ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಎಲ್ಲ ಹೊಸ ಕಛೇರಿಗಳನ್ನು ಹಂತ ಹಂತವಾಗಿ ಮಂಜೂರು ಮಾಡಿಸಲಾಗುತ್ತಿದ್ದು, ಮೂಡಲಗಿ ಹೊಸ ನ್ಯಾಯಾಲಯದ ನೂತನ ಕಟ್ಟಡಕ್ಕೆ ರವಿವಾರ ದಿ. ೨೬ ರಂದು ಶಂಕುಸ್ಥಾಪನೆ ನಡೆಯಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.
ಪಟ್ಟಣದ ಗುರ್ಲಾಪೂರ ರಸ್ತೆಯಲ್ಲಿರುವ ನ್ಯಾಯಾಲಯದ ನೂತನ ಕಟ್ಟಡದ ಸ್ಥಳ ಪರಿಶೀಲನೆ ಮಾಡಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹೊಸ ನ್ಯಾಯಾಲಯದ ಕಟ್ಟಡಕ್ಕೆ ಎಪಿಎಂಸಿಯಿAದ ೪ ಎಕರೆ ಜಾಗೆಯನ್ನು ನೀಡಲಾಗಿದೆ ಎಂದು ಹೇಳಿದರು.
ನ್ಯಾಯಾಲಯದ ಕಟ್ಟಡ ಹಾಗೂ ನ್ಯಾಯಾಧೀಶರ ವಸತಿ ಗೃಹಕ್ಕೆ ೭.೯೫ ಕೋಟಿ ರೂ. ಬಿಡುಗಡೆಯಾಗಿದ್ದು ಇದರಲ್ಲಿ ನ್ಯಾಯಾಲಯದ ಸಂಕೀರ್ಣಕ್ಕೆ ೭.೨೦ ಕೋಟಿ ಮತ್ತು ನ್ಯಾಯಾಧೀಶರ ವಸತಿ ಗೃಹಕ್ಕೆ ೭೫ ಲಕ್ಷ ರೂ.ಗಳು ಮಂಜೂರಾಗಿವೆ ಎಂದು ಹೇಳಿದರು.
ಮೂಡಲಗಿ ಹೊಸ ತಾಲ್ಲೂಕು ರಚನೆಯಾದ ನಂತರ ಹಂತ ಹಂತವಾಗಿ ತಾಲೂಕಾ ಮಟ್ಟದ ಕಛೇರಿಗಳನ್ನು ಆರಂಭಿಸಲು ಈಗಾಗಲೇ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಂತ ಹಂತವಾಗಿ ಕಛೇರಿಗಳು ಪ್ರಾರಂಭವಾಗಲಿವೆ. ಈಗಾಗಲೇ ಸಬ್ ರಜಿಸ್ಟಾçರ್ ಕಛೇರಿ ಪ್ರಗತಿ ಹಂತದಲ್ಲಿದ್ದು, ಇನ್ನೆರಡು ತಿಂಗಳಲ್ಲಿ ಮೂಡಲಗಿಯಲ್ಲಿ ಈ ಕಛೇರಿ ಆರಂಭವಾಗಲಿದೆ. ಅಲ್ಲದೇ ಅಗ್ನಿಶಾಮಕ ಠಾಣೆಗೆ ಇಷ್ಟರಲ್ಲಿಯೇ ಮಂಜೂರಾತಿ ಸಿಗಲಿದೆ. ಮೂಡಲಗಿ ಹಾಗೂ ಸುತ್ತಮುತ್ತಲಿನ ನಾಗರೀಕರ ಅನುಕೂಲಕ್ಕಾಗಿ ಎಲ್ಲ ಸರ್ಕಾರಿ ಕಛೇರಿಗಳು ಆದಷ್ಟು ಬೇಗನೇ ತಲೆಎತ್ತಲಿವೆ ಎಂದು ಹೇಳಿದರು.
ನ್ಯಾಯಾಲಯದ ಹೊಸ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಕಟ್ಟಡಕ್ಕೆ ಶಂಕುಸ್ಥಾಪನೆ ಬರುವ ರವಿವಾರದಂದು ಜರುಗಲಿದ್ದು, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಬೆಳಗಾವಿ ಜಿಲ್ಲೆ ಆಡಳಿತಾತ್ಮಕ ನ್ಯಾಯಮೂರ್ತಿ ಜಸ್ಟಿಸ್ ಅರವಿಂದ ಕುಮಾರ ಅವರು ಇದಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದು, ಬೃಹತ್ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಸಚಿನ ಮಗದುಮ್ಮ, ಸಂಸದರು, ಮೂಡಲಗಿ ಸಿವ್ಹಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಸುರೇಶ ಎಸ್.ಎನ್ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಬಾರ್ ಅಸೋಶಿಯೆಷನ್ ಅಧ್ಯಕ್ಷ ಕೆಂಪಣ್ಣಾ ಮಗದುಮ್ಮ, ಪುರಸಭೆ ಉಪಾಧ್ಯಕ್ಷೆ ರೇಣುಕಾ ಹಾದಿಮನಿ, ಬಾರ್ ಅಸೋಷಿಯೆಶನ್ ಸಂಸ್ಥಾಪಕ-ಅಧ್ಯಕ್ಷ ಎ.ಕೆ. ಮದಗನ್ನವರ, ಬಾರ್ ಅಸೋಷಿಯೆಶನ್ ಉಪಾಧ್ಯಕ್ಷ ಶಿವಬಸು ಹೊಸಟ್ಟಿ, ಪ್ರಧಾನ ಕಾರ್ಯದರ್ಶಿ ಲಕ್ಷö್ಮಣ ಅಡಿಹುಡಿ, ಮಾಜಿ ಅಧ್ಯಕ್ಷ ಕೆ.ಎಲ್. ಹುಣಶ್ಯಾಳ, ಹಿರಿಯ ನ್ಯಾಯವಾಧಿಗಳಾದ ಆರ್.ಆರ್. ಬಾಗೋಜಿ, ಯು.ಆರ್. ಜೋಕಿ, ಮೂಡಲಗಿ ಪುರಸಭೆ ಸದಸ್ಯರು, ಬಾರ್ ಅಸೋಶಿಯೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.