ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. ಜಿಲ್ಲೆಯನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನೆರವೇರಲಿಕ್ಕೆ ಕಾರಜೋಳ ಅವರು ಶ್ರಮಿಸಬೇಕು. ಕಾರಜೋಳ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ನಾವೆಲ್ಲರೂ ಶ್ರಮಿಸುತ್ತೇವೆ.
ಉಸ್ತುವಾರಿ ಸಚಿವ ಕಾರಜೋಳ ಅವರಿಂದ ಇನ್ನಷ್ಟು ಅಭಿವೃದ್ಧಿಪರ ಹಾಗೂ ಜಿಲ್ಲೆಗೆ ಇನ್ನೂ ಹಲವಾರು ಯೋಜನೆಗಳು ಜಾರಿಯಾಗಲಿ ಎಂದು ಆಶಿಸಿದ ಅವರು, ಬೆಳಗಾವಿ ಜಿಲ್ಲೆಗೆ ಕಾರಜೋಳ ಅವರನ್ನು ಮತ್ತೊಮ್ಮೆ ಉಸ್ತುವಾರಿ ಸಚಿವರನ್ನಾಗಿ ನೇಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.