿದ್ದು ಗಂಭೀರ ಪ್ರಕರಣ, ಇದರ ಹಿಂದೆ ದೊಡ್ಡ ಜಾಲವೇ …
Read More »“ಸಾಹುಕಾರ್ ಕಮಾಲ್ ಮಹಾರಾಷ್ಟ್ರದಲ್ಲಿ ಸಾಹುಕಾರ್ ಶಕ್ತಿ ಪ್ರದರ್ಶನ” ಜಾರಕಿಹೊಳಿ ಅಭಿಮಾನಿಗಳ ಪೋಸ್ಟ್ ವೈರಲ್!
ಗೋಕಾಕ :ಮಹಾರಾಷ್ಟ್ರದ ಅಘಾಡಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ 15 ರಿಂದ 20 ದಿನ ಮುಂಬೈನಲ್ಲೆ ಸಾಹುಕಾರ್ ಇದ್ದು ಬಿಜೆಪಿ ಸರ್ಕಾರ ತರಲು ಮುಂದಾಗಿದ್ದರು,ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ ಮಹಾರಾಷ್ಟ್ರದ ಮಹಾವಿಕಾಸ ಅಘಾಡಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಸಾಹುಕಾರ್ ರಮೇಶ್ ಜಾರಕಿಹೊಳಿ ಎಂದು ರಮೇಶ್ ಜಾರಕಿಹೊಳಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಪೋಸ್ಟ್ ದಲ್ಲಿ ಏನಿದೆ? “ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ …
Read More »ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರ ಪತನ – ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ!
ನವದೆಹಲಿ: ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ ಬಹುತೇಕ ತೆರೆ ಬಿದ್ದಂತಾಗಿದೆ.ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್‌ಬುಕ್ ಲೈವ್ ಬಂದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ತಮ್ಮ ಎಂಎಲ್ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆ!
ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಮಸ್ಥರು ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ …
Read More »ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಯುವ ನಾಯಕಿ ಪ್ರೀಯಾಂಕ ಜಾರಕಿಹೊಳಿ!
ಗೋಕಾಕ : ೩ನೇ ದಕ್ಷಿಣ ವಲಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಶಾಲಾ ಮಕ್ಕಳಿಗೆ ಯುವ ನಾಯಕಿ ಪ್ರೀಯಾಂಕಾ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದರು. ೨೫ ಹಾಗೂ ೨೬ ರಂದು ಶಿವಮೊಗ್ಗದಲ್ಲಿ ನಡೆದ ದಕ್ಷಿಣ ವಲಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ೧೭ ವರ್ಷದ ಒಳಗಿನ ಗೋಕಾಕದ ಶಾಲಾ ಮಕ್ಕಳಾದ ಕೇದಾರಿ ಜಿದ್ದಿಮನಿ ಪ್ರಥಮ ಸ್ಥಾನ, ಅಭನ್ ಸಾಬ್ ಮುಲ್ಲಾ ದ್ವಿತೀಯ ಸ್ಥಾನ, ಈಶ್ವರ್ ಗಾಣಿಗೇರ್ ದ್ವಿತೀಯ ಸ್ಥಾನ, ಆದರ್ಶ …
Read More »ಯುವ ಜನತೆ ದುಶ್ಚಟಗಳತ್ತ ಮುಖ ಮಾಡದೇ ಕ್ರೀಡೆಗಳತ್ತ ಹೆಚ್ಚು ಆಸಕ್ತಿ ಹೊಂದಿ: ಯುವ ನಾಯಕ ರಾಹುಲ್ ಜಾರಕಿಹೊಳಿ ಕರೆ
ಪಾಶ್ವಾಪುರ: ಇಂದು ಜಾಗತಿಕ ಮಟ್ಟದಲ್ಲಿ ಕ್ರಿಕೆಟ್ ಒಂದು ಜನಪ್ರಿಯ ಕ್ರೀಡೆಯಾಗಿದ್ದು , ಎಲ್ಲ ವಿದ್ಯಾರ್ಥಿಗಳು ಸಾಂಘಿಕ ಸ್ಫೂರ್ತಿಯಿಂದ ಭಾಗವಹಿಸಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಧೃಡರಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಕ್ಷೇತ್ರದ ಬಸ್ಸಾಪುರ ಗ್ರಾಮದಲ್ಲಿ ನಡೆದ ರಾಹುಲ್ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ಟೆನಿಸ ಬಾಲ್ ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ವಿಜೇತರಾದ ಕ್ರೀಡಾಳುಗಳಿಗೆ ಟ್ರೋಫಿ ಹಾಗೂ ಬಹುಮಾನ ವಿತರಿಸಿ ಅವರು ಮಾತನಾಡಿ, ಕ್ರೀಡೆಯು ಜೀವನದ ಮುಖ್ಯ …
Read More »ಏಕಾಏಕಿ ವಾಹಣ ತಡೆಯುವಂತಿಲ್ಲ; ಪೋಲಿಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ!
ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನು ಮಾತ್ರ ತಪಾಸಣೆ ಮಾಡಿ, ಸುಖಾಸುಮ್ಮನೆ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿ ವಾಹನ ತಪಾಸಣೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ರಸ್ತೆಯಲ್ಲಿ ಪೊಲೀಸರು ದಿಢೀರನೇ ವಾಹನ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಪೊಲೀಸರ ತಪಾಸಣೆಗೆ ಬೆದರಿ …
Read More »