Breaking News

ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ


ಬೆಂಗಳೂರಿನಲ್ಲಿ ಜರುಗಿದ ಕೆಎಂಎಫ್‍ನ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ

ಬೆಂಗಳೂರು : ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನ್ನೀರ್ ಹಾಗೂ ಚೀಜ್ ಆಧಾರಿದ ಉತ್ಪನ್ನಗಳು ಮತ್ತು ಇತರೇ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು ವಿಸ್ತರಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನಗರದ ಖಾಸಗಿ ಹೊಟೇಲ್‍ನಲ್ಲಿ ಗುರುವಾರ ಸಂಜೆ ಜರುಗಿದ ಕೆಎಂಎಫ್ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮೇಗಾ ಪುಡ್ ಪಾರ್ಕ್ ಮೂಲಕ ನೆರೆಯ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ನಮ್ಮ ನಂದಿನಿ ಉತ್ಪನ್ನಗಳ ಮಾರಾಟವು ವಿಸ್ತರಣೆಯಾಗಲಿದೆ ಎಂದು ಹೇಳಿದರು.

ಹಾಸನ ಜಿಲ್ಲಾ ಸಹಕಾರ ಹಾಲು ಒಕ್ಕೂಟದಿಂದ ನೂತನ ಪೆಟ್ ಬಾಟಲ್ ಘಟಕವನ್ನು ಅಳವಡಿಸಿದ್ದು, ಈ ಸ್ಥಾವರ ವಿವಿಧ ಮಾದರಿಯ ಸುಹಾಸಿತ ಹಾಲು, ಲಸ್ಸಿ, ಯೋಗಲ್ಟ್ ಇತ್ಯಾದಿಯಾಗಿ ಸುಮಾರು 15 ಹೊಸ ಉತ್ಪನ್ನಗಳ ಉತ್ಪಾದನೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಘಟಕದಲ್ಲಿ ಪ್ರತಿನಿತ್ಯ 5 ಲಕ್ಷ ಪೆಟ್ ಬಾಟಲ್ ಉತ್ಪಾದನೆಯಾಗುತ್ತಿದ್ದು, ಇದನ್ನು ದೇಶ ವ್ಯಾಪ್ತಿಯಲ್ಲಿ ಮಾರಾಟ ಮಾಡಿ ನಂದಿನಿ ಉತ್ಪನ್ನಗಳ ಮಾರುಕಟ್ಟೆಯನ್ನು ಸಹ ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

 

ದೇಶದ ಇತರೇ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರವು ರಾಜ್ಯದಲ್ಲಿ ಅತೀ ಕಡಿಮೆ ದರವನ್ನು ಹೊಂದಿದೆ. 37 ರೂ.ಗಳಂತೆ ಪ್ರತಿ ಲೀಟರ್ ಹಾಲನ್ನು ಮಾರಾಟ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರುಗಳು ಹಾಲಿನ ದರದಲ್ಲಿ ಪ್ರತಿ ಲೀಟರ್‍ಗೆ 3 ರೂ.ಗಳಂತೆ ಏರಿಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರಿಂದ ಪ್ರತಿ ಲೀಟರ್ ಹಾಲಿಗೆ 40 ರೂ. ದರವನ್ನು ನಿಗದಿಪಡಿಸಿದಂತಾಗುತ್ತದೆ. ದರ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ಒಂದು ವೇಳೆ ರೂ. 37 ರಿಂದ 40 ರೂ. ಗಳಾದರೆ ಅದರಲ್ಲಿ ರೈತರಿಗೆ 3 ರೂ.ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

ನಂದಿನಿ ಉತ್ಪನ್ನಗಳನ್ನು ಹೊರ ರಾಜ್ಯಗಳಾದ ಹೈದ್ರಾಬಾದ್, ಪುಣೆ, ಮುಂಬಯಿ, ಆಂದ್ರ, ಗೋವಾ, ಚೆನ್ನೈ ಹಾಗೂ ವಿದೇಶಗಳಲ್ಲಿ ಈಗಾಗಲೇ ಪರಿಚಯಿಸಿದ್ದು, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊರ ರಾಜ್ಯಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟವನ್ನು ವಿಸ್ತರಿಸಲು ವಿಷನ್ 2025-26 ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

 

2021-22ನೇ ಸಾಲಿನಲ್ಲಿ ಕೆಎಂಎಫ್‍ನ 5 ಪಶು ಆಹಾರ ಘಟಕಗಳಿಂದ ಒಟ್ಟು 7.28 ಲಕ್ಷ ಮೆಟ್ರಿಕ್ ಟನ್ ಪಶು ಆಹಾರ ಉತ್ಪಾದಿಸಿ ಮಾರಾಟ ಮಾಡುವ ಗುರಿಯನ್ನು ಹೊಂದಲಾಗಿದ್ದು, ಒಟ್ಟಾರೆ ಅಂದಾಜು 1017 ಕೋಟಿ ರೂ.ಗಳ ವಹಿವಾಟು ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಮಾರುಕಟ್ಟೆ ವಿಸ್ತರಣೆಯಲ್ಲಿ ಹಳ್ಳಿಯಿಂದ ಮಹಾನಗರದವರೆಗೆ ಎಂಬ ತತ್ವದಡಿ ನಂದಿನಿ ಹಾಲು, ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಿದ್ದು, ಇದರ ಮಾರಾಟವನ್ನು ಆಯಾ ಗ್ರಾಮ, ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಸಮಗ್ರ ಮಾರುಕಟ್ಟೆ ಅಭಿವೃದ್ಧಿ ಯೋಜನೆಯನ್ನು 2022-2026 ರವರೆಗೆ ಜಾರಿಗೊಳಿಸಲು ರೂಪಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಭೀಮಾ ನಾಯಕ್, ನಂಜೇಗೌಡ, ಕೆಎಂಎಫ್ ನಿರ್ದೇಶಕ ಎಚ್.ಜಿ. ಹಿರೇಗೌಡರ, ಕಾ.ಪು ದಿವಾಕರಶೆಟ್ಟಿ, ಮಾರುತಿ ಕಾಶೆಂಪೂರ, ಶ್ರೀಶೈಲಗೌಡ ಪಾಟೀಲ, ಕೆ.ಎಚ್. ಕುಮಾರ, ಆನಂದ ಕುಮಾರ, ಆರ್. ಶ್ರೀನಿವಾಸ, ಎಂ.ನಂಜುಂಡಸ್ವಾಮಿ, ವೀರಭದ್ರಬಾಬು, ವ್ಹಿ.ಎಂ. ವಿಶ್ವನಾಥ, ಎಂ.ಕೆ. ಪ್ರಕಾಶ, ರಾಜ್ಯದ 14 ಹಾಲು ಒಕ್ಕೂಟಗಳ ಅಧ್ಯಕ್ಷರುಗಳು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ ಪ್ರಾಸ್ತಾವಿಕವಾಗಿ ಮಾತನಾಡಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ