Breaking News

ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ


ಮೂಡಲಗಿ: ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಶನಿವಾರದಂದು ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ ಆರ್ಥಿಕ ಚಟುವಟಿಕೆಗಳಿಗೆ ಎಲ್ಲ ರೀತಿಯ ಸಹಾಯ ಸೌಲಭ್ಯ ನೀಡುತ್ತಿರುವ ಸಂಘದ ಕಾರ್ಯವನ್ನು ಶ್ಲಾಘಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ರೈತರಿಗೆ ಜೀವನಾಡಿಯಾಗಿ ಕೆಲಸ ಮಾಡುತ್ತಿರುವ ಪಿಕೆಪಿಎಸ್‍ಗಳು ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುತ್ತಿವೆ. ಬಿಡಿಸಿಸಿ ಬ್ಯಾಂಕಿನಿಂದ ಅಗತ್ಯವಿರುವ ಎಲ್ಲ ಸವಲತ್ತುಗಳನ್ನು ನೀಡಲಾಗಿದೆ. ಸಂಘದ ಸದಸ್ಯರಿಗೆ ಎಮ್ಮೆ-ಆಕಳು ಸಾಕಾಣಿಕೆಗೆ ಶೇ 3 ರಷ್ಟು ಬಡ್ಡಿದರದಲ್ಲಿ 1 ಲಕ್ಷ ರೂ. ಸಾಲ ನೀಡುವ ಯೋಜನೆಯನ್ನು ಬಿಡಿಸಿಸಿ ಬ್ಯಾಂಕಿನಿಂದ ಹಾಕಿಕೊಳ್ಳಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಶೀಘ್ರ 50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ:

ನೂರು ವರ್ಷ ಆಚರಿಸಿ ಮುನ್ನುಗ್ಗುತ್ತಿರುವ ಕಲ್ಲೋಳಿ ಪಿಕೆಪಿಎಸ್ ಇಷ್ಟರಲ್ಲಿಯೇ 50 ಲಕ್ಷ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ಹೊಂದಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಮುಖಂಡರಾದ ಸುಭಾಸ ಕುರಬೇಟ, ರಾವಸಾಬ ಬೆಳಕೂಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಎಪಿಎಂಸಿ ಮಾಜಿ ಅಧ್ಯಕ್ಷ ಮಲ್ಲಪ್ಪ ಹೆಬ್ಬಾಳ, ಪ್ರಭಾಶುಗರ ಮಾಜಿ ನಿರ್ದೇಶಕ ಮಹಾಂತೇಶ ಕಪ್ಪಲಗುದ್ದಿ, ಬಸವಂತ ದಾಸನವರ, ಪಿಕೆಪಿಎಸ್ ಅಧ್ಯಕ್ಷ ಈರಪ್ಪ ಹೆಬ್ಬಾಳ, ಬಸಪ್ಪ ಯಾದಗೂಡ, ಅಜೀತ ಬೆಳಕೂಡ, ಅಶೋಕ ಮಕ್ಕಳಗೇರಿ, ಮಲ್ಲಪ್ಪ ಖಾನಪ್ಪನವರ, ನಿರ್ದೇಶಕರಾದ ಬಾಳಪ್ಪ ಕಂಕಣವಾಡಿ, ಮಲ್ಲು ಕಡಾಡಿ, ಭೀಮಶೆಪ್ಪ ಪಾಟೀಲ, ಪ್ರಕಾಶ ಕುರಬೇಟ, ಹನಮಂತ ನಂದಿ, ಬಸು ಸೊಂಟನವರ, ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಬಾಗೇವಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ