ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 28 ರಿಂದ 15 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಬುಧವಾರದಂದು ಬೆಳಿಗ್ಗೆ ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಕೃಷಿ ಬಳಕೆಗಾಗಿ ಮಾತ್ರ ನೀರನ್ನು ಬಿಡುಗಡೆ ಮಾಡಲು ಉದ್ಧೇಶಿಸಿರುವುದಾಗಿ ಹೇಳಿದರು.
ಘಟಪ್ರಭಾ ಬಲದಂಡೆ ಕಾಲುವೆಗೆ 2100 ಕ್ಯೂಸೆಕ್ಸ್, ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಸಿಬಿಸಿ ಕಾಲುವೆಗೆ 500 ಕ್ಯೂಸೆಕ್ಸ್ ನಂತೆ ಒಟ್ಟು 15 ದಿನಗಳವರೆಗೆ ನೀರನ್ನು ಹರಿಸಲಾಗುತ್ತಿದೆ. ಒಟ್ಟಾರೆ 7.50 ಟಿಎಂಸಿ ನೀರನ್ನು ಹಿಡಕಲ್ ಜಲಾಶಯದಿಂದ ಮೂರು ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದವರು ಹೇಳಿದ್ದಾರೆ.
ಗೋಕಾಕ, ಮೂಡಲಗಿ, ತಾಯಬಾಗ, ಚಿಕ್ಕೋಡಿ, ಹುಕ್ಕೇರಿ ಮತ್ತು ಮುಧೋಳ, ತಾಲೂಕಿನ ರೈತ ಸಮುದಾಯದವರಿಗೆ ಕೃಷಿ ಉದ್ದೇಶಗಳಿಗೆ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಈ ಸಂಬಂಧ ಇದೇ ದಿ. 30 ರಂದು ಅಧಿಕಾರಿಗಳ ಸಭೆಯನ್ನು ಸಚಿವರು ಕರೆದಿದ್ದಾರೆ. ನಮ್ಮ ಮನವಿಯ ಮೇರೆಗೆ ಸಚಿವ ಸತೀಶ ಜಾರಕಿಹೊಳಿಯವರು ಸಭೆಗೂ ಮುನ್ನವೇ ಬರುವ ಗುರುವಾರದಂದು ಬೆಳಿಗ್ಗೆ ಹಿಡಕಲ್ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುವಂತೆ ಅಧಿಕಾರಿಗಳು ಸೂಚನೆಯನ್ನು ನೀಡಿದ್ದು, ಅದಕ್ಕಾಗಿ ಸಮಸ್ತ ಗೋಕಾಕ- ಮೂಡಲಗಿ ತಾಲ್ಲೂಕಿನ ರೈತರ ಪರವಾಗಿ ಸಚಿವರಿಗೆ ಕೃತಜ್ಞತೆಯನ್ನು ಅರ್ಪಿಸುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ.
ಈಗಾಗಲೇ ಹಿಡಕಲ್ ಜಲಾಶಯದಲ್ಲಿ ಇಂದಿನ ಮಾಹಿತಿಯಂತೆ 48.79 ಟಿಎಂಸಿ ನೀರಿನ ಉಪಯುಕ್ತ ಸಂಗ್ರಹವಿದ್ದು, ದಿನವೊಂದಕ್ಕೆ 0.5 ಟಿಎಂಸಿ ಯಂತೆ ಒಟ್ಟು ೧೫ ದಿನಗಳವರೆಗೆ 7.50 ಟಿಎಂಸಿ ನೀರನ್ನು ರೈತರ ಕೃಷಿ ಚಟುವಟಿಕೆಗಳ ಬಳಕೆಗಾಗಿ ನೀರನ್ನು ನಾಳೆ ಗುರುವಾರದಿಂದಲೇ ಬಿಡಲು ಸಚಿವ ಸತೀಶ್ ಜಾರಕಿಹೊಳಿ ಅವರು ಸೂಕ್ತ ಕ್ರಮಗಳನ್ನು ಕೈಗೊಂಡು ಈ ಸಂಬಂಧ ಅಧಿಕಾರಿಗಳಿಗೆ ಸೂಚಿಸಿದ್ದಾರೆಂದು ಅವರು ಹೇಳಿದ್ದಾರೆ.