ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಇಂದು ನಿಧನ ರಾಗಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ ಅಟಲ್ ಬಿಹಾರಿ ವಾಜಪೇಯಿ ಅವರ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಗಮನಸೆಳೆದಿದ್ದರು.
ಕರ್ನಾಟಕದ ಪ್ರಬಲ ರೈತಪರ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು ಬಿಜೆಪಿ, ಸಮಾಜವಾದಿ ಪಕ್ಷ, ಜಾತ್ಯಾತೀತ ಜನತಾ ದಳ ಸೇರಿದಂತೆ ವಿವಿಧ ಪಕ್ಷಗಳನ್ನು ಪದೇಪದೆ ಬದಲಾಯಿಸಿ ಪಕ್ಷಾಂತರ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದರು.
ತಮ್ಮ ತತ್ವ ಸಿದ್ಧಾಂತಗಳು ಒಗ್ಗದ ಸಂದರ್ಭದಲ್ಲಿ ದಿಢೀರನೆ ಆ ಪಕ್ಷವನ್ನು ತ್ಯಜಿಸಿ ಇನ್ನೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಅವರು ಡಿ. ಕೆ. ಶಿವಕುಮಾರ್ ಜತೆ ಚರ್ಚೆ ನಡೆಸಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಬಗ್ಗೆ ಬೆಂಬಲ ಸೂಚಿಸಿದ್ದರು.
1998 ರಲ್ಲಿ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು. ಬೆಳಗಾವಿ ಜಿಲ್ಲೆಯಲ್ಲದೆ ನೆರೆಯ ಧಾರವಾಡ ಜಿಲ್ಲೆಯಲ್ಲೂ ಅವರು ವಿವಿಧ ಚುನಾವಣೆಯಲ್ಲಿ ಕಣಕ್ಕಿಳಿದಿದ್ದರು.
1989-94 ರಲ್ಲಿ ವಿಧಾನಸಭೆ, 1998 ರಲ್ಲಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು