Breaking News

*ಇಂದಿನಿಂದ ಘಟಪ್ರಭಾ ಬಲದಂಡೆ ಕಾಲುವೆಗೆ 1 ಟಿಎಂಸಿ ನೀರು – ಶಾಸಕ ಬಾಲಚಂದ್ರ ಜಾರಕಿಹೊಳಿ*


*ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ:* ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಇಂದಿನಿಂದ (ಜೂನ್ 10 ರಿಂದ ಸಂಜೆ 6.00 ಗಂಟೆಯಿಂದ ) ಸಚಿವ ಸತೀಶ್ ಜಾರಕಿಹೊಳಿಯವರ ಸೂಚನೆಯಂತೆ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದ್ದಾರೆ.

ತೀವ್ರ ಬರ ಮತ್ತು ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ನೀರಿಲ್ಲದೇ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ 1 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತದೆ.

ಜನ ಮತ್ತು ಜಾನುವಾರುಗಳಿಗೆ ನೀರನ್ನು ಹರಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಕೋರಿಕೆಯನ್ನು ಮಾಡಿದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗೆ ನೀರನ್ನು ಬಿಡುಗಡೆ ಮಾಡಲಾಗಲು ಕ್ರಮ ಕೈಗೊಂಡಿದ್ದಾರೆ.

ಘಟಪ್ರಭಾ ಬಲದಂಡೆ ಕಾಲುವೆಯ ದುರಸ್ತಿ ಕಾಮಗಾರಿಯು ನಡೆಯುತ್ತಿದ್ದರಿಂದ ಕಳೆದ ಸಲ ನೀರನ್ನು ಬಿಡಲಾಗಿಲ್ಲ. ಈಗ ಕಾಲುವೆಯ ಕಾಮಗಾರಿಯು ಪೂರ್ತಿಯಾಗಿದ್ದರಿಂದ ನೀರನ್ನು ಹರಿಸಲಾಗುತ್ತಿದೆ. ಕಾಲುವೆ ವ್ಯಾಪ್ತಿಯಲ್ಲಿನ ಕೆಲವು ಪ್ರದೇಶಗಳಿಗೆ ಮಳೆಯಾಗಿದ್ದು, ಇನ್ನೂ ಕೆಲವೆಡೆ ಮಳೆಯಾಗಿರುವುದಿಲ್ಲ. ಆದ್ದರಿಂದ

ಹಿಡ್ಕಲ್ ಜಲಾಶಯದಿಂದ ಹರಿಸಲಾಗುತ್ತಿರುವ ನೀರು ಕೇವಲ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಮಾತ್ರ. ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ 

ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಸಾರ್ವಜನಿಕರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ.

ಸಾರ್ವಜನಿಕರು ಮತ್ತು ಜಾನುವಾರಗಳ ಹಿತದೃಷ್ಟಿಯಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಲು ಕ್ರಮ ಕೈಗೊಂಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕೃತಜ್ಞತೆಯನ್ನು ಅರ್ಪಿಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದರಾಮಯ್ಯ ತೀರ್ಮಾನ: ನಾಳೆ ಅಧಿಕೃತ ಘೋಷಣೆ ಸಾಧ್ಯತೆ

ಬೆಂಗಳೂರು : ತೀವ್ರ ಕುತೂಹಲ ಕೆರಳಸಿದ್ದ ಕರ್ನಾಟಕ ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ