Breaking News

ಘಟಪ್ರಭಾ ಕಾಲುವೆಗೆ ಕೂಡಲೇ ನೀರು ಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ


ಮೂಡಲಗಿ; ಬರಗಾಲದ ಛಾಯೆಗೆ ಒಳಗಾಗಿರುವ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗೆ ಕೂಡಲೇ ನೀರು ಹರಿಸುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರಲ್ಲಿ ಮನವಿ ಮಾಡಿಕೊಂಡರು.

ಗುರುವಾರ, ತಾಲ್ಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಅಶೋಕ ಖಂಡ್ರಟ್ಟಿ ಅಭಿಮಾನಿ ಬಳಗದವರು ನೀಡಿರುವ ಅದ್ದೂರಿಯಾದ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರು ಮತ್ತು ದನ- ಕರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆ, ಹಳ್ಳಕ್ಕೆ ನೀರನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಅವರು ಸಚಿವರಲ್ಲಿ ಕೋರಿದರು.

ಜೂನ್- ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆಯಾಗಿದೆ. ಇದರಿಂದ ಬರಗಾಲಕ್ಕೆ ತುತ್ತಾಗಿದ್ದೇವೆ. ಮಳೆಯಾಗದೇ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಹಿಡಕಲ್ ಜಲಾಶಯದಲ್ಲಿ 14 ಟಿಎಂಸಿಯಷ್ಟು ನೀರು ಸಂಗ್ರಹವಿದ್ದು, ಜನ- ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಹಳ್ಳಗಳಿಗೆ ನೀರನ್ನು ಹರಿಸುವಂತೆ ಅವರು ಸಚಿವರನ್ನು ಆಗ್ರಹಿಸಿದರು.

ಕಾಲುವೆಗಳು ಮತ್ತು ಹಳ್ಳಗಳಿಗೆ ಸುಮಾರು 6 ಟಿಎಂಸಿಯಷ್ಟು ನೀರನ್ನು ಹಿಡಕಲ್ ಜಲಾಶಯದಿಂದ ಬಿಡುಗಡೆ ಮಾಡಿದರೆ ಸಾರ್ವಜನಿಕರು – ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ದುರದುಂಡಿ ಗ್ರಾಮದ ಅಶೋಕ ಖಂಡ್ರಟ್ಟಿಯವರು ಕಳೆದ 9 ವರ್ಷಗಳಿಂದ ಹಿಡಕಲ್ ಡ್ಯಾಂ ನೀರು ಬಳಕೆದಾರರ ಮಹಾಮಂಡಳಿಯ ಅಧ್ಯಕ್ಷರಾಗಿ ಉತ್ತಮವಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ ನೀರು ಬಳಕೆದಾರರ ಶೃಂಗ ಮಹಾಮಂಡಳಿಯ ನಿರ್ದೇಶಕ ಸ್ಥಾನವನ್ನು ನೀಡಲಾಗಿದೆ. ಈ ಮೂಲಕ ಭಗೀರಥ- ಉಪ್ಪಾರ ಸಮಾಜಕ್ಕೆ ಪ್ರಾಶಸ್ತ್ಯ ಕೊಟ್ಟಂತಾಗಿದೆ. ಖಂಡ್ರಟ್ಟಿಯವರ ಸೇವೆಯು ಇನ್ನು ರಾಜ್ಯ ಮಟ್ಟದಲ್ಲಿ ವಿಸ್ತಾರವಾಗಿದೆ ಎಂದು ಶ್ಲಾಘಿಸಿದರು.

ಹಳ್ಳೂರ ಗ್ರಾಮಸ್ಥರು ಅನೇಕ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ಮುಂದಿನ‌ ದಿನಗಳಲ್ಲಿ ಜನರ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು. ರಸ್ತೆಗಳ ನಿರ್ಮಾಣ, ರೈತವರ್ಗದ ತೋಟ-ಪಟ್ಟಿ ರಸ್ತೆಗಳ ಅಭಿವೃದ್ಧಿ , ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳನ್ನು ಕೈಗೊಳ್ಳುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭರವಸೆಯನ್ನು ನೀಡಿದರು.

ಬೆಂಗಳೂರು ನೀರು ಬಳಕೆದಾರರ ಶೃಂಗ ಮಹಾ ಮಂಡಳಿಯ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಹಿಡಕಲ್ ಡ್ಯಾಂ ಮಹಾಮಂಡಳಿಯ ಅಧ್ಯಕ್ಷ ಅಶೋಕ ಖಂಡ್ರಟ್ಟಿ ಮತ್ತವರ ಅಭಿಮಾನಿ ಬಳಗದವರು ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಗೆ ಬೃಹತ್ ಪ್ರಮಾಣದ ಹೂ- ಹಾರವನ್ನು ಹಾಕಿ ಅದ್ದೂರಿಯಾಗಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಅರಭಾವಿ ಕ್ಷೇತ್ರದ ಹಲವು ಮುಖಂಡರು, ಮಾಜಿ- ಹಾಲಿ ಚುನಾಯಿತ ಪ್ರತಿನಿಧಿಗಳು, ಸಹಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

*ಇಂದಿನಿಂದ ಘಟಪ್ರಭಾ ಬಲದಂಡೆ ಕಾಲುವೆಗೆ 1 ಟಿಎಂಸಿ ನೀರು – ಶಾಸಕ ಬಾಲಚಂದ್ರ ಜಾರಕಿಹೊಳಿ*

*ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಕೃತಜ್ಞತೆ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ:* ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ