ಗೋಕಾಕ- ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಭೇಟಿ ಮಾಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ನದಿ ತೀರದ ಸಂತ್ರಸ್ತರು ಯಾವ ಕಾರಣಕ್ಕೂ ಆತಂಕ ಮಾಡ್ಕೊಬೇಡಿ. ಧೈರ್ಯದಿಂದ ಇರಿ. ಸದಾ ನಾವು ನಿಮ್ಮೊಂದಿಗೆ ಇದ್ದೇವೆ. ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು ಘಟಪ್ರಭಾ ನದಿ ತೀರದ ಸಂತ್ರಸ್ತರ ಬಗ್ಗೆ ಕಾಳಜಿ- ಕನಿಕರ ಭಾವನೆಗಳನ್ನು ಹೊಂದಿದ್ದಾರೆ. ಪ್ರವಾಹದಿಂದ ನದಿ ತೀರದ ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಸಂತ್ರಸ್ತರಿಗೆ ಅನುಕೂಲವಾಗಲು ಅವರನ್ನು …
Read More »ಗೋಕಾಕ ಲೋಕ್ ಅದಾಲತ್ ದಲ್ಲಿ ಒಂದಾದ ಪತಿ-ಪತ್ನಿ ..!
ಗೋಕಾಕ : ತನಗೆ, ಮಕ್ಕಳಿಗೆ ಜೀವನಾಂಶ ಕೋರಿ ಕಳೆದ ಐದು ವರ್ಷಗಳಿಂದ ಪತಿಯ ವಿರುದ್ಧ ನ್ಯಾಯಾಲಯದ ಕದ ತಟ್ಟುತ್ತಿದ್ದ ಎರಡು ಮಕ್ಕಳ ತಾಯಿ ನ್ಯಾಯಾಲಯ ನಡೆಸಿದ ರಾಜಿ ಸಂಧಾನ ಫಲವಾಗಿ ಪತಿ ಜತೆ ಒಂದಾದ ಕ್ಷಣಕ್ಕೆ ಇಲ್ಲಿನ ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ರಾಜೀವ ಗೊಳಸಾರ ಸಾಕ್ಷಿಯಾದರು. ಕೌಟುಂಬಿಕ ವಿಷಯಲ್ಲಿ ಪರಸ್ಪರ ಭಿನ್ನಾಭಿಪ್ರಾಯ ಮೂಡಿದ್ದರಿಂದ 2019ರಲ್ಲಿ ಸುಣಧೋಳಿ ನಿವಾಸಿ ಶ್ರೀದೇವಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪತಿ ಪ್ರವೀಣ ಎಂಬುವವರ ವಿರುದ್ಧ ಜೀವನಾಂಶ …
Read More »ಚಿಕ್ಕೋಡಿ ತಾಯಿ ಮಕ್ಕಳ ಆಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಕ್ರಮ ಜರುಗಿಸಿ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ(ಕರ್ನಾಟಕ ವಾರ್ತೆ) ಜು.12: ಚಿಕ್ಕೋಡಿಯಲ್ಲಿ ನಿರ್ಮಾಣವಾದಂತಹ ತಾಯಿ ಮಕ್ಕಳ ಆಸ್ಪತ್ರೆಯನ್ನು ಬರುವ ಅಗಸ್ಟ 15 ರಂದು ಲೊಕಾರ್ಪಣೆಗೊಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಶುಕ್ರವಾರ (ಜು.12) ಜರುಗಿದ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಚಿಕ್ಕೋಡಿಯಲ್ಲಿ ನಿರ್ಮಾಣವಾದಂತಹ …
Read More »“C-TARA”ಅಪ್ಲಿಕೇಶನ್ ಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ”
ಬೆಳಗಾವಿಯ ಸುವರ್ಣ ಸೌಧದಲ್ಲಿ ಶುಕ್ರವಾರ (ಜು.12) ಜರುಗಿದ 2024-25ನೇ ಸಾಲಿನ ಪ್ರಥಮ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ “C-TARA”ಟಾಸ್ಕ ಅಸೈನಮೆಂಟ್ ಮತ್ತು ರಿವ್ಯೂವ್ ಅಪ್ಲಿಕೇಶನ್” ಗೆ ಲೋಕಪಯೋಗಿ ಸಚಿವರು ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಜಿಲ್ಲೆಯ ಪಂಚಾಯತ್ ರಾಜ್ ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು ಕಾರ್ಯಕ್ಷೇತ್ರಕ್ಕೆ ತೆರಳಿ ಉದಾಹರಣೆಗೆ ಶಾಲೆ, …
Read More »*ಏಕ ಪೇಡ್ ಮಾ ಕೆ ನಾಮ ವನ ಮಹೋತ್ಸವ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ*- ಅರಣ್ಯ ಉಳಿಯಬೇಕಾದರೆ ಗಿಡ- ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಬೇಕೆಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಮ್ಮ ತಾಯಿಯ ಸ್ಮರಣಾರ್ಥವಾಗಿ ನಗರದ ಎನ್ಎಸ್ಎಫ್ ಆವರಣದಲ್ಲಿ “ಏಕ ಪೇಡ್ ಮಾ ಕೆ ನಾಮ” ಅಭಿಯಾನದ ನಿಮಿತ್ತ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅರಣ್ಯವನ್ನು ಉಳಿಸಿ, ಬೆಳೆಸುವ ಜವಾಬ್ದಾರಿಯು ನಮ್ಮ ಮೇಲಿದೆ ಎಂದು ತಿಳಿಸಿದರು. ಗಿಡ- …
Read More »*ತಿಮ್ಮಾಪೂರ ಗ್ರಾಮದ ಮಬನೂರ ತೋಟದಲ್ಲಿ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ-* ಸರಕಾರಿ ಶಾಲೆಗಳಲ್ಲಿನ ಶಾಲಾ ಕೊಠಡಿಗಳ ಕೊರತೆಯನ್ನು ನೀಗಿಸಲು ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದು, ಇದಕ್ಕಾಗಿ ಒಟ್ಟು ೪೮.೩೬ ಲಕ್ಷ.ರೂ. ವಿನಿಯೋಗಿಸಲಾಗಿದೆ ಎಂದು ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕಳೆದ ಸೋಮವಾರದಂದು ತಿಮ್ಮಾಪೂರ ಗ್ರಾಮದ ಮಬನೂರ ತೋಟದ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಶಾಲೆಯಲ್ಲಿ ಶಾಲಾ …
Read More »*ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ*: ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮೊಂದಿಗೆ ನಾವಿದ್ದೇವೆ. ಸಮಸ್ಯೆಗಳು ಎಲ್ಲರಿಗೂ ಸರ್ವೆ ಸಾಮಾನ್ಯ ಮನೆಯ ಯಜಮಾನ ಆತ್ಮಹತ್ಯೆ …
Read More »*ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ*: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು. ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುವದಿಲ್ಲವೆಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಬುಧವಾರದಂದು ನಗರದ ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ …
Read More »*ಕಾಂಗ್ರೆಸ್ಸಿಗೆ ಕೈ ಕೊಟ್ಟ ಮತದಾರ, ಗ್ಯಾರಂಟಿ ಯೋಜನೆಗೆ ಸರಕಾರದಿಂದ ಬ್ರೇಕ್- ಜಗದೀಶ ಶೆಟ್ಟರ್
*ಅರಭಾವಿಮಠದಿಂದ ಲೋಕಾಪೂರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಹಾಗೂ ಅರಭಾವಿ ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಸಂಸದರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಮತದಾರರ ಮುಂದೆ ಕಾಂಗ್ರೇಸಿನವರು ಒಡ್ಡಿದ ಹಣಬಲ, ತೋಳಬಲ, ಆಸೆ-ಆಮಿಷಗಳ ಆಟ ನಡೆಯಲಿಲ್ಲ. ಜೊತೆಗೆ ಕಾಂಗ್ರೇಸ್ಸಿನ ಗ್ಯಾರಂಟಿ ಯೋಜನೆಗಳ ಫಲ ನೀಡಲಿಲ್ಲ. ಗೆಲುವಿಗೆ ಎಲ್ಲ ರೀತಿಯ ಶತ ಪ್ರಯತ್ನಗಳನ್ನು ಮಾಡಿದರೂ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವಕ್ಕೆ ಮತದಾರ ಪ್ರಭುಗಳು ಬಿಜೆಪಿಗೆ ಆಶೀರ್ವಾದ ಮಾಡಿ ನನ್ನ ಸೇವೆಗೆ …
Read More »ವಿಶ್ವ ಪರಿಸರ ದಿನಾಚರಣೆ ಆಚರಣೆ ; ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಚಾಲನೆ
ಗೋಕಾಕ : ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಎಸಿಎಫ್ ಎಸ್.ಪಿ.ಅಭಯಂಕರ, ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಗ್ರಾಮ ಪಂಚಾಯತ್ ಅಧ್ಯಕ್ಷ ಸಿದ್ದಪ್ಪ ಸಿಂಗಮಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
Read More »