ಬಸವಗೋಪಾಲ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಅಡಿಗಲ್ಲು ಸಮಾರಂಭ.
ಅರಭಾವಿ: ತಾಲೂಕಿನ ಅರಭಾಂವಿ -ದುರದುಂಡಿಯ ಸತ್ತಿಗೇರಿ ತೋಟದಲ್ಲಿ ಶ್ರೀ ಬಸವಗೋಪಾಲ ನೀಲಮಾಣಿಕ ಮಠ, ಸುಕ್ಷೇತ್ರದ ಬಂಡಿಗಣಿ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳ ಆಶ್ರಯದಲ್ಲಿ ಶ್ರೀ ಬಸವಗೋಪಾಲ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಅಡಿಗಲ್ಲು ಸಮಾರಂಭ ಪ್ರಯುಕ್ತ ಭೂದೇವಿ ಹಾಗೂ 2000 ಕ್ಕೂ ಹೆಚ್ಚು ಮುತ್ತೈದೆಯರಿಗೆ ಉಡಿ ತುಂಬವ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ತಾಲೂಕಿನ ದುರದುಂಡಿ ಗ್ರಾಮದ ಸತ್ತಿಗೇರಿ ತೋಟದಲ್ಲಿ ಇಂದು ಆಯೋಜಿಸಿದ್ದ ಬಸವಗೋಪಾಲ ಶಿಕ್ಷಣ ಸಂಸ್ಥೆಯ ನೂತನ ಶಾಲಾ ಕಟ್ಟಡ ಅಡಿಗಲ್ಲು ಸಮಾರಂಭಕ್ಕೆ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು.
ನಂತರ ಪ್ರೀಯಂಕಾ ಜಾರಕಿಹೊಳಿ ಅವರು ಮಾತನಾಡಿ ಸಮಾಜ ಹಾಗೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೀಗಾಗಿ, ಎಲ್ಲ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು. ನೂತನ ಶಾಲೆ ಹೆಮ್ಮರವಾಗಿ ಬೆಳೆಯಲಿ, ಬಡಮಕ್ಕಳಿಗೆ ಅನುಕೂಲವಾಗಲಿ ಎಂದು ಶುಭ ಹಾರೈಸಿದರು.
ಲಕ್ಷ್ಮಿ ಏಜುಕೇಷನ್ ಟ್ರಸ್ಟ್ ನಿರ್ದೇಶಕ ಹಾಗೂ ಯುವ ಮುಖಂಡ ಸರ್ವೋತ್ತಮ ಭೀಮಸಿ ಜಾರಕಿಹೊಳಿ ಮಾತನಾಡಿ, ಶಿಕ್ಷಣ ದಾನಗಳಲ್ಲೇ ಶ್ರೇಷ್ಠ ದಾನವಾಗಿದೆ. ಬಡ ಮಕ್ಕಳಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಬಂಡಿಗಣಿ ಸ್ವಾಮೀಜಿಗಳು ನೂತನ ಶಾಲೆ ತೆರೆಯುತ್ತಿದ್ದಾರೆ. ಸುತ್ತಲಿನ ಗ್ರಾಮಗಳ ಜನರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ಸುಕ್ಷೇತ್ರ ಬಂಡಿಗಣಿಯ ಬಸವಗೋಪಾಲ ನೀಲಮಾಣಿಕ ಮಠದ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರನ್ನು ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪಾ ಶೇಖರಗೋಳ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ. ಮನ್ನಿಕೇರಿ, ಎಂ.ಕೆ. ಹುಬ್ಬಳ್ಳಿಯ ಮಲಪ್ರಭಾ ಶುಗರ್ಸ ನಿರ್ದೇಶಕರಾದ ಮೀನಾಕ್ಷಿ ನೆಲವಡಿ, ಮುಖಂಡರಾದ ಸತೀಶ್ ಕಡಾಡಿ, ಪಾಂಡು ಮನ್ನಿಕೇರಿ, ಕರೆಪ್ಪಾ ಜಗದಾಳೆ, ಮಲ್ಲಪ್ಪ ಕುಳ್ಳೋಳಿ ಹಾಗೂ ಗ್ರಾಮದ ಮುಖಂಡರು ಸೇರಿ ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.