ವಿಜಯಪುರ : ನನಗೆ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿಸಿದ್ದು ಬಿ.ಎಸ್. ಯಡಿಯೂರಪ್ಪ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನನಗೆ ಮುಖ್ಯಮಂತ್ರಿ ಆಗುವ ಅವಕಾಶವಿತ್ತು. ಆದರೆ ಯಡಿಯೂರಪ್ಪ ನನಗೆ ಅವಕಾಶ ತಪ್ಪಿಸಿದರು. ಯತ್ನಾಳ್ ಅವರನ್ನು ಸಿಎಂ ಮಾಡಿದ್ರೆ ಮೂರು ತಿಂಗಳಲ್ಲಿ ಸರ್ಕಾರ ಕೆಡವುತ್ತೆನೆಂದು ಕೇಂದ್ರದ ನಾಯಕರ ಮುಂದೆ ಯಡಿಯೂರಪ್ಪ ಬೆದರಿಕೆ ಹಾಕಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.
ನನಗೆ ಮುಖ್ಯಮಂತ್ರಿ ಆಗುವ ಅವಕಾಶವನ್ನು ಯಡಿಯೂರಪ್ಪ ತಪ್ಪಿಸಿದ್ದಾರೆ.
ಈ ಹಿಂದೆ ನಾನೇನೂ ದೆಹಲಿಯಲ್ಲಿ ಲಾಬಿ ಮಾಡಿ ಕೇಂದ್ರದಲ್ಲಿ ಸಚಿವ ಆಗಿರಲಿಲ್ಲ. ದೆಹಲಿ ಲಾಬಿ ಮಾಡಿ ಮಂತ್ರಿಯಾಗುವಷ್ಟು ಕೆಳಮಟ್ಟದ ರಾಜಕಾರಣಿಯಲ್ಲ. ಯಡಿಯೂರಪ್ಪ ಒಬ್ಬರೇ ಬೊಮ್ಮಾಯಿ ಅವರನ್ನು ಸಿಎಂ ಮಾಡಿಲ್ಲ ಎಂದು ಏಳಿದ್ದಾರೆ.