ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಆಡಳಿತಾರೂಢ ಬಿಜೆಪಿ ಪ್ರಮುಖರ ಸಭೆ ಇಲ್ಲಿ ಸೋಮವಾರ ಜರುಗಿದೆ.
ಬೆಳಗಾವಿ ಹಾಗೂ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಪಕ್ಷದ ಪ್ರಮುಖರ ಸಭೆ ಗೌಪ್ಯವಾಗಿ ನಡೆದಿರುವುದು ಹಲವು ವಿಶ್ಲೇಷಣೆಗೆ ಮತ್ತು ಚರ್ಚೆಗಳಿಗೆ ಗ್ರಾಸವಾಗಿದೆ.
ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್ ನೇತೃತ್ವದಲ್ಲಿ ನಡೆದ ಚರ್ಚೆಯಲ್ಲಿ ಸಚಿವ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಮಹೇಶ ಕುಮಠಳ್ಳಿ, ದುರ್ಯೋಧನ ಐಹೊಳೆ, ಪಿ. ರಾಜೀವ, ಮಹಾಂತೇಶ ದೊಡ್ಡಗೌಡರ, ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗಿಯಾಗಿದ್ದರು.
ಮುಖ್ಯವಾಗಿ, ಮುಂಬರುವ ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಬಗ್ಗೆ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
CKNEWSKANNADA / BRASTACHARDARSHAN CK NEWS KANNADA