ಬೆಳಗಾವಿ: ಜಿಲ್ಲೆಯ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರ ಮೇಲೆ ಇಂದು ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಸಲಾಗಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವಂತ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.
ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿಯಲ್ಲಿ ರೋಡ್ ಹಂಮ್ಸ್ ಬಳಿಯಲ್ಲಿ ಕಾರು ನಿಧಾನ ಮಾಡಿದಂತ ಸಂದರ್ಭದಲ್ಲಿ, ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆಸಲಾಗಿದೆ.
ಕಾರಿನ ಮೇಲೆ ದಿಢೀರ್ ಗುಂಡಿನ ದಾಳಿಯಿಂದಾಗಿ ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಗಲ್ಲಕ್ಕೆ ತಗುಲಿರುವಂತ ಗುಂಡು, ಆ ಬಳಿಕ ಚಾಲಕನ ಕೈಗೆ ತಗುಲಿದೆ.
ಅಲ್ಲಿಂದ ತಪ್ಪಿಸಿಕೊಂಡು ಕಾರಿನಿಂದ ಜೋರಾಗಿ ತೆರಳಿದಂತ ವೇಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಹಾಗೂ ಚಾಲಕ ಸಮೀಪದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.