ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ (ಆರ್‌ಡಿಪಿಆರ್)ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷೇತ್ರಕ್ಕೆ ಆರ್‌ಡಿಪಿಆರ್ ನಿಂದ ೧೬ ಕೋಟಿ ರೂ.ಗಳ ವಿಶೇಷ ಅನುದಾನ ನೀಡಿದ್ದು, ಅದಕ್ಕಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗಾಗಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದ್ದಾರೆ.
CKNEWSKANNADA / BRASTACHARDARSHAN CK NEWS KANNADA