ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ . ಮೂಡಲಗಿ ತಾಲೂಕಿನ ಮೂಡಲಗಿ , ಕುಲಗೋಡ , ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ . ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9 ಕ್ಕೇರಿದೆ ಎಂದು ಅವರು ಹೇಳಿದ್ದಾರೆ . ವಿದ್ಯಾರ್ಥಿಗಳ ಪದವಿ ಪೂರ್ವ ಶಿಕ್ಷಣ ಸಲುವಾಗಿ ಆಯಾ ಗ್ರಾಮಗಳ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದರಿಂದ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಒಟ್ಟು 8 ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳನ್ನು ಮಂಜೂರು ಮಾಡುವಂತೆ ಸಚಿವ ಬಿ.ಸಿ. ನಾಗೇಶ ಅವರಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು . ನಮ್ಮ ಮನವಿಯ ಮೇರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ.ನಾಗೇಶ ಅವರು ಮೂಡಲಗಿ ಶೈಕ್ಷಣಿಕ ವಲಯಕ್ಕೆ ಸಧ್ಯ 4 ಹೊಸ ‘ ಕಾಲೇಜುಗಳನ್ನು ಆರಂಭಿಸಲಿಕ್ಕೆ ಅನುಮತಿ ನೀಡಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ . ಇದರ ಜೊತೆಗೆ ಇನ್ನೂ 4 ಕಾಲೇಜುಗಳನ್ನು ಆರಂಭಿಸಲಿಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ . ಮೆಳವಂಕಿ , ದುರದುಂಡಿ , ಅವರಾದಿ ಮತ್ತು ಪಾಮಲದಿನ್ನಿ ಗ್ರಾಮಗಳಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳನ್ನು ಆರಂಭಿಸುವಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರನ್ನು ಕೋರಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ . ನಮ್ಮ ಕ್ಷೇತ್ರಕ್ಕೆ ಹೊಸ ಕಾಲೇಜುಗಳನ್ನು ಮಂಜೂರು ಮಾಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ.ನಾಗೇಶ ಅವರಿಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ . ಮೂಡಲಗಿ , ಕುಲಗೋಡ , ಖಾನಟ್ಟಿ ಮತ್ತು ಬೆಟಗೇರಿ ಗ್ರಾಮಗಳ ಮುಖಂಡರು ಮತ್ತು ಶಿಕ್ಷಣ ಪ್ರೇಮಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ .
Check Also
*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …