ಬೆಂಗಳೂರು: ನಾಳೆಯಿಂದ ಸಾರಿಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಿದ್ದಾರೆ. ನಾಳೆಯಿಂದ ಸಾರಿಗೆ ಬಸ್ ಗಳು ರಸ್ತೆಗಿಳಿಯುವುದಿಲ್ಲ ಎಂದು ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸಾರಿಗೆ ನೌಕರರ ಒಕ್ಕೂಟದ ಸದಸ್ಯರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಭೇಟಿಯಾಗಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಭೇಟಿಯಾದ ಅವರು, ಸಾರಿಗೆ ನೌಕರರ ಪ್ರತಿಭಟನೆಯ ಕುರಿತಾದ ಮಾಹಿತಿ, ನೌಕರರ ಬೇಡಿಕೆ ಕುರಿತಂತೆ ಚರ್ಚೆ ನಡೆಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA