Breaking News

ವೆಂಕಟಾಪೂರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕೆಎಂಎಫ್ ನಿಂದ ೧೨ ಲಕ್ಷ ರೂಪಾಯಿ ನೆರವು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ


ಮೂಡಲಗಿ- ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ೧೨ ಲಕ್ಷ ರೂ. ನೆರವು ನೀಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

       ತಾಲ್ಲೂಕಿನ ವೆಂಕಟಾಪೂರ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಮಾತನಾಡಿದ ಅವರು, ಇದರಲ್ಲಿ ಕೆಎಂಎಫ್ ನಿಂದ ೧೦ ಲಕ್ಷ ರೂ ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ೨ ಲಕ್ಷ ರೂ. ಗಳ ನೆರವು ನೀಡುವ ಭರವಸೆಯನ್ನು ನೀಡಿದರು.

       ವೆಂಕಟಾಪೂರ ಗ್ರಾಮದ ಹಣಮಂತ ದೇವರ ದೇವಸ್ಥಾನದ ಅಭಿವೃದ್ಧಿಗಾಗಿ ಸಮುದಾಯ ಭವನ ನಿರ್ಮಾಣಕ್ಕೆ ೨೦ ಲಕ್ಷ ರೂ ಗಳನ್ನು ನೀಡಲಾಗುವುದು. ಈಗಾಗಲೇ ಮಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಗಾಗಿ ಧನ ಸಹಾಯವನ್ನು ಮಾಡಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿಕೊಡಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗಲು ಪ್ರತ್ಯೇಕ ಶೌಚಾಲಯಗಳನ್ನು ಬೇಗನೆ ನಿರ್ಮಿಸಿಕೊಡಲಾಗುವುದು. ಗ್ರಾಮದ ಮುಖಂಡರು ಒಂದಾಗಿದ್ದರೆ ಅಭಿವೃದ್ಧಿ ಕಾರ್ಯಗಳು ವೇಗವಾಗಿ ಸಾಗುತ್ತವೆ. ಒಗ್ಗಟ್ಟಿನ ಸಂಕೇತವನ್ನು ಅಳವಡಿಸಿಕೊಂಡು ಗ್ರಾಮಾಭಿವೃದ್ದಿಗೆ ಟೊಂಕು ಕಟ್ಟಿ ದುಡಿಯುವಂತೆ ಸಲಹೆ ಮಾಡಿದ ಅವರು, ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಹೆಚ್ಚಿನ ಲೀಡ್ ನೀಡಲು ಕಾರ್ಯಕರ್ತರು ಶ್ರಮಿಸಬೇಕು. ಸರಕಾರದ ಸಾಧನೆಗಳನ್ನು ಜನರಿಗೆ ವಿವರಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

        ಪ್ರಭಾ ಶುಗರ್ಸ ನಿರ್ದೇಶಕ ಗಿರೀಶ ಹಳ್ಳೂರ, ರಂಗಣ್ಣ ಅರಳಿಮಟ್ಟಿ, ಶಾಸಪ್ಪಗೌಡ ಪಾಟೀಲ, ಬಾಳಪ್ಪ ಖವಟಕೊಪ್ಪ, ಎಚ್.ಡಿ.ಪೂಜೇರಿ, ಶಂಕರೆಪ್ಪ ಕುಲಗೋಡ, ಭೀಮಪ್ಪ ದಳವಾಯಿ, ಕಲ್ಮೇಶ ದಡ್ಡಿಮನಿ, ಶಿವನಗೌಡ ಪಾಟೀಲ, ಶ್ರೀಕಾಂತ ಖವಟಕೊಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ