Breaking News

ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ


ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ.

ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.

ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ಸಪ್ತಾಹ ಅಂಗವಾಗಿ ನವ್ಹೆಂಬರ 14 ರಿಂದ 21 ರವರೆಗೆ ಪ್ರತಿದಿನ ಸಹಕಾರಿ ರಂಗದ ಅಭಿವೃದ್ಧಿಗಾಗಿ ಉಪಯುಕ್ತ ವಿಷಯಗಳ ಬಗ್ಗೆ ನುರಿತ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.

ಬೆಳಗಾವಿಯ ಧರ್ಮನಾಥ ಭವನದಲ್ಲಿ ನವ್ಹೆಂಬರ್ 19 ರಂದು ನಡೆಯುವ ಅಖಿಲ ಭಾರತ 68ನೇ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಸಚಿವರು ಸೇರಿದಂತೆ ಹಲವು ಗಣ್ಯರು ಆಗಮಿಸುವರು ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಕ್ಷೀರ ಪಿತಾಮಹ ವರ್ಗೀಸ್ ಕುರಿಯನ್ ಅವರ ಶತಮಾನೋತ್ಸವದ ವರ್ಷವಾಗಿದ್ದರಿಂದ ಅವರ ಸವಿನೆನಪಿಗಾಗಿ ಕಂಚಿನ ಪ್ರತಿಮೆಯನ್ನು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಆವರಣದಲ್ಲಿ ಪ್ರತಿಷ್ಠಾಪಿಸಿ, ಕುರಿಯನ್ ಅವರ ಪ್ರತಿಮೆಗೆ ಕ್ಷೀರಾಭಿಷೇಕ ನೆರವೇರಿಸಲು ತೀರ್ಮಾನಿಸಲಾಗಿದೆ. ಕೆಎಂಎಫ್‍ನಿಂದ ವರ್ಗೀಸ್ ಕುರಿಯನ್ ಅವರ ಜೀವನ ಚರಿತ್ರೆಯನ್ನು ಒಳಗೊಂಡ  ಸಹಕಾರಿ ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ನಮ್ಮ ಸಂಸ್ಥೆಗಳಲ್ಲಿ ಅಳವಡಿಸಿಕೊಳ್ಳುವ ಸಂದೇಶವನ್ನು ಹೊತ್ತಿರುವ ಸಂಚಿಕೆಯನ್ನು ಬಿಡುಗಡೆಗೊಳಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಕೆಎಂಎಫ್‍ನ ನಂದಿನಿ ನೂತನ ಉತ್ಪನ್ನಗಳನ್ನು ಸಹ ಬಿಡುಗಡೆಗೊಳಿಸಲಾಗುವುದು. ಸಹಕಾರ ಸಪ್ತಾಹವು ವಿವಿಧ ಸಹಕಾರ ಸಂಘ-ಸಂಸ್ಥೆಗಳ ಅಭಿವೃದ್ಧಿಗೆ ಪೂರಕವಾಗಿ ಎಲ್ಲ ಅಂಶಗಳನ್ನು ಮನವರಿಕೆ ಮಾಡಿ ಸಹಕಾರ ರಂಗವನ್ನು ಸಮರ್ಥವಾಗಿ ಬಲಪಡಿಸುವ ಸಂದೇಶವನ್ನು ಸಾರುವುದು ಇದರ ಪ್ರಮುಖ ಉದ್ಧೇಶವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸಹಕಾರ ಸಪ್ತಾಹ ಕಾರ್ಯಕ್ರಮವು ಕೆಎಂಎಫ್, ಬಿಡಿಸಿಸಿ ಬ್ಯಾಂಕು, ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳ, ಅರ್ಬನ್ ಬ್ಯಾಂಕ್ ಫೆಡರೇಷನ್, ಕ್ರೆಡಿಟ್ ಕೋ-ಆಫ್ ಸೊಸೈಟಿ ಫೆಡರೇಷನ್, ಪಿಕೆಪಿಎಸ್ ಮಹಾಮಂಡಳ, ಜಿಲ್ಲಾ ಸಹಕಾರಿ ಯೂನಿಯನ್ ಇವುಗಳ ಜಂಟಿ ಆಶ್ರಯದಲ್ಲಿ ನಡೆಯಲಿದೆ. ಈ ಸಪ್ತಾಹವನ್ನು ಯಶಸ್ವಿಗೊಳಿಸಲು ಪೂರ್ವ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಸಹಕಾರ ಸಂಘಗಳ ಅಪರ ನಿಬಂಧಕಿ ಕೆ.ಎಂ. ಆಶಾ, ಸಹಕಾರ ಸಂಘಗಳ ಸಂಯುಕ್ತ ನಿಬಂಧಕ ಜಿ.ಎಂ. ಪಾಟೀಲ, ಉಪನಿಬಂಧಕ ಶ್ರೀನಿವಾಸ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ(ಮೆಳವಂಕಿ), ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ಬಾಬು ಕತ್ತಿ, ಎಸ್.ಎಸ್. ಮುಗಳಿ, ಮಲ್ಲು ಪಾಟೀಲ, ಬಸವರಾಜ ಪರನ್ನವರ, ಬಾಬುರಾವ್ ವಾಘಮೂಡೆ, ಪ್ರಕಾಶ ಅಂಬೋಜಿ, ಉದಯಶಿಂಹ್ ಶಿಂಧೆ, ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಿ.ಶ್ರೀನಿವಾಸನ್, ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ