Breaking News

cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೇ ಅಗ್ರ ಸ್ಥಾನ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ

ಮೂಡಲಗಿ: ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯ ಈ ಬಾರಿಯೂ ಪ್ರಥಮ ರ್ಯಾಂಕ್ ಗಳಿಸಿದ್ದು, ಶೇ 93.70 ರಷ್ಟು ಫಲಿತಾಂಶ ಬಂದಿದೆ. ಮೂಡಲಗಿ ವಲಯ ಪ್ರಥಮ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ ಬಳಗಕ್ಕೆ …

Read More »

SSLC ವಿದ್ಯಾರ್ಥಿಗಳ ಕೈ ಹಿಡಿದ “ಗೆಲುವಿನತ್ತ ನಮ್ಮ ಪಯಣ” ಪುಸ್ತಕ

ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯಪಡಿಸಿದ ವಿದ್ಯಾರ್ಥಿಗಳು ಬೆಳಗಾವಿ: ವಿದ್ಯಾರ್ಥಿ ಜೀವನದ ಮಹತ್ವದ ಕಾಲಘಟ್ಟ ಎನಿಸಿರುವ ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಶೈಕ್ಷಣಿಕವಾಗಿ ಬೆಳಗಾವಿ ಜಿಲ್ಲೆಯನ್ನು ಬೆಳಗಾವಿ ಶೈಕ್ಷಣಿಕ ಜಿಲ್ಲೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಎಂದು ವಿಂಗಡಿಸಲಾಗಿದ್ದು, ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳು ಎ ಗ್ರೇಡ್ ನಲ್ಲಿ ಸಾಧನೆ ಮಾಡಿವೆ. …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ!

https://karresults.nic.in/   2021-22 ನೇ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ 85.63 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 7,30, 881 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಅವರಲ್ಲಿ 3.58.602 ಬಾಲಕರು ಪಾಸಾಗಿದ್ದಾರೆ. 3,72,279 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಸಾಧನೆ ಮಾಡಿದ್ದಾರೆ. ‌ಸರ್ಕಾರಿ ಶಾಲೆಗಳಲ್ಲಿ ಶೇ.88 ರಷ್ಟು ಫಲಿತಾಂಶ ದಾಖಲಾಗಿದ್ದರೆ, ಅನುದಾನಿತ ಶಾಲೆಗಳಲ್ಲಿ …

Read More »

ಸಂವಿಧಾನದಷ್ಟೇ ಬಸವಣ್ಣವರ ವಚನಗಳು ಹರಿತವಾಗಿವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಪ್ರಸ್ತುತ ಸಂವಿಧಾನ, ಶೋಷಿತರ, ಅಂಬೇಡ್ಕರ್‌ ವಿಚಾರಗಳ ಮೇಲೆ ದಾಳಿ ನಡೆಯುತ್ತಿದೆ ಎಂದ ಶಾಸಕ ಸತೀಶ್‌ ಜಾರಕಿಹೊಳಿ ಚಿಕ್ಕೋಡಿ: ಡಾ. ಬಿ.ಆರ್.‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ. ಆದಕಾರಣ ಬುದ್ದ, ಬಸವಣ್ಣ, ಡಾ. ಅಂಬೇಡ್ಕರ್‌ ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.   ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಆಯೋಜಿಸಿದ್ದ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಪ್ರತಿಮೆಯ …

Read More »

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಂಚದ ಹಾವಳಿ!

ಚಿಕ್ಕೋಡಿ (ಬೆಳಗಾವಿ): ‘ವೈದ್ಯೋ ನಾರಾಯಣೋ ಹರಿಃ’ ಅಂತಾರೆ..ದೇವರ ರೂಪದಲ್ಲಿ ಜನರು ವೈದ್ಯರನ್ನು ನೋಡ್ತಾರೆ.. ಆದರೆ ಕೆಲವು ವೈದ್ಯರು ಮಾತ್ರ ರಕ್ತ ಹೀರುವ ತಿಗಣೆ ತರಹ ಜನರನ್ನು ಹಣಕ್ಕಾಗಿ ಪೀಡಿಸುತ್ತಾರೆ. ಸದ್ಯ ಇಂತಹ ತಿಗಣೆ ತರಹವಿರೋ ವೈದ್ಯರ ಸಾಲಿನಲ್ಲಿ ನಿಲ್ಲುತರಂತೆ ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಡಾ. ಕಮಲಾ ಗಡದ್. ಅಂದ ಹಾಗೇ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎನ್ನುವುದು ಒಂದು ತರಹ ಲಂಚದ ಅಡ್ಡೆಯಾಗಿದೆ ಎನ್ನುತ್ತಾರೆ ಸಾರ್ವಜನಿಕರು. …

Read More »

ಬುದ್ಧ, ಬಸವ ಹಾಗೂ ಅಂಬೇಡ್ಕರ ಅವರ ವಿಚಾರ ಗೋಷ್ಠಿಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಭಾಗಿ!

ಹುಕ್ಕೇರಿ: ” ಶಾಂತಿ ಮತ್ತು ಪ್ರೀತಿಯೇ ಬುದ್ಧ ಜಗತ್ತಿಗೆ ನೀಡಿದ ದೊಡ್ಡ ಕೊಡುಗೆ ” ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕೊಟಬಾಗಿ ಸಮುದಾಯ ಭವನದಲ್ಲಿ ಬುದ್ಧ ಜಯಂತಿ ನಿಮಿತ್ತವಾಗಿ ಆಯೋಜಿಸಲಾಗಿದ್ದ, ಬುದ್ಧ, ಬಸವ ಹಾಗೂ ಅಂಬೇಡ್ಕರ ಅವರ ವಿಚಾರ ಗೋಷ್ಠಿಯಲ್ಲಿ ಬುದ್ಧ ಪೂರ್ಣಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರೂ ಪ್ರೀತಿಯಿಂದ, ಸಹಬಾಳ್ವೆಯಿಂದ ಬದುಕಿದಾಗ ಸಮಾಜದಲ್ಲಿ ನೆಮ್ಮದಿ ಇರಲು ಸಾಧ್ಯ. ಬುದ್ಧ ಬೋಧಿಸಿದ ಬೌದ್ಧ ಧರ್ಮವೂ …

Read More »

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ: ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ ಶ್ರದ್ಧೆ, ಭಕ್ತಿಯನ್ನು …

Read More »

ಉತ್ತಮ ಆರೋಗ್ಯಕ್ಕಾಗಿ ಕ್ರೀಡೆಗಳಲ್ಲಿ ಭಾಗವಹಿಸಿ: ರಾಹುಲ್‌ ಜಾರಕಿಹೊಳಿ

ಮಹಾಲಿಂಗಪೂರ: ಪ್ರತಿಯೊಬ್ಬ ಯುವಕರಿಗೆ ಮಾನಸಿಕ, ದೈಹಿಕ ಹಾಗೂ ಉತ್ತಮ ಆರೋಗ್ಯ ಪಡೆಯಲು ಕ್ರೀಡೆಗಳು ಜೀವನದಲ್ಲಿ ಬಹಳ ಅವಶ್ಯಕ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಬಾಗಲಕೋಟ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಹೆಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ಶ್ರೀ ಹೆಮರೆಡ್ಡಿ ಮಲ್ಲಮ್ಮ ಯುತ್‌ ಸ್ಪೋಡ್ಸ್‌ ಕ್ಲಬ್‌ ಹಮ್ಮಿಕೊಂಡಿದ್ದ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.   ಪ್ರತಿಯೊಬ್ಬರಿಗೂ ಕ್ರೀಡೆಗಳ ಅವಶ್ಯಕತೆ ಹೆಚ್ಚಾಗಿದೆ. ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರು ವ್ಯವಸಾಯದಲ್ಲಿ …

Read More »

ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ದೇವಗಿರಿಯಲ್ಲಿ ಕಣ್ಮನ ಸೆಳೆದ ಸುಮಂಗಲಿಯರ ಕುಂಭಮೇಳ ಬೆಳಗಾವಿ: ತಾಲೂಕಿನ ದೇವಗಿರಿ ಗ್ರಾಮದ ಶ್ರೀ ಮಹಾಲಕ್ಷ್ಮಿ ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಶನಿವಾರ ನಡೆಯಿತು.   ಮುಕ್ತಿಮಠ ಶ್ರೀ ಶಿವಸಿದ್ಧ ಸೋಮೇಶ್ವರ ಸ್ವಾಮಿಜೀ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ನೆರವೇರಿಸಿದರು.   ದೇವಗಿರಿಯಲ್ಲಿ ಜಗನ್ಮಾತೆ ಮಹಾಲಕ್ಷ್ಮಿ ದೇವಿಯ ನೂತನ ಕಟ್ಟಡ ನೆರವೇರಿಸಿ ಶಿವಸಿದ್ಧ ಸೋಮೇಶ್ವರ ಶ್ರೀಗಳಿಂದ ಆಶೀರ್ವಾದ ಪಡೆದರು. ಬಳಿಕ …

Read More »

ರಾಜಾಪುರದಲ್ಲಿ ಲೈಟಿಂಗ್ ಟ್ರೇಸ್ ಉರುಳಿ ಬಿದ್ದ ಘಟನೆ! ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅದೃಷ್ಟವಶಾತ್ ಅವಘಡದಿಂದ ಪಾರು.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಚೂನಮ್ಮ ದೇವಿ ಜಾತ್ರೆಯ ಅಂಗವಾಗಿ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟನೆಗೊಳ್ಳುತ್ತಿದ್ದಾಗಲೇ ಲೈಟಿಂಗ್ ಟ್ರೇಸ್ ಮುರಿದುಬಿತ್ತು. ಸುಮಾರು 20 ಮಂದಿ ಗಣ್ಯರು ವೇದಿಕೆಯ ಮೇಲೆ ಕುಳಿತಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ. ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ರಾಜ್ಯಸಭಾ ಸದಸ್ಯ ಕಡಾಡಿ ಅವಘಡದಿಂದ ಪಾರಾಗಿದ್ದಾರೆ. ರಸಮಂಜರಿ …

Read More »