ನವದೆಹಲಿ:ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ.
ಲಕ್ನೋದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು ಪಡಿಸಲು ಪ್ರಬಲ ಸಾಕ್ಷ್ಯಗಳು ಇಲ್ಲ. ಎಲ್ಲಾ 32 ಆರೋಪಿಗಳು ನಿರ್ದೋಷಿಗಳು ಎಂದು ಆದೇಶ ಪ್ರಕಟಿಸಿದ್ದಾರೆ.
ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ, ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ನಿರ್ದೋಷಿಗಳು ಎಂದು ಲಕ್ನೋದ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ.
CKNEWSKANNADA / BRASTACHARDARSHAN CK NEWS KANNADA