*ಗೋಕಾಕ*- ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರನ್ನು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ಮಾಡಿದರು.

ನಗರದ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿಯವರ ನಿವಾಸದಲ್ಲಿ ಸಚಿವ ಜೋಷಿಯವರನ್ನು ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಇಬ್ಬರು ಸುದೀರ್ಘವಾದ ರಾಜಕೀಯ ಚರ್ಚೆಯನ್ನು ನಡೆಸಿದರು.
ಬಾಲಚಂದ್ರ ಜಾರಕಿಹೊಳಿಯವರ ಸ್ವ- ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಯವರು ಪ್ರಲ್ಹಾದ ಜೋಷಿಯವರನ್ನು ಸತ್ಕರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮುಖಂಡ ಜಿರಲಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
CKNEWSKANNADA / BRASTACHARDARSHAN CK NEWS KANNADA