Breaking News

೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷಿಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ


ಘಟಪ್ರಭಾ- ೧೯೪೯ ರಲ್ಲಿ ಆರಂಭಗೊಂಡ ಗಣೇಶವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿ ಶಿಕ್ಷಣದ ಅರಿವು ಮೂಡಿಸಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದ್ದಲ್ಲದೇ ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿದ್ದು, ಈ ಶಾಲೆಗೆ ಈಗ ೭೫ ರ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಶಾಲೆಯ ಸಾಧನೆಗಳನ್ನು ಶ್ಲಾಘಿಸಿದರು.

ಮಂಗಳವಾರದಂದು ಇಲ್ಲಿಗೆ ಸಮೀಪದ ಗಣೇಶವಾಡಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವಿದ್ದರೆ ಸಮಾಜದಲ್ಲಿ ಯಾವುದು ಒಳ್ಳೇಯದು? ಯಾವುದು ಕೆಟ್ಟದ್ದು? ಎಂಬ ಅರಿಯು ಮೂಡುತ್ತದೆ. ಕಾರಣ ಇಂದಿನ ತಂತ್ರಜ್ಞಾನದ ಯುಗದಲ್ಲಿ ಶಿಕ್ಷಣ ಅತ್ಯಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಕಳೆದ ೩೦- ೪೦ ವರ್ಷಗಳ ಇತಿಹಾಸವನ್ನು ಅವಲೋಕಿಸಿದಾಗ ಆಗಿನ ಕಾಲದಲ್ಲಿ ಜನರು ಶಿಕ್ಷಣಕ್ಕೆ ಒತ್ತು ಕೊಡುತ್ತಿರಲಿಲ್ಲ. ಅದರ ಅರಿವು ಅವರಿಗೆ ತಿಳಿದಿರಲಿಲ್ಲ. ಈಗ ಕಾಲ ಬದಲಾವಣೆಯತ್ತ ಸಾಗುತ್ತಿದೆ. ಪ್ರತಿಯೊಬ್ಬರೂ ಶಿಕ್ಷಣದ ಕಡೆಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಕಾಲವು ಬದಲಾಗುತ್ತಿದ್ದಂತೆಯೇ ಜನರು ಸಹ ಬದಲಾವಣೆಯನ್ನು ಬಯಸುತ್ತಿದ್ದಾರೆ. ಅದು ಯಾವುದೇ ಕ್ಷೇತ್ರ ಆಗಬಹುದು. ಆನರು ಈಗ ಹೆಚ್ಚೆಚ್ಚು ಪ್ರಜ್ಞಾವಂತರಾಗುತ್ತಿದ್ದಾರೆ. ಇದಕ್ಕೆ ಕಾರಣ ವಿದ್ಯೆ ಎಂಬ ಅಸ್ತç.ಈಗಿರುವ ಪಾಲಕರು ಶಿಕ್ಷಣಕ್ಕೆ ಪ್ರಾಮುಖ್ಯತೆಯನ್ನು ಕೊಡುತ್ತಿದ್ದಾರೆ. ಇದರಿಂದ ಸಮಾಜವು ಸಹ ಸುಧಾರಣೆಗೊಳ್ಳುತ್ತಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಪ್ರತಿಪಾದಿಸಿದ ತತ್ವ- ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ. ಶಿಕ್ಷಣ, ಸಂಘಟನೆ, ಹೋರಾಟದಿಂದ ಸಮಾಜವು ಬಲಿಷ್ಟವಾಗುತ್ತಿದೆ ಎಂದು ಅವರು ತಿಳಿಸಿದರು.

೭೫ರ ಸಂಭ್ರಮದಲ್ಲಿರುವ ಈ ಶಾಲೆಗೆ ಎರಡು ಕೊಠಡಿಗಳನ್ನು ನಿರ್ಮಿಸಿ ಕೊಡಲಾಗುವುದು. ಗ್ರಾಮಸ್ಥರ ಬೇಡಿಕೆಯಂತೆ ಗಣೇಶವಾಡಿ ದ್ವಾರ ಬಾಗಿಲು ನಿರ್ಮಾಣ ಕಾರ್ಯಕ್ಕೆ ಕೈಲಾದ ಸಹಾಯ ಮಾಡಲಾಗುವುದು. ಪೋಡಿ ಮುಕ್ತ ಗ್ರಾಮವನ್ನಾಗಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಸಾಧಕ- ಬಾಧಕ ವರದಿಯನ್ನು ನೀಡಬೇಕು. ಸಾಮಾನ್ಯ ರೈತರಿಗೂ ಇದರಿಂದ ಅನುಕೂಲವಾಗಬೇಕು. ಎರಡು ಗುಂಟೆ ಜಮೀನು ಹೊಂದಿದವರು ಈಗ ಎಕರೆಗಟ್ಟಲೇ ಜಮೀನು ಅನುಭವಿಸುತ್ತಿದ್ದಾರೆ. ಇದರ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಇದೇ ರೀತಿಯಾಗಿ ಖಂಡ್ರಟ್ಟಿ ಗ್ರಾಮದಲ್ಲಿಯೂ ಈ ರೀತಿಯಾಗಿ ನಡೆದಿತ್ತು. ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ಮಾಡಿ ಕೊನೆಗೂ ಮೂರು ವರ್ಷಕ್ಕೆ ಖಂಡ್ರಟ್ಟಿ ಪೋಡಿ ಮುಕ್ತ ಗ್ರಾಮವಾಯಿತು. ಗಣೇಶವಾಡಿ ಗ್ರಾಮವನ್ನು ಸಹ ಪೋಡಿ ಮುಕ್ತ ಗ್ರಾಮವನ್ನಾಗಿ ಪರಿವರ್ತಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದರು. ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಗಳಿಗೆ ಹಂತ- ಹಂತವಾಗಿ ಸ್ಪಂದಿಸುವ ಆಶಾಭಾವನೆಯನ್ನು ವ್ಯಕ್ತಪಡಿಸಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಿದರು.

ಕಾರ್ಯಕ್ರಮದ ಸಾನಿಧ್ಯವನ್ನು ಅರಭಾವಿ ದುರದುಂಡೀಶ್ವರ ಮಠದ ಗುರು ಬಸವಲಿಂಗ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು.

ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಅಪ್ಪಯ್ಯ ಮಾಳ್ಯಾಗೋಳ ವಹಿಸಿದ್ದರು.

ವೇದಿಕೆಯಲ್ಲಿ ಗೋಕಾಕ ತಹಶೀಲ್ದಾರ ಡಾ. ಮೋಹನ ಭಸ್ಮೇ, ಮೂಡಲಗಿ ಬಿಇಓ ಅಜೀತ ಮನ್ನಿಕೇರಿ, ಪ್ರಭಾ ಶುಗರ್ಸ ನಿರ್ದೇಶಕ ಶಿವಲಿಂಗ ಪೂಜೇರಿ, ಮದನ ದೇಶಪಾಂಡೆ, ಕೆಂಚಪ್ಪ ಪಾಟೀಲ, ಹಣಮಂತರಾವ ದೇಶಪಾಂಡೆ, ಗ್ರಾ.ಪಂ. ಅಧ್ಯಕ್ಷ ನಾಗಪ್ಪ ಹೊರಟ್ಟಿ, ನ್ಯಾಯವಾದಿ ಸುರೇಶ ಜಾಧವ, ಶ್ರೀಪತಿ ಗಣೇಶವಾಡಿ, ಸಿದ್ರಾಮ ಮೂಲಿಮನಿ, ರಮೇಶ ಪೂಜೇರಿ, ಯಲಗೌಡ ಪಾಟೀಲ, ಶಾಲೆಯ ಪ್ರಧಾನ ಶಿಕ್ಷಕ ಆರ್.ಡಿ. ಪತ್ತಾರ, ಆರ್.ಕೆ.ಹಂದಿಗುಂದ, ಗ್ರಾಮ ಪಂಚಾಯತಿ ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಸುತ್ತಮುತ್ತಲಿನ ಅನೇಕ ಜನ ಮುಖಂಡರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಅಜೀತ ಮನ್ನಿಕೇರಿ ಅವರ ಅವಿರತ ಪ್ರಯತ್ನದಿಂದ ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ- ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ*

*ತಿಗಡಿ ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ತ ಅದ್ದೂರಿಯಾಗಿ ನಡೆದ ತಾಲ್ಲೂಕು ಮಟ್ಟದ ಗುರು ಸ್ಮರಣೆ ಕಾರ್ಯಕ್ರಮ* *ಡಿಡಿಪಿಐ ಆಗಿ ಪದೋನ್ನತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ