Breaking News

* ಒಳ್ಳೆಯ ಕಾರ್ಯ ಮಾಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಎಲ್ಲರೂ ಗೌರವಿಸೋಣ : ಹನಮಂತ ಗುಡ್ಡಮನಿ *


ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚದಲ್ಲಿ ಒಂದು ಕಿ.ಮೀ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ!

 

ಮೂಡಲಗಿ : ಕಳೆದೊಂದು ವಾರದಿಂದ ಸಾರ್ವಜನಿಕರಲ್ಲಿ ತೀವ್ರ ‘ ಕುತೂಹಲಕ್ಕೆ ಕಾರಣವಾಗಿದ್ದ , ಮೂಡಲಗಿ ಪಟ್ಟಣದ ರಸ್ತೆ ಸುಧಾರಣಾ ಕಾಮಗಾರಿಗೆ ಸೋಮವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ . ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗಿನ 1 ಕಿ.ಮೀ ರಸ್ತೆ ಸುಧಾರಣಾ ಕಾಮಗಾರಿ ಮಾಡುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ – ವಿರೋಧ ಚರ್ಚೆಗಳು ನಡೆಯುತ್ತಿದ್ದು , ಕೊನೆಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈ ರಸ್ತೆ ಕಾಮಗಾರಿಯನ್ನು ಸ್ವಂತ ವೆಚ್ಚದಲ್ಲಿ ನಿರ್ಮಾಣ ಮಾಡಲು ಮುಂದಾಗಿದ್ದು ಇದರಿಂದ ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ವಾಕ್ ಸಮರಕ್ಕೆ ಪೂರ್ಣ ವಿರಾಮ ಬಿದ್ದಂತಾಗಿದೆ, ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಡಮನಿ , ಹದಗೆಟ್ಟಿದ್ದ ಅಂಬೇಡ್ಕರ ವೃತ್ತ – ಟಿಪ್ಪು ಸುಲ್ತಾನ ವೃತ್ತದವರೆಗೆ ರಸ್ತೆ ಸುಧಾರಣೆ ಮಾಡುವಂತೆ ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಾಗ ಶಾಸಕರು ಸರ್ಕಾರದ ಅನುದಾನ ವಿಳಂಬವಾಗಬಹುದು . ಮಳೆಗಾಲದ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಕೈಗೊಳ್ಳಲು ಅನಾನುಕೂಲವಾಗಬಹುದು ಎಂಬ ಹಿನ್ನೆಲೆಯಲ್ಲಿ ಸಾರ್ವಜನಿಕರ ಕೋರಿಕೆಯ ಮೇರೆಗೆ ಸ್ವತಃ ಅವರೇ ತಮ್ಮ ದುಡ್ಡಿನಲ್ಲಿ ಒಂದು ಕಿ.ಮೀ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸಿದ್ದಾರೆ . ಅದಕ್ಕಾಗಿ ಮೂಡಲಗಿ ಪಟ್ಟಣದ ಸಮಸ್ತ ನಾಗರೀಕರ ಪರವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಎಂದು ತಿಳಿಸಿದರು . ಅಭಿವೃದ್ಧಿ ಕಾರ್ಯಗಳು ಬಂದಾಗ ಎಲ್ಲರೂ ಒಂದಾಗಿರಬೇಕು . ಮೂಡಲಗಿ ಪಟ್ಟಣದ ಅಭಿವೃದ್ಧಿಗೆ ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಕೋಟ್ಯಾಂತರ ರೂಪಾಯಿ ಅನುದಾನ ತಂದು ಪಟ್ಟಣವನ್ನು ಅಭಿವೃದ್ಧಿಪಡಿಸುತ್ತಿದ್ದಾರೆ . ನಗರೋತ್ಥಾನ ಯೋಜನೆಯಡಿ ಪಟ್ಟಣದ ರಸ್ತೆಗಳನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ . ಡಿಸೆಂಬರ್ ಅಂತ್ಯದೊಳಗೆ ಪಟ್ಟಣದ ಮುಖ್ಯ ರಸ್ತೆಗಳ ಸುಧಾರಣಾ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದು ಹೇಳಿದರು . ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ನಾವೆಲ್ಲರೂ ಋಣಿಯಾಗಿರಬೇಕು . ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅವರಿಗಿರುವ ಕಾಳಜಿಯನ್ನು ನಾವೆಲ್ಲರೂ ಮೆಚ್ಚಬೇಕು . ಸ್ವಂತ ದುಡ್ಡಿನಲ್ಲಿ ರಸ್ತೆಯನ್ನು ಅಭಿವೃದ್ಧಿ ಮಾಡುತ್ತಿರುವ ಅವರ ಗುಣಕ್ಕೆ ನಾವು ಕೃತಜ್ಞತೆ ಸಲ್ಲಿಸೋಣ . ಇದನ್ನು ಮೂಡಲಗಿ ಪಟ್ಟಣದ ಅಭಿವೃದ್ಧಿ ಸಹಿಸದವರು ಅರ್ಥ ಮಾಡಿಕೊಳ್ಳಬೇಕು . ಈ ಹಿಂದೆ ಹದಗೆಟ್ಟು ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಪಟ್ಟಣದ ಶಿವಬೋಧರಂಗ ಕಾಲೇಜುನಿಂದ ಗಣೇಶ ನಗರ ( ಮೂಡಲಗಿ ಕ್ರಾಸ್ ) ವರೆಗೆ ತಮ್ಮ ಸ್ವಂತ ವೆಚ್ಚದಲ್ಲಿ 3 ಕಿ.ಮೀ ರಸ್ತೆಯನ್ನು ಅಭಿವೃದ್ಧಿ ಮಾಡಿದ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬಗ್ಗೆ ಅಂದು ನಡೆಯದಿದ್ದ ಚರ್ಚೆಗಳು ಇಂದು ಏಕೆ ನಡೆಯುತ್ತಿವೆ . ಆಗಲೂ ಅವರು ತಮ್ಮ ಸ್ವಂತ ಹಣವನ್ನು ಈ ರಸ್ತೆ ಕಾಮಗಾರಿಗೆ ವಿನಿಯೋಗಿಸಿದ್ದಾರೆ . ಇಂದು ಅಂಬೇಡ್ಕರ – ಟಿಪ್ಪು ಸುಲ್ತಾನ ವೃತ್ತದ ರಸ್ತೆಗೆ ಯಾಕಿಷ್ಟು ಚರ್ಚೆಗಳು ನಡೆಯುತ್ತಿವೆ ಎಂಬುದು ಗೊತ್ತಾಗುತ್ತಿಲ್ಲ . ಒಳ್ಳೆಯ ಕೆಲಸ ಮಾಡಿದವರನ್ನು ನಾವು ಗೌರವಿಸಬೇಕು . ಅದು ನಮ್ಮ ಧರ್ಮ ಎಂದು ಅವರು ತಿಳಿಸಿದರು . ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷೆ ರೇಣುಕಾ ಹಾದಿಮನಿ , ಮಾಜಿ ಪುರಸಭೆ ಅಧ್ಯಕ್ಷ ರವಿ ಸಣ್ಣಕ್ಕಿ , ಪುರಸಭೆ ಮಾಜಿ ಉಪಾಧ್ಯಕ್ಷರಾದ ರವೀಂದ್ರ ಸೋನವಾಲಕರ , ಅಜೀಜ ಡಾಂಗೆ , ಹುಸೇನಸಾಬ ಶೇಖ , ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ , ಗಿರೀಶ ಢವಳೇಶ್ವರ , ಈಶ್ವರ ಕಂಕಣವಾಡಿ , ಅನ್ವರ ನದಾಫ , ಮರೆಪ್ಪ ಮರೆಪ್ಪಗೋಳ , ಈರಪ್ಪ ಮುನ್ಯಾಳ , ರುದ್ರಪ್ಪ ವಾಲಿ , ಈರಪ್ಪ ಢವಳೇಶ್ವರ , ರಾಜು ಪೂಜೇರಿ , ಸಚೀನ ಸೋನವಾಲಕರ , ಬಸು ಝಂಡೇಕುರುಬರ , ರಮೇಶ ಸಣ್ಣಕ್ಕಿ , ಪ್ರಭಾಕರ ಬಂಗೆನ್ನವರ , ರಾಮು ಝಂಡೇಕುರುಬರ , ನನ್ನುಸಾಬ ಶೇಖ , ಪ್ರಕಾಶ ಮಾದರ , ಭೀಮಶಿ ಸಣ್ಣಕ್ಕಿ , ಆನಂದ ಟಪಾಲ , ಅಬ್ದುಲಗಫಾರ ಡಾಂಗೆ , ಪ್ರಕಾಶ ಮುಗಳಖೋಡ , ದುಂಡಪ್ಪ ಶಾಬನ್ನವರ , ಉಮೇಶ ಹಳ್ಳೂರ , ಶಾಸಕರ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ , ಸಿ.ಪಿ. ಯಕ್ಷಂಬಿ , ಗುತ್ತಿಗೆದಾರ ಬಿ.ಬಿ. ದಾಸನವರ ಮುಂತಾದವರು ಉಪಸ್ಥಿತರಿದ್ದರು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ