Breaking News

ಮಳೆ ಆರ್ಭಟದಿಂದ ಕೊಡಗಿನಲ್ಲಿ ಮೊದಲ ಬಲಿ!


ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಮಳೆ ಬಿರುಸು ಪಡೆದುಕೊಂಡಿದ್ದು ಮಳೆಯ ಆರ್ಭಟದಿಂದ ಹಳ್ಳಕೊಳ್ಳಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ನಡುವೆ ಕಿರು ಹೊಳೆಯನ್ನು ದಾಟಲು ಹೋಗಿ ಅಂಗವಿಕಲ ವೃದ್ಧರೊಬ್ಬರು ಕೊಚ್ಚಿ ಹೋಗಿರುವ ಘಟನೆ ಮಡಿಕೇರಿ ತಾಲೂಕಿನ ಅವಂದೂರು ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಅವಂದೂರು ಗ್ರಾಮದ ಬೊಮ್ಮೇಗೌಡನ ಬಾಬಿ(70) ಎಂದು ಗುರುತಿಸಲಾಗಿದೆ.

ಮನೆಯ ಸಮೀಪ ಇರುವ ಕಿರುಹೊಳೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಅಯಾತಪ್ಪಿ ಕಿರುಹೊಳೆಗೆ ಬಿದ್ದಿದ್ದಾರೆ. ನೀರಿನ ಪ್ರಮಾಣ ಏರಿಕೆ ಅಗಿರುವುದರಿಂದ ಮೇಲೆ ಬರಲು ಸಾಧ್ಯವಾಗದೇ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಡಿಕೇರಿ ಅಗ್ನಿಶಾಮಕದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಳೆ ಆರ್ಭಟ ಮುಂದುವರಿದ ಪರಿಣಾಮ ಕಾರ್ಯಾಚರಣೆ ಮಾಡಲು ತೊಡಕು ಉಂಟಾಗಿದ್ದು, ಕೊಚ್ಚಿಹೋದ ಬಾಬಿ ಅವರ ಪತ್ತೆಗಾಗಿ ಶೋಧ ಕಾರ್ಯ ಬೆಳಗ್ಗೆ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಸದ್ಯ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ