ಗೋಕಾಕ : ಅರಭಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ಅವರ ಆಪ್ತ ಸಹಾಯಕರು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನದಿ ದಡದ ಗ್ರಾಮಸ್ಥರಿಗೆ ಪ್ರವಾಹದ ಆಂತಕ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ಮೇರೆಗೆ ಆಪ್ತ ಸಹಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ಕಾಳಜಿ ಕೇಂದ್ರದಲ್ಲಿ ಇರುವವ ಜನರಿಗೆ ಮೂಲ ಸೌಕರ್ಯ ಒದಗಿಸುತ್ತಿದ್ದಾರೆ.
ಪಂಚಾಯತಿ ಸಿಬ್ಬಂದಿಗಳು, ಶಾಲಾ ಸಿಬ್ಬಂದಿಗಳು ಹಾಗೂ ವೈದ್ಯಕೀಯ ಇಲಾಖೆ ಅಧಿಕಾರಿಗಳ ಜತೆಗೆ ಶಾಸಕ ಆಪ್ತ ಸಹಾಯಕರು ಕ್ಷೇತ್ರದಲ್ಲಿ ನಾಲ್ಕು ತಂಡಗಳನ್ನು ರಚಿಸುವ ಮೂಲಕ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅವಶ್ಯವಿರುವ ಮೂಲ ಸೌಕರ್ಯ ಒದಗಿಸಿದರು.
ಕೊರೊನಾ ಸೋಂಕು ಸಹ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ , ಸ್ಯಾನಿಟೈಸರ್, ವೈದ್ಯಕೀಯ ಸೌಲಭ್ಯ, ಬಿಸಿ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಜತೆಗೆ ದನ ಕರುಗಳಿಗೆ ಮೇವಿನ ವ್ಯವಸ್ಥೆಯನ್ನು ಕೂಡಾ ಮಾಡಿದ್ದಾರೆ