Breaking News

ನಮ್ಮ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ : ಶಾಸಕ ಬಾಲಚಂದ್ರ ಜಾರಕಿಹೊಳಿ


ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಶುಕ್ರವಾರದಂದು ಇಲ್ಲಿಯ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ ವೃತ್ತದಲ್ಲಿ ಕನ್ನಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿದರೆ ಖಂಡಿತವಾಗಿಯೂ ಜಾಗತಿಕ ಮಟ್ಟದಲ್ಲಿ ಮುಂದೆ ಬರಲು ಸಾಧ್ಯವಿದೆ ಎಂದು ಹೇಳಿದರು.

ಕನ್ನಡ ಭಾಷೆಯು ನಮ್ಮ ಮಾತೃಭಾಷೆಯಾಗಿದ್ದು, ಕನ್ನಡ ಭಾಷೆಯ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷಾ ವಿಷಯಗಳು ಬಂದರೆ ಯಾವ ಹಿಂಜರಿಕೆ ನೋಡದೇ ಒಗ್ಗಟ್ಟಿನ ಮಂತ್ರ ಜಪಿಸಬೇಕು. ಯಾರ ಮುಲಾಜು ಬೇಡ. ನಮ್ಮ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ. ಕರ್ನಾಟಕಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಪಕ್ಷ- ಜಾತಿ ಬೇಧ ಮಾಡದೇ ಒಂದಾಗಿ ಕೈ ಜೋಡಿಸುವಂತೆಯೂ ಅವರು ಕರೆ ನೀಡಿದರು.

ಮೂಡಲಗಿ ಪಟ್ಟಣದಲ್ಲಿ ಪ್ರತಿ ವರ್ಷವೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತೀ ಅದ್ದೂರಿಯಾಗಿ ಆಚರಿಸುತ್ತ ಬರುತ್ತಿದ್ದೇವೆ. ಮುಂದೆಯೂ ಸಹ ನವೆಂಬರ್ ತಿಂಗಳಲ್ಲಿ ರಾಜ್ಯೋತ್ಸವವನ್ನು ಆಚರಿಸುವ ಮೂಲಕ ಕನ್ನಡ ನಾಡು- ನುಡಿಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದರು.

ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಪೂಜೆ ಸಲ್ಲಿಸಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.

ಸಂಗೊಳ್ಳಿ ರಾಯಣ್ಣನ ವೃತ್ತದಿಂದ ಆರಂಭಗೊಂಡ ಬೃಹತ್ ಮೆರವಣಿಗೆಯು ಕಲ್ಮೇಶ್ವರ ವೃತ್ತತನಕ ಶಾಲಾ ಬಾಲಕ- ಬಾಲಕಿಯರಿಂದ ನಾಡು ನುಡಿ ಬಿಂಬಿಸುವ ರೂಪಕಗಳು ಮೆರವಣಿಗೆಯಲ್ಲಿ ಗಮನ ಸೆಳೆದವು. ವಿವಿಧ ವಾದ್ಯ ವೃಂದದವರು ಕನ್ನಡ ಹಾಡುಗಳಿಗೆ ನರ್ತನ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವದ ಮೆರವಣಿಗೆಯು ನೆರೆದ ಕನ್ನಡಾಭಿಮಾನಿಗಳನ್ನು ಆಕರ್ಷಿಸಿತು.

ಈ ಸಂದರ್ಭದಲ್ಲಿ ಮರೆಪ್ಪ ಮರೆಪ್ಪಗೋಳ, ಅನ್ವರ ನದಾಫ, ಡಾ. ಎಸ್.ಎಸ್. ಪಾಟೀಲ, ರವಿ ಸೋನವಾಲಕರ, ರವಿ ಸಣ್ಣಕ್ಕಿ, ಸಂತೋಷ ಸೋನವಾಲಕರ, ರಾಮಣ್ಣ ಹಂದಿಗುಂದ, ಹಣಮಂತ ಗುಡ್ಲಮನಿ, ಸಂತೋಷ ಪಾರ್ಶಿ, ಭೀಮಶಿ ತಳವಾರ, ಈರಪ್ಪ ಢವಳೇಶ್ವರ, ಸುಭಾಸ ಗೋಡ್ಯಾಗೋಳ, ಅನಿಲ ಗಸ್ತಿ, ಚೇತನ ಹೊಸಕೋಟಿ, ಸಚಿನ ಲಂಕೆಪ್ಪನವರ, ಪ್ರಜ್ವಲ ಪುಠಾಣಿ, ಸಂಜು ಯಕ್ಸಂಬಿ ಪುರಸಭೆಯ ಸದಸ್ಯರು, ಅಧಿಕಾರಿಗಳು, ಕನ್ನಡಪರ ಸಂಘಟನೆಗಳು,ವಿವಿಧ ಶಾಲೆಗಳ ಮುಖ್ಯಸ್ಥರು, ಶಿಕ್ಷಕರು, ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆದ್ದರು, ಮೈ ಮರೆಯದ ಸಂಘಟನೆಗಳು: ಹಳ್ಳಿಗಳಿಗೆ ತೆರಳಿ ಮತದಾರರಿಗೆ ಕೃತಜ್ಞತೆ

ಹಾವೇರಿ: ಶಿಗ್ಗಾವಿ-ಸವಣೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ‌ಅಭ್ಯರ್ಥಿ ಲಕ್ಷಕ್ಕೂ ಅಧಿಕ‌ ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದರೂ, ಸಂಘಟನೆಗಳು ಮಾತ್ರ ಮೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ