Breaking News

ಸಚಿವ ರಮೇಶ ಜಾರಕಿಹೊಳಿ, ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಗೋಕಾಕ ಹಾಗೂ ಮೂಡಲಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ


ಘಟಪ್ರಭಾ: ಕೋರೋನಾದಂತಹ ಮಾರಕ ಕಾಯಿಲೆಗಳ ಮಧ್ಯ ಬಳಲುತ್ತಿರುವ ಕೊರೋನಾ ಸೊಂಕಿತರ ಆರೈಕೆ ಮತ್ತು ಸುರಕ್ಷತೆಗಾಗಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಾಡುತ್ತಿರುವ ಮಾನವೀಯ ಮೌಲ್ಯಗಳು ಮಾದರಿಯಾಗಿದೆ. ರಾಜ್ಯ ಹಾಗೂ ರಾಷ್ಟ್ರದಲ್ಲಿಯೇ ಅವರ ಸೇವೆ ಅನುಪಮವಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಹೇಳಿದರು.

ಶನಿವಾರದಂದು ಇಲ್ಲಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೋರೋನಾ ಸೋಂಕಿತರಿಗೆ ಕೊಡಮಾಡಿದ ವೈದ್ಯಕೀಯ ಉಪಕರಣಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಕೋರೋನಾ ಇಂದು ಪ್ರತಿ ಹಳ್ಳಿ-ಹಳ್ಳಿಗೆ ಪ್ರವೇಶಿಸುತ್ತಿದೆ, ಜಗತ್ತಿನಾಧ್ಯಂತ ದಿನೇದಿನೇ ವ್ಯಾಪಿಸುತ್ತಿರುವ ಈ ಸಾಂಕ್ರಾಮಿಕ ರೋಗಕ್ಕೆ ಇದುವರೆಗೂ ಲಸಿಕೆ ಬಿಡುಗಡೆಯಾಗಿಲ್ಲ. ಇದರಿಂದ ರೋಗಿಗಳೇನೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಇದಕ್ಕೆ ಅಗತ್ಯವಿರುವ ಚಿಕಿತ್ಸೆಗಳಿಂದ ಸೋಂಕಿತರನ್ನು ಗುಣಪಡಿಸುತ್ತಿದ್ದೇವೆ. ಸೋಂಕಿತರ ಆರೈಕೆಗಾಗಿ ಜಾರಕಿಹೊಳಿ ಸಹೋದರರು ಪ್ರತಿ ಹಂತ-ಹಂತದಲ್ಲೂ ಆರೋಗ್ಯ ಇಲಾಖೆಗೆ ಅಗತ್ಯವಿರುವ ಎಲ್ಲ ನೆರವನ್ನು ನೀಡುತ್ತಾ  ಮಹಾದಾನಿಗಳಾಗಿದ್ದಾರೆ. ಅವರ ಕಾರ್ಯ ಇಡೀ ಮಾನವ ಕುಲಕ್ಕೆ ಮಾದರಿಯಾಗಿದೆ. ಕಾಯಿಲೆಗಳಿಂದ ಬಳಲುತ್ತಿರುವ ಕೋರೋನಾ ಸೋಂಕಿತರಿಗೆ ಇವರು ಸಂಜೀವಿನಿಯಂತೆ ಕೆಲಸ ಮಾಡುತ್ತಿದ್ದಾರೆಂದು ಜಾರಕಿಹೊಳಿ ಅವರ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.

ಗೋಕಾಕ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಸೋಂಕಿತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತಿದೆ. ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಹಾಗೂ ಆರೋಗ್ಯ ಇಲಾಖೆಯ ವಾರಿಯರ್ಸ್‍ಗೆ ಅನುಕೂಲಗಳನ್ನು ಕಲ್ಪಿಸಿಕೊಡುತ್ತಿರುವ ಸಚಿವ ರಮೇಶ ಜಾರಕಿಹೊಳಿ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ತಾಲೂಕಾಡಳಿತ ವತಿಯಿಂದ ಕೃತಜ್ಞತೆ ಸಲ್ಲಿಸಿದರು.

ಹಿರಿಯ ತಜ್ಞ ವೈದ್ಯ ಡಾ. ಆರ್.ಎಸ್.ಬೆಣಚಿನಮರಡಿ ಮಾತನಾಡಿ ಕೋವಿಡ್ ಕಾಳಜಿ ಕೇಂದ್ರಗಳಲ್ಲಿ ದಾಖಲಾಗಿರುವ ರೋಗಿಗಳ ಕಡೆಗೆ ಜಾರಕಿಹೊಳಿ ಸಹೋದರರು ವಿಶೇಷ ಗಮನ ನೀಡುತ್ತಿದ್ದಾರೆ. ಸೋಂಕಿತರು ಗುಣಮುಖರಾಗಿ ಮತ್ತೇ ಎಂದಿನಂತೆ ಸಮಾಜದೊಂದಿಗೆ ಬೆರೆಯಬೇಕೆನ್ನುವ ಅವರ ಆಶಯ ಮೆಚ್ಚುವಂತದ್ದು. ಸೋಂಕಿತರೆಂದರೇ ಹೆದರುವ ಇಂದಿನ ಪರಿಸ್ಥಿತಿಯಲ್ಲಿ ಅವರ ಆರೈಕೆ ಮತ್ತು ಸುರಕ್ಷತೆಗಾಗಿ ಆರೋಗ್ಯ ಇಲಾಖೆಗೆ ಬೆನ್ನೆಲಬಾಗಿ ನಿಂತು ಸೋಂಕಿತರ ಹಿತರಕ್ಷಣೆಗೆ ಕಟಿಬದ್ದರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಲ್ಲೂ ಮಲ್ಲಾಪೂರ ಪಿ.ಜಿ. ಹಾಗೂ ಮೂಡಲಗಿಯಲ್ಲಿ ಕೇಂದ್ರಿಯ ಆಮ್ಲಜನಕ ಪೂರೈಕೆಯ ಘಟಕ ಪ್ರಾರಂಭಿಸಿ ಅಪರೂಪದ ಸಮಾಜ ಮೆಚ್ಚುವ ಕೆಲಸ ಕೈಗೊಂಡಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಇಲ್ಲಿಯ ಕೋವಿಡ್ ಕೇರ್ ಸೆಂಟರಗೆ 300 ಎನ್-95 ಮಾಸ್ಕ್, 330 ಪಿಪಿಇ ಕಿಟ್, 300 ಕೈಗವಸು, 330 ಮುಖಗವಸು, ಪುಟ್ ಆಪ್ರೇಟರ್ ಸೈನಿಟೈಸರ್, ಫಲ್ಸ್ ಆಕ್ಸಿಮೀಟರ್, ಸ್ಟೇಟಸ್‍ಸ್ಕೋಪ್, ಥರ್ಮಲ್‍ಸ್ಕಾನರ್, ಬಿ.ಪಿ.ಆಪ್‍ರೇಟರ್ಸ್, ಗ್ಲೋಕೊಮಿಟರ್, 500 ಗ್ಲೋಕೊಮಿಟರ್ ಸ್ಟೀಪ್ಸ್, ಸೈನಿಟೈಸರ್ ಸ್ಪ್ರೇ, 200 ಆಕ್ಸಿಜನ್ ಮಾಸ್ಕ್, 200 ನೇಜಲ್ದ ಕ್ಯಾನುಲಾ, 500 ಸರ್ಜಿಕಲ್ ಮಾಸ್ಕ್, 500 ಸರ್ಜಿಕಲ್ ಕ್ಯಾಪ್‍ಗಳನ್ನು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ದಿಲಶಾದ ಮಹಾತ, ಬಿಇಓ ಅಜಿತ ಮನ್ನಿಕೇರಿ, ಸಿಪಿಐ ವೆಂಕಟೇಶ ಮುರನಾಳ, ಪಿಎಸ್‍ಐ ಹಾಲಪ್ಪ ಬಾಲದಂಡಿ, ಡಾ.ಮಹೇಶ ಕೋಣಿ, ಆರೋಗ್ಯ ನಿರೀಕ್ಷಕ ಶಂಕರ ಅಂಗಡಿ, ಪ್ರಾಂಶುಪಾಲ ಭಾವಿಕಟ್ಟಿ ಸೇರಿದಂತೆ ಅನೇಕರು ಇದ್ದರು.

ಕೋರೋನಾ ವೈರಸ್‍ನಿಂದ ಯಾರೂ ಭಯಪಡಬೇಡಿ, ಈಗಾಗಲೇ ಕೋವಿಡ್ ಕಾಳಜಿ ಕೇಂದ್ರಗಳಲ್ಲಿ ದಾಖಲಾಗಿರುವ ಎಲ್ಲ ಸೋಂಕಿತರಿಗೆ ಅಗತ್ಯವಿರುವ ಕಿಟ್‍ಗಳನ್ನು ನೀಡಲಾಗುತ್ತಿದೆ. ಜೊತೆಗೆ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಯವರ ಸುರಕ್ಷತೆಗಾಗಿಯೂ ಮೆಡಿಕಲ್ ಕಿಟ್‍ಗಳನ್ನು ನೀಡಲಾಗುತ್ತಿದೆ. ಸಿಬ್ಬಂದಿಗಳು ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಿ ಆವರನ್ನು ತಮ್ಮ ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಾ ಅವರಿಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡಬೇಕು. ಮಲ್ಲಾಪೂರ ಪಿ.ಜಿ. ಮತ್ತು ಮೂಡಲಗಿಯಲ್ಲಿ ಆಕ್ಸಿಜನ್ ಪೂರೈಕೆಯ ಘಟಕಗಳನ್ನು ಪ್ರಾರಂಭಿಸಲಾಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬೆಡ್‍ಗಳನ್ನು ವಿಸ್ತರಿಸಿ ಅಲ್ಲಿಯೂ ಕೇಂದ್ರಿಯ ಆಮ್ಲಜನಕ ಪೂರೈಕೆ ಘಟಕವನ್ನು ಪ್ರಾರಂಭಿಸಲಾಗುವುದು. ಸೋಂಕಿತರು ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ-ಶಾಸಕ ಬಾಲಚಂದ್ರ ಜಾರಕಿಹೊಳಿ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ