ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಜಖಂಗೊಂಡಿದೆ.
ಮಂಗಳವಾರ ಆರಂಭವಾದ ಬಿರುಗಾಳಿಗೆ ಜಿಲ್ಲಾಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಬಿದ್ದಿದೆ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಮರದ ಅಡಿಯಲ್ಲಿ ಸಿಲುಕಿಕೊಂಡಿವೆ, ಅಲ್ಲದೆ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಇಬ್ಬರು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌದಾಯಿಸಿದ್ದು, ಮರ ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.