Breaking News

*ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ*


ಸಿಎಂ ಭೇಟಿ ಮಾಡಿ ಮನವಿ ಅರ್ಪಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗೋಕಾಕ ತಾಲೂಕಿನ ಕೌಜಲಗಿಯಲ್ಲಿ ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಗುರುವಾರ ರಾತ್ರಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣವು ಪ್ರಮುಖ ಹೋಬಳಿ ಸುತ್ತಮುತ್ತಲಿನ 50ಕ್ಕೂ ಹೆಚ್ಚು ಗ್ರಾಮಗಳಿಗೆ ಕೌಜಲಗಿಯು ಕೇಂದ್ರ ಸ್ಥಾನವಾಗಿದೆ ಎಂದು ಮನವಿಯಲ್ಲಿ ಮುಖ್ಯಮಂತ್ರಿಗಳಿಗೆ ಆಹ್ವಾನಿಸಲಾಗಿದೆ.

ಕಳೆದ 5 ರಿಂದ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಕೌಜಲಗಿ ಭಾಗದ ಜನರು ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ ಆಡಳಿತಾತ್ಮಕ ಹಿತದೃಷ್ಟಿಯಿಂದ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವಾಗಿ ರಚಿಸಲಾಗಿದೆ. ತಾಲೂಕುಗಳ ಪುನರ್ ವಿಂಗಡಣಾ ಸಮಿತಿಗಳಾದ ವಾಸುದೇವರಾವ್, ಹುಂಡೇಕರ್, ಗದ್ದಿಗೌಡರ ಆಯೋಗಗಳು ಆಗಿನ ಸರಕಾರಗಳಿಗೆ ಕೌಜಲಗಿಯು ತಾಲೂಕು ಕೇಂದ್ರವಾಗಲಿಕ್ಕೆ ಅತ್ಯಂತ ಸೂಕ್ತವಾದ ವರದಿಗಳನ್ನು ಸಲ್ಲಿಸಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಹೊಸ ತಾಲೂಕುಗಳ ಪುನರ್‌ರಚನೆ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಕೌಜಲಗಿಯ ತಾಲೂಕು ಕೇಂದ್ರವನ್ನಾಗಿ ರಚಿಸುವುದರ ಬಗ್ಗೆ ಪರಾಮರ್ಶೆ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು, ನಮ್ಮ ಮನವಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಾತನಾಡಿದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ