Breaking News

ಬಿಜೆಪಿಯಿಂದ ಯತ್ನಾಳ್ ಗೆ 6ವರ್ಷ ಕಾಲ ಉಚ್ಚಾಟನೆ


ನಿನ್ನೆಯಷ್ಟೇ ಬಿಜೆಪಿ ಹೈಕಮಾಂಡ್‌ ಬಿಜೆಪಿ ಎರಡು ಬಣಗಳಿಗೆ ನೋಟಿಸ್ ನೀಡಿತ್ತು. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ.

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡುವಂತೆ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶ ಹೊರಡಿಸಲಾಗಿದೆ. ಈ ನಿರ್ಧಾರದ ಮೂಲಕ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ದೂರವಿಟ್ಟು, ಅವರ ಮೇಲಿನ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಲಾಗಿದೆ.ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ, ಪಕ್ಷವು ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. 2025ರ ಫೆಬ್ರವರಿ 10 ರಂದು ನೀಡಿದ ಈ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ರು ಕೂಡಾ, ಅವರು ಪದೇ ಪದೇ ಶಿಸ್ತಿನ ಉಲ್ಲಂಘನೆಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

 

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಪ್ರಕಟಣೆ ಮೂಲಕ ಈ ವಿಷಯವನ್ನು ಮಾಹಿತಿ ನೀಡಿದ್ದು, ‘ಪಕ್ಷದ ಶಿಸ್ತು ಮತ್ತು ನಂಬಿಕೆಯನ್ನು ಪುನಃ ಪುನಃ ಉಲ್ಲಂಘಿಸಿರುವುದರಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಈ ನಿರ್ಧಾರವು ತಕ್ಷಣದಿಂದಲೇ ಜಾರಿಗೆ ಬರಲಿದೆ’ ಎಂದು ತಿಳಿಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಳೆದ ಕೆಲವು ದಿನಗಳಿಂದ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಧಿಕ್ಕಾರಮಾಡಿ ಮಾತನಾಡುತ್ತಿದ್ದರು. ಈ ಕಾರಣದಿಂದಲೇ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಆದರೆ, ಇದೇ ಮೊದಲ ಬಾರಿಗೆ ಅಲ್ಲ; ಹಿಂದೆಯೂ ಹಲವು ಬಾರಿ ಅವರು ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪಗಳು ಇವೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ

ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ