ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದ್ದು, ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ, ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಬಿಎಸ್ವೈ ಪರ ಮಠಾಧೀಶರು, ರಾಜಕೀಯ ನಾಯಕರು ಹೇಳಿಕೆ ನೀಡುತ್ತಿದ್ದು, ಪ್ರತಿಭಟನೆಗೆ ಕೂಡ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೊನೆಗೂ ‘ಸಿಎಂ ಮೌನ ಮುರಿದಿದ್ದು, ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ, ಈ ವಿಚಾರದಲ್ಲಿ ಯಾರೂ ಕೂಡ ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಯಡಿಯೂರಪ್ಪ ‘ ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ.
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.
ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ— B.S. Yediyurappa (@BSYBJP) July 21, 2021
ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ’ ಎಂದಿದ್ದಾರೆ.